ಟಿಇಟಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಗದಗ: ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಉನ್ನತೀಕರಿಸಿದ ಶಾಲೆಗಳಲ್ಲಿ (1ರಿಂದ 8ನೇ ತರಗತಿ) ನೇಮಕಾತಿಗೆ ಪೂರ್ವದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಇಟಿ) ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಅರ್ಜಿ ಸಲ್ಲಿಸಲು ಮೇ 3 ಕೊನೆಯ ದಿನ. ಡಿಇಡಿ, ಬಿಇಡಿ ಹೊಂದಿರುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಇಲಾಖೆ ವೆಬ್ಸೈಟ್(ಢಿಢಿಢಿ.ಝ್ಛ್ಟ್ಟಟಜಜ್ಡ್ಛಛಡ್ಝ್ಟಿಟಿ.್ಞಛ್ಠ.ಟ್ಝ್ಛಿ.್ಝಟಿ)ನಲ್ಲಿ ಕರೆಯಲಾಗಿದೆ. ಪರೀಕ್ಷಾ ವೇಳಾಪಟ್ಟಿ, ಪರೀಕ್ಷಾ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಮಾಹಿತಿಗಾಗಿ ವೆಬ್ಸೈಟ್ ನೋಡಬಹುದು ಅಥವಾ ಗದಗ ಕಳಸಾಪುರ ರಸ್ತೆಯಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಕಚೇರಿ ಸಂಪರ್ಕಿಸಬಹುದು ಎಂದು ಡಯಟ್ ಪ್ರಾ. ಬಿ.ಎಸ್. ರಘುವೀರ ತಿಳಿಸಿದ್ದಾರೆ.
ಇಂಗ್ಲಿಷ್, ಕಸೂತಿ ತರಬೇತಿಗೆ ಅರ್ಜಿ ಆಹ್ವಾನ
ಗದಗ: ಸಾಗರಿಕಾ ಎಜ್ಯುಕೇಶನ್ ಸ್ಕಿಲ್ ಡೆವಲಪ್ಮೆಂಟ್ ಟ್ರೇನಿಂಗ್ ಸೆಂಟರ್ ಪ್ರಾರಂಭಿಸಲಾಗಿದ್ದು, ಗದಗ ನಗರದ ಒಕ್ಕಲಗೇರಿ ಓಣಿಯ ರಾಚೋಟೇಶ್ವರ ದೇವಸ್ಥಾನದ ಹತ್ತಿರ ಮಹಿಳೆಯರಿಗೆ ಹಾಗೂ ನಿರುದ್ಯೋಗಿ ಯುವಕರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಕಂಪ್ಯೂಟರ್, ಸ್ಪೋಕನ್ ಇಂಗ್ಲಿಷ್, ಟೇಲರಿಂಗ್ ಹಾಗೂ ಕಸೂತಿ ತರಬೇತಿ ಲಭ್ಯವಿದೆ. ತರಬೇತಿಗಳು ಮೇ 1ರಿಂದ ಪ್ರಾರಂಭವಾಗಲಿದೆ. ಆಸಕ್ತರು ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಪಡೆದುಕೊಳ್ಳಬೇಕು. ಮಾಹಿತಿಗಾಗಿ 9481706107, 8050266107 ಸಂಪರ್ಕಿಸಿ.
ವಿಶೇಷ ಶಿಕ್ಷಣಕ್ಕೆ ಅರ್ಜಿ
ಗದಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಡೆಸುತ್ತಿರುವ ಮೈಸೂರಿನ ಹೆಲನ್ ಕೆಲ್ಲರ್ ಅಂಧ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ 2 ವರ್ಷಗಳ ಅಂಧ ಮಕ್ಕಳ ವಿಶೇಷ ಶಿಕ್ಷಣದ ಡಿಇಡಿ ಎಸ್ಇ (ಎಐ) ಹಾಗೂ ಮೈಸೂರಿನ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಶ್ರವಣದೋಷವುಳ್ಳ ಮಕ್ಕಳ ವಿಶೇಷ ಶಿಕ್ಷಣದ ಡಿಇಡಿ ಎಸ್ಇ (ಎಚ್ಐ) ತರಬೇತಿಯನ್ನು ಆರ್ಸಿಐ ನಿಯಮಾವಳಿಗಳ ಪ್ರಕಾರ ನಡೆಸಲಾಗುತ್ತಿದೆ. ಈ ತರಬೇತಿಗೆ ಸೇರಲು ಇಚ್ಛಿಸುವ ಅಭ್ಯರ್ಥಿಗಳು ಶೇ. 50ರಷ್ಟು ಅಂಕಗಳನ್ನು ಪಡೆದು ಪಿಯುಸಿ (102) ಯಲ್ಲಿ ಉತ್ತೀರ್ಣರಾಗಿರಬೇಕು. ಎಸ್ಸಿ, ಎಸ್ಟಿ ಹಾಗೂ ಅಂಗವಿಕಲಗೆ ರಾಜ್ಯ ಸರ್ಕಾರದ ನಿಯಮಾನುಸಾರ ಸಡಿಲಿಕೆ ಹಾಗೂ ಪ್ರವೇಶದಲ್ಲಿ ಸ್ಥಾನಗಳನ್ನು ಕಾಯ್ದಿರಿಸಲಾಗುತ್ತದೆ. ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಸಂಬಂಧಪಟ್ಟ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಮೈಸೂರಿನ ತರಬೇತಿ ಕೇಂದ್ರದಲ್ಲಿ ಏ. 21ರಿಂದ ಉಚಿತವಾಗಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಡನೆ ಮೇ 21ರೊಳಗಾಗಿ ಉಪನಿರ್ದೇಶಕರು (ತರಬೇತಿ) ಅಂಧ ಮತ್ತು ಶ್ರವಣದೋಷವುಳ್ಳ ಮಕ್ಕಳ ಹಾಗೂ ಶಿಕ್ಷಕರ ತರಬೇತಿ ಕೇಂದ್ರ, ಪುಲಕೇಶಿ ರಸ್ತೆ, ತಿಲಕ ನಗರ, ಮೈಸೂರು (ದೂ. 0821-2491600), ಊ-ಟಛ್ಝಟ: ಝಞಜಟಜಟ್ಞಿಜಟಟಜ್ಠ91ಅ್ಜಟಛ್ಝಟ.್ಛ್ಟಟ ಗೆ ಸಲ್ಲಿಸಬೇಕು. ಮಾಹಿತಿಗಾಗಿ ಜಿಲ್ಲಾ ವೆಬ್ಸೈಟ್ ಢಿಢಿಢಿ.ಟಣಡ್ಟ್ಠಜ.ಟ್ಝ್ಛಿ.್ಝಟಿ ಇಲ್ಲಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

