ಗದಗ

ಇಂದು ಮಾಸಿಕ ಸಭೆ

Published On :

ಮುಂಡರಗಿ: ತಾಲೂಕಿನ ಡೋಣಿ ಗ್ರಾಮದಲ್ಲಿ ಗದಗ ಜಿಲ್ಲೆಯ ಹಡಪದ ಅಪ್ಪಣ್ಣ ಸಂಘದ ಮಾಸಿಕ ಸಭೆ ಹಾಗೂ ಸಮಾಜದ ಸಂಘಟನೆ ಕುರಿತು ಹಡಪದ ಸಮಾಜದಲ್ಲಿ ಜಾಗೃತಿ ಮೂಡಿಸಲು ಡೋಣಿ ಗ್ರಾಮದ ಸಿದ್ಧಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಏ. 22ರಂದು ಬೆಳಗ್ಗೆ 1ಕ್ಕೆ ಸಭೆ ಕರೆಯಲಾಗಿದೆ. ನಂದಿವೇರಿ ಮಠದ ಶಿವಕುಮಾರ ಶ್ರೀಗಳು, ತಂಗಡಗಿ ಸಂಸ್ಥಾನಮಠದ ಅನ್ನಭಾರತಿ ಅಪ್ಪಣ್ಣ ಶ್ರೀಗಳು, ಕಳಸಾಪುರದ ಕದಳಿಮಠದ ಅಕ್ಕಮಹಾದೇವಿ ಸಾನ್ನಿಧ್ಯ ವಹಿಸುವರು.
ಇಂದು ವೀರಭದ್ರೇಶ್ವರ ರಥೋತ್ಸವ
ಶಿಗ್ಗಾಂವಿ: ತಾಲೂಕಿನ ತಡಸ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮ ಏ. 22ರಂದು ಜರುಗಲಿದೆ. ಬೆಳಗ್ಗೆ ಮಹಾರುದ್ರಾಭಿಷೇಕ, ಅನಂತರ ಹಲವು ಪವಾಡಗಳು ಗುಗ್ಗಳ ಉತ್ಸವ ನಡೆಯಲಿದೆ. ಮಧ್ಯಾಹ್ನ 12.28ಕ್ಕೆ ಸಾಮೂಹಿಕ ವಿವಾಹ ಜರುಗುವುದು. 2 ಗಂಟೆಗೆ ತೋಟ್ಟಿಲೋತ್ಸವ, ಲೀಲಾವು, ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಸಂಜೆ 4.30ಕ್ಕೆ ರಥೋತ್ಸವ ನಡೆಯಲಿದೆ. ಜಾತ್ರಾ ಮಹೋತ್ಸವ ಅಂಗವಾಗಿ ಏ. 23 ಹಾಗೂ 24ರಂದು ಬಯಲು ಕುಸ್ತಿ ಸ್ಪರ್ಧೆ ಏರ್ಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.