ಶಿರಹಟ್ಟಿ: ಶೇ. 55ರಷ್ಟು ಮತದಾನ
ಶಿರಹಟ್ಟಿ: ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಗುರುವಾರ ನಡೆದ ಚುನಾವಣೆಯ ಮತದಾನ ಸಂದರ್ಭದಲ್ಲಿ ಮತಯಂತ್ರಗಳ ದೋಷ, ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿರುವುದು, ಸತ್ತವರ ಹೆಸರು ಹೊಡೆದು ಹಾಕದಿರುವುದು, ಹೊಸದಾಗಿ ಸೇರ್ಪಡೆಗೊಂಡವರ ಹೆಸರುಗಳು ಬೇರೆ ಯಾವುದೋ ಮತಗಟ್ಟೆಯಲ್ಲಿ ಮತ ಚಲಾವಣೆ ಮಾಡಲು ಪರದಾಡಿದ ಅವಘಡಗಳನ್ನು ಬಿಟ್ಟರೆ ಮತದಾನ ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಮಧ್ಯಾಹ್ನ 4ಕ್ಕೆ ಮಳೆ ಪ್ರಾರಂಭವಾಗಿದ್ದರಿಂದ ಮತದಾನ ಮಂದಗತಿಯಲ್ಲಿ ಸಾಗಿತು. ಮಳೆಯನ್ನು ಲೆಕ್ಕಿಸದೇ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಹರಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯುತ್ ಇಲ್ಲದ್ದರಿಂದ ಮತದಾನ ಕೇಂದ್ರದಲ್ಲಿ ಕತ್ತಲು ಆವರಿಸಿತ್ತು. ಚುನಾವಣಾ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯ ಬೇಜವಾಬ್ದಾರಿ ಕಂಡು ಮತದಾರರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ತಾಕೀತು ಮಾಡಿದರು. ಶಿರಹಟ್ಟಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 1,93,682 ಜನ ತಮ್ಮ ಹಕ್ಕು ಚಲಾವಣೆ ಮಾಡಿದ್ದು, ಕ್ಷೇತ್ರದಲ್ಲಿ ಶೇ. 55ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ವಿಶೇಷ ನೋಡೆಲ್ ಅಧಿಕಾರಿ ಟಿ. ದಿನೇಶ ತಿಳಿಸಿದ್ದಾರೆ.
ಕೆಲವೊಂದು ಮತಗಟ್ಟೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇಲ್ಲದ್ದರಿಂದ ಮೊಟ್ಟ ಮೊದಲ ಬಾರಿಗೆ ಉತ್ಸಾಹದಿಂದ ಮತ ಚಲಾವಣೆಗೆ ಬಂದ ಯುವಕ, ಯುವತಿಯರು ಬೇಸರಗೊಂಡರು. ಚುನಾವಣಾ ಅಧಿಕಾರಿಗಳ ಕಾರ್ಯವೈಕರಿ ಬಗ್ಗೆ ಮತ್ತು ಕರ್ತವ್ಯವನ್ನು ಅಧಿಕಾರಿಗಳು ಸರಿಯಾಗಿ ನಿಭಾಯಿಸದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಒಟ್ಟಾರೆ ಶಾಂತಿಯುತ ಮತದಾನವಾಗಿ ಚುನಾವಣೆ ಮುಕ್ತಾಯಗೊಂಡಿದ್ದು, ಚುನಾವಣಾ ಸಮರಕ್ಕೆ ವಿರಾಮ ಬಿದ್ದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

