ಗದಗ

ಕಠಿಣ ಪರಿಶ್ರಮದಿಂದ ಯಶಸ್ಸು: ಕಟ್ಟಿಮನಿ

Published On :

ಗದಗ: ವಿದ್ಯಾರ್ಥಿಗಳಿಗೆ ನಿರಂತರ ಪರಿಶ್ರಮ ಅವಶ್ಯ. ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಗದಗ ಡಿಸಿಆರ್‌ಬಿಯ ಡಿವೈಎಸ್‌ಪಿ ಶ್ರೀಕಾಂತ ಕಟ್ಟಿಮನಿ ಹೇಳಿದರು.
ಅವರು ಸೋಮವಾರ ನಗರದ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಕೇಂದ್ರದಲ್ಲಿ ಜ. ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದರು.
ಇಂದಿನ ವಿದ್ಯಾರ್ಥಿಗಳು ನಾಳೆಯ ಭವ್ಯ ಭಾರತದ ನಿರ್ಮಾತೃಗಳಾಗಿದ್ದು, ಶೈಕ್ಷಣಿಕ ಜೀವನದಲ್ಲಿ ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುವ ಮೂಲಕ ತಮ್ಮ ಮನೆಯ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವುದರೊಂದಿಗೆ ದೇಶದ ಪ್ರಗತಿಗೆ ಕೈಜೋಡಿಸಬೇಕಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಸೂಕ್ತ ಪ್ರತಿಭೆ ಇದ್ದೇ ಇರುತ್ತದೆ. ಪ್ರತಿಭೆ ಹೊರಹಾಕಲು ಸೂಕ್ತ ವೇದಿಕೆ ಇಲ್ಲದೇ ಇರುವುದರಿಂದ ಪ್ರತಿಭೆಯು ತನ್ನಲ್ಲಿಯೇ ಕಮರಿ ಹೋಗುತ್ತದೆ. ಗುರುಗಳ, ಪಾಲಕರ ಮಾರ್ಗದರ್ಶ ಪಡೆದುಕೊಂಡು ಜೀವನದಲ್ಲಿ ಯಶಸ್ಸು ಕಾಣಿ ಎಂದರು.
ಗದಗ ಜಿಲ್ಲಾ ಅಲ್ಪ ಸಂಖ್ಯಾತ ಕಲ್ಯಾಣ ಕೇಂದ್ರದ ಜಿಲ್ಲಾ ಅಧಿಕಾರಿ ಆರ್.ಎಲ್. ಗುಂಜಿಕರ ಮಾತನಾಡಿ, ಸರ್ಕಾರ ಹಾಗೂ ಇಲಾಖೆ ವಿದ್ಯಾರ್ಥಿಗಳಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಈ ಯೋಜನೆಗಳ ಕುರಿತು ವಿದ್ಯಾರ್ಥಿಗಳು ಸಂಪೂರ್ಣ ಅರಿವು ಹೊಂದುವುದು ಅವಶ್ಯ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಸತಿ ಸೌಕರ್ಯಕ್ಕೆ ಸಹಕಾರಿಯಾಗಲಿ ಎಂಬ ಸದುದ್ದೇಶದಿಂದ ಸರ್ಕಾರವು ಪದವಿ ವಿದ್ಯಾರ್ಥಿಗಳಿಗಾಗಿ ವಿದ್ಯಾಸಿರಿ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಸೂಚಿಸಿದರು.
ಜ. ತೋಂಟದಾರ್ಯ ವಿದ್ಯಾಪೀಠದ ಆಡಳಿತಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಚಾರ್ಯ ಕೆ.ಎಚ್. ಬೇಲೂರ ಪ್ರಾಸ್ತಾವಿಕ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಅಂಬರೀಶ ಗುಡ್ಡದ ಉಪಸ್ಥಿತರಿದ್ದರು.
ಭೀಮವ್ವ ತಳವಾರ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರಾಚಾರ್ಯ ಬಿ.ಬಿ. ಗೌಡರ ಸ್ವಾಗತಿಸಿದರು. ಸಿ.ಎಂ. ಕಾಳಣ್ಣನವರ ಹಾಗೂ ಎಸ್.ಎಸ್. ಸಂಗನಾಳಮಠ ನಿರ್ವಹಿಸಿದರು. ವಾರ್ಷಿಕ ಸ್ನೇಹ ಸಮ್ಮೇಳನದ ಉಪಾಧ್ಯಕ್ಷ ಕೆ.ವಿ. ಬಾಗಲಕೋಟ       ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.