ಅಂಬೇಡ್ಕರ್ ತತ್ವಾದರ್ಶ ಪಾಲಿಸಿ: ಅಶೋಕ ಕುಡತಿನ್ನಿ
ಗದಗ: ಅಸ್ಪೃಶ್ಯರ ಹಕ್ಕೊತ್ತಾಯಗಳ ಜತೆಗೆ ಸಮಾಜದ ಮುಖ್ಯವಾಹಿನಿಗೆ ಶೋಷಿತ ವರ್ಗವೂ ಬರಬೇಕೆಂಬ ಆಶಯದೊಂದಿಗೆ ಸಾಕಷ್ಟು ಹೋರಾಟ ನಡೆಸಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ತತ್ವಾದರ್ಶ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕೆಂದು ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ ಉಪಾಧ್ಯಕ್ಷ ಅಶೋಕ ಕುಡತಿನ್ನಿ ಹೇಳಿದರು.
ಅವರು ಸೋಮವಾರ ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ, ಸ್ಲಂ ಮಹಿಳಾ ಸಮಿತಿ ಹಾಗೂ ಸ್ಲಂ ಯುವ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 123ನೇ ಜಯಂತಿ ಆಚರಣೆ ನಿಮಿತ್ತ ನಗರದ ಗಾಂಧಿ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ರ್ಯಾಲಿಗೆ ಚಾಲನೆ ನೀಡಿ ಹಾಗೂ ನಗರಸಭೆ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಸಲ್ಲಿಸಿ ಮಾತನಾಡಿದರು.
ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ ಮಾನ್ವಿ, ಅಧ್ಯಕ್ಷ ಅಶೋಕ ಮ್ಯಾಗೇರಿ, ಉಮಾದೇವಿ ಕಾತರಕಿ, ತಿಪ್ಪವ್ವ ಮುಟಗಾರ, ಶರೀಫ ಬಿಳೆಯಲಿ, ಯಲ್ಲಪ್ಪ ರಾಮಗಿರಿ, ಪರಶುರಾಮ ಕಾಳೆ, ಆರತಿ ಬಿಳೆಯಲಿ, ಯುಸುಫ ಮಜ್ಜಗಿ, ಅನಿಲ ಕಾಳೆ, ಇಬ್ರಾಹಿಂ ಮುಲ್ಲಾ, ವಿನಾಯಕ ತಿಮ್ಮಾಪುರ, ಮಹ್ಮದ್ ರಫೀಕ ಗಡಾದ, ಸಲೀಂ ಬಳ್ಳಾರಿ, ರಾಧಾ ಬೋಡಗಲ್ಲ, ಮೆಹರುನ್ನಿಸ್ಸಾ ಡಾಲಾಯತ, ಜಂದಿಸಾಬ ಮನಿಯಾರ, ಪರಮೇಶ ಕಾಳೆ, ಹಜರತಲಿ ಮನಿಯಾರ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

