ಗದಗ

ಮಹಿಳೆಯರು ಸ್ವಾವಲಂಬಿ ಆಗಲಿ: ಪದ್ಮಾವತಿ ಗೌಡ

Published On :

ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಏ. 22
ಮಹಿಳೆಯರು ಸ್ವಾವಲಂಬಿ ಬದುಕು ಸಾಗಿಸಿ ಸಮಾಜದ ಮುಖ್ಯವಾಹಿನಿಗೆ ತರುವುದೇ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮುಖ್ಯ ಧೈಯ. ಈ ನಿಟ್ಟಿನಲ್ಲಿ ಸಂಸ್ಥೆಯ ಲಾಭ ಪಡೆದು ಆರ್ಥಿಕವಾಗಿ ಸಬಲರಾಗಿ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಪದ್ಮಾವತಿ ಗೌಡ ಹೇಳಿದರು.
ಅವರು ಸ್ಥಳೀಯ ಅಂಬೇಡ್ಕರ್ ಬಡಾವಣೆಯ ಲಕ್ಷ್ಮಿ ದೇಗುಲದಲ್ಲಿ ಈಚೆಗೆ ನಡೆದ ಕೌಟುಂಬಿಕ ಸಾಮರಸ್ಯ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಳೆದ ಮೂರು ದಶಕದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಗ್ರಾಮೀಣ ಬಡಜನ ಹಾಗೂ ದುರ್ಬಲರಿಗೆ ಸ್ವಾವಲಂಬನೆ ಬೀಜಮಂತ್ರ ಜತೆ ಉತ್ತರ ಕರ್ನಾಟಕ ಬಯಲು ಸೀಮೆ ರೈತರ ಶ್ರಯೋಭಿವೃದ್ಧಿಗಾಗಿ ಸಂಸ್ಥೆ ಹಲವಾರು ಯೋಜನೆಗಳನ್ನು ರೂಪಿಸಿ ಆ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಲ್ಲಿ ಸಂಸ್ಥೆ ಯಶಸ್ವಿಯಾಗಿದೆ. ಈ ದೆಸೆಯಲ್ಲಿ ನಿಮ್ಮ ಅಗತ್ಯಗನುಗುಣವಾಗಿ ಹಣಕಾಸು ನೆರವು ಪಡೆದು ನೀವು ಅಭಿವೃದ್ಧಿ ಹೊಂದುವುದರ ಜತೆಗೆ ಇನ್ನಿತರರಿಗೂ ಸಹಾಯ ಮಾಡಿ ಎಂದರು.
ಪುರಸಭೆ ಸದಸ್ಯ ಬುಡೆಪ್ಪ ಮೂಲಿಮನಿ ಮಾತನಾಡಿ, ಮಹಿಳಾ ಸಬಲೀಕರಣ ಜತೆ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಪಣ ತೊಟ್ಟಿರುವ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಾರ್ಯ ಎಲ್ಲರೂ ಮೆಚ್ಚುವಂತದ್ದು. ಈ ಕಾಲದಲ್ಲಿ ಗಂಡು ಮಕ್ಕಳಿಗಿಂತ ಹೆಚ್ಚು ದುಡಿಯುವ ಹಾಗೂ ಆರ್ಥಿಕತೆ ಹೆಚ್ಚಿಸುವ ಶ್ರೇಷ್ಠ ಕಾರ್ಯ ಮಹಿಳೆಯಿಂದ ಸಾಧ್ಯವಾಗಿದೆ. ಹೆಣ್ಣು ಅಬಲೆ ಅಲ್ಲ ಸಬಲೆ ಅನ್ನುವುದಕ್ಕೆ ಸಾಕಷ್ಟು ನಿದರ್ಶನಗಳಿವೆ ಎಂದರು.
ಸ್ಥಳೀಯ ಒಕ್ಕೂಟ ಅಧ್ಯಕ್ಷೆ ಲಕ್ಷ್ಮಿ ಸವಣೂರ ಅಧ್ಯಕ್ಷತೆ ವಹಿಸಿದ್ದರು. ಗಾಯಿತ್ರಿ ಕುಲಕರ್ಣಿ, ಪುರಸಭೆ ಮಾಜಿ ಅಧ್ಯಕ್ಷೆ ದೇವಕ್ಕ ಬೆಳವಣಿಕಿ, ಒಕ್ಕೂಟ ಅಧ್ಯಕ್ಷೆ ಹುಸೇನಬಿ ಕಟ್ಟಿಮನಿ, ಗೀತಾ ಮೂಲಿಮನಿ, ಕವಿತಾ ಕೊಟಗಿ ಹಾಗೂ ಗಜೇಂದ್ರಗಡ ಬಿ ಮತ್ತು ಸಿ ಭಾಗದ ಮದಿನಾ, ಮಂಜು ಜ್ಞಾನ ವಿಕಾಸ ಕೇಂದ್ರ ಸದಸ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.