ಗದಗ

ಇಂದು ತೋಂಟದಾರ್ಯ ಲಘು ರಥೋತ್ಸವ

Published On :

ಗದಗ: ಜ. ತೋಂಟದಾರ್ಯ ಜಾತ್ರಾ ಮಹೋತ್ಸವದ 3ನೇ ದಿನವಾದ ಏ. 16ರ ಸಂಜೆ 6.30ಕ್ಕೆ ಲಘುರಥೋತ್ಸವ ನಡೆಯಲಿದೆ. ಇದಕ್ಕೂ ಮುನ್ನ ಜ. ತೋಂಟದ ಸಿದ್ಧಲಿಂಗ ಸ್ವಾಮಿಗಳವರು ನೇತೃತ್ವದಲ್ಲಿ ಸಂಜೆ 4ಕ್ಕೆ ಬಸವೇಶ್ವರ ನಗರದ ಕುಬಸದ ಬಂಧುಗಳ ನಿವಾಸಕ್ಕೆ ತೆರಳಿ ಪ್ರಸಾದ ಪೂಜೆ ನಂತರ ಮೆರವಣಿಗೆ ಮೂಲಕ ಶ್ರೀಮಠಕ್ಕೆ ಧಾವಿಸುವರು. ಸಂಜೆ 6.30ಕ್ಕೆ ಲಘುರಥೋತ್ಸವ ನಂತರ ರಾತ್ರಿ 8ಕ್ಕೆ ಜ. ತೋಂಟದ ಸಿದ್ಧಲಿಂಗ ಸ್ವಾಮಿಗಳವರ ಸಾನ್ನಿಧ್ಯದಲ್ಲಿ ನಡೆವ ಸಮಾರಂಭದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಜ. ಬಸವಜಯ ಮೃತ್ಯುಂಜಯ ಶ್ರೀಗಳು ಸಮ್ಮುಖ ವಹಿಸುವರು.  ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಮೈಸೂರಿನ ವಿಶ್ರಾಂತ ಕುಲಪತಿ ಡಾ. ಮಹಾದೇವಪ್ಪ, ಧಾರವಾಡ ಕೃಷಿ ವಿವಿ ನೂತನ ಕುಲಪತಿ ಡಾ. ಡಿ.ಪಿ. ಬಿರಾದಾರ, ರಾಣಿಚನ್ನಮ್ಮ ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ವಿಶ್ರಾಂತ ಕಾರ್ಯದರ್ಶಿ ಡಾ. ಶಿವಾನಂದ ಜಾಮದಾರ ಅವರಿಗೆ ಸನ್ಮಾನ ನಡೆಯಲಿದೆ. ಲಿಂಗಾಯತ ಅಧ್ಯಯನ ಸಂಸ್ಥೆಯಿಂದ ಪ್ರಕಟಿತ ಡಾ. ಎಂ.ಎಂ. ಕಲಬುರ್ಗಿ ಅವರು ಬರೆದ ಏಕೋತ್ತಸ್ಥಲ, ಡಾ. ವೀರಣ್ಣ ರಾಜೂರು ಬರೆದ ವಚನ ಸಾರ, ಡಾ. ಕೆ.ಎನ್. ಚಟ್ನೀಸ ಬರೆದ ಶಿವಾಜಿ-ಮಲ್ಲಮ್ಮಾಜಿ ಸಮರೋತ್ಸವ (ದ್ವಿತೀಯ ಮುದ್ರಣ), ಬೆಟಗೇರಿಯ ರಾಮಣ್ಣ ಬ್ಯಾಟಿ ಬರೆದ ಬಸವ ಪುರಾಣ ಗ್ರಂಥಗಳ ಬಿಡುಗಡೆ ನಡೆಯಲಿದೆ. ಬಳ್ಳಾರಿಯ ಲೋಹಿಯಾ ಪ್ರಕಾಶನದ ಸಿ. ಚನ್ನಬಸವಣ್ಣ ಅವರು ಗ್ರಂಥಗಳ ಬಿಡುಗಡೆ ಮಾಡುವರು.
ಸಾಹಿತಿ ಡಾ. ವೀರಣ್ಣ ರಾಜೂರು ಗ್ರಂಥ ಪರಿಚಯ ನೀಡುವರು. ಹೊಂಬಳದ ಬಸವರಾಜ ಅಡವಳ್ಳಿ ಅವರಿಂದ ವಚನ ಸಂಗೀತ ನಡೆಯಲಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳೊಳ್ಳಿ, ಕಾರ್ಯದರ್ಶಿ ಎಂ.ಸಿ. ಐಲಿ, ಉಪಾಧ್ಯಕ್ಷ ಕೆ.ಎಚ್. ಬೇಲೂರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.