ಮಕ್ಕಳ ಪ್ರತಿಭೆ ಪ್ರಕಟ: ಬೇಸಿಗೆ ಶಿಬಿರ ಸಹಕಾರಿ
ಗದಗ: ಮಕ್ಕಳಲ್ಲಿ ಅಡಕವಾಗಿರುವ ಸುಪ್ತ ಪ್ರತಿಭೆಗಳನ್ನು ಹೊರಹಾಕಲು ಇಂತಹ ಬೇಸಿಗೆ ಶಿಬಿರಗಳು ಸಹಕಾರಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ವಿ. ರಾಜೇಂದ್ರಪ್ರಸಾದ ಹೇಳಿದರು.
ಅವರು ಶನಿವಾರ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ನಂ. 16ರಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಚಿಣ್ಣರ ಚೈತ್ರದ ಚಿಗುರು ಬೇಸಿಗೆ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿದರು. ಈ ಮಾದರಿ ಶಿಬಿರಗಳು ಕೇವಲ ಶಹರಕ್ಕೆ ಸೀಮಿತವಾಗದೇ, ಗ್ರಾಮೀಣ ಭಾಗದಲ್ಲಿಯೂ ಆಯೋಜಿಸುವ ಮೂಲಕ ಮಕ್ಕಳ ಪ್ರಗತಿಗೆ ಕಾರಣವಾಗಬೇಕು. ಮಕ್ಕಳಲ್ಲಿ ಅಗಾಧವಾದ ಪ್ರತಿಭೆ ಅಡಗಿರುತ್ತದೆ. ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಕಾರ್ಯದರ್ಶಿ ಈ.ಬಸವರಾಜ ಮಾತನಾಡಿ, ಬೇಸಿಗೆ ಶಿಬಿರಗಳು ಕೂಡ ವ್ಯವಹಾರಿಕವಾಗಿ ಮಾರ್ಪಟ್ಟಿರುವುದು ನೋವಿನ ಸಂಗತಿ. ಹಾಗಾಗಿ ಸಾಮಾನ್ಯರಿಗೂ ತಮ್ಮ ಮಕ್ಕಳಿಗೆ ಶಿಬಿರದ ಸದುಪಯೋಗ ದೊರಕಿಸಬೇಕು ಎಂಬ ಸದುದ್ದೇಶದಿಂದ ಸಮಿತಿಯ ವತಿಯಿಂದ ರಾಜ್ಯದ 20 ಕಡೆಗಳಲ್ಲಿ ಇಂತಹ ಶಿಬಿರ ಆಯೋಜಿಸಲಾಗಿದೆ ಎಂದರು. ಶಿಬಿರಗಳು ಮಕ್ಕಳ ಆಸಕ್ತಿಯನ್ನು ಕೆರಳಿಸುವ ಮೂಲಕ ವಿಷಯದ ಕುರಿತು ಅವರಲ್ಲಿ ಆಸಕ್ತಿ ಮೂಡಿಸುವಂತಿರಬೇಕು. ವರ್ಷವಿಡಿ ಕೇವಲ ಪಠ್ಯೆ ಚಟುವಟಿಕೆಯಲ್ಲಿ ಭಾಗವಹಿಸುವ ಮಕ್ಕಳಿಗೆ ಇಂತಹ ಶಿಬಿರಗಳು ಹೊಸತನ ಕಲಿಸಿಕೊಡುತ್ತವೆ ಎಂದರು. ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ ಮಾತನಾಡಿ, ಕಲಿಕಾ ಪೂರ್ವ ಚಟುವಟಿಕೆ ಶೈಕ್ಷಣಿಕೆ ಬದುಕಿಗೆ ಪೂರಕವಾಗಿ ಜರುಗಬೇಕಿದೆ. ಈ ಶಿಬಿರಗಳ ಮೂಲಕ ಉತ್ತಮ ಸಂಸ್ಕಾರ ಬೆಳೆಸುವ ಕಾರ್ಯವಾಗಲಿ ಎಂದರು.
ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್. ಹೂಗಾರ ಮಾತನಾಡಿ, ಶಿಬಿರಗಳು ದೇಶಿಯ ಕ್ರೀಡೆಗಳಿಗೆ ಮಹತ್ವ ನೀಡುವ ಮೂಲಕ ಕ್ರೀಡೆಗಳ ಕುರಿತು ಮಕ್ಕಳಲ್ಲಿ ಆಸಕ್ತಿ ಮೂಡಿಸಬೇಕು. ಇದರಿಂದಾಗಿ ನಶಿಸುತ್ತಿರುವ ಗ್ರಾಮೀಣ ಕ್ರೀಡೆಯ ಕುರಿತು ಮಕ್ಕಳಲ್ಲಿ ಮತ್ತಷ್ಟು ಆಸಕ್ತಿ ಮೂಡುತ್ತದೆ ಎಂದರು. ತಾಲೂಕು ಘಟಕದ ಅಧ್ಯಕ್ಷ ಶಿವಯೋಗಿ ಬಂಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರೇಮನಾಥ ಗರಗ, ವಿ.ಬಿ. ಪೊಲೀಸ್ಪಾಟೀಲ, ಕೆ.ಎಫ್. ಹಳ್ಯಾಳ, ವಿ.ಎಂ. ಹಿರೇಮಠ, ವಿವೇಕಾನಂದಗೌಡ ಪಾಟೀಲ, ಶಾಂತಕುಮಾರ, ಎಸ್.ಎಸ್. ಪಾಟೀಲ, ಎಸ್.ಬಿ. ಕುಂದಗೋಳ, ನಗರಸಭೆ ಸದಸ್ಯ ಅನಿಲ ಸಿಂಗಟಾಲಕೇರಿ, ಬಿ.ಕೆ. ಪೂಜಾರ, ಎ.ಬಿ. ಹಿರೇಮಠ, ಎಸ್.ಎನ್. ಬಳ್ಳಾರಿ ಮುಂತಾದವರು ಉಪಸ್ಥಿತರಿದ್ದರು. ಎ.ವಿ. ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿ.ಬಿ. ಮುದೋಳಮಠ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

