ಸೃಜನಾತ್ಮಕ ಬೆಳವಣಿಗೆಗೆ ಚಿಣ್ಣರ ಮೇಳ
ಶಿರಹಟ್ಟಿ: ಮನುಕುಲದ ವಾರಸುದಾರರಾಗಿರುವ ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ ಚಿಣ್ಣರ ಮೇಳ ಸಹಕಾರಿಯಾಗಿದೆ. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರತರಲು ಉತ್ತಮ ವೇದಿಕೆ ಕಲ್ಪಿಸಿದಂತಾಗಿದೆ ಎಂದು ಸಿಪಿಐ ಶ್ರೀನಿವಾಸ ಮೇಟಿ ಹೇಳಿದರು.
ಅವರು ಬುಧವಾರ ಪಟ್ಟಣದ ಸಿ.ಸಿ. ನೂರಶೆಟ್ಟರ ವಿದ್ಯಾ ಪ್ರಸಾರ ಸಂಸ್ಥೆಯ ಸಭಾಂಗಣದಲ್ಲಿ ಆರಂಭಿಸಿದ ಚಿಣ್ಣರ ಮೇಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮಕ್ಕಳ ಮನಸ್ಸಿನಲ್ಲಿ ಚಿತ್ರ-ವಿಚಿತ್ರ ಪ್ರಶ್ನೆಗಳು ಉದ್ಭವವಾಗುತ್ತಿದ್ದು, ಅವಕ್ಕೆಲ್ಲ ಉತ್ತರ ಚಿಣ್ಣರ ಮೇಳಗಳಿಂದ ಸಿಗುತ್ತಿದೆ ಎಂದು ಹೇಳಿದರು. ಭಾರತೀಯ ಸಂಸ್ಕೃತಿಯ ಪುರಾತನ ಕಲೆಗಳು, ಆಟಗಳು, ನೃತ್ಯ, ಹಾಡು, ಜಾನಪದ ಹಾಡುಗಳನ್ನು ವೇದಿಕೆ ಮುಖಾಂತರ ತಿಳಿದುಕೊಳ್ಳಬಹುದು. ಮನುಕುಲದ ಇತಿಹಾಸ ಸಾರುವಂತಹ ಕಾರ್ಯಕ್ರಮ ಇದಾಗಿದ್ದು, ನಮ್ಮ ದೇಶದ ಸಂಸ್ಕೃತಿ, ನಾಡು-ನುಡಿ, ನಾಗರಿಕತೆ ಬಗ್ಗೆ ಮಕ್ಕಳಿಗೆ ತಿಳಿಯಪಡಿಸುವ ಕಾರ್ಯಕ್ರಮ ಇದಾಗಿದೆ. ಆಧುನಿಕ ಜೀವನದಿಂದಾಗಿ ಅನೇಕ ಮಕ್ಕಳ ಮನಸ್ಸಿನ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಮುಗ್ಧ ಮಕ್ಕಳಲ್ಲಿ ಅಡಗಿರುವ ಕಲೆ, ಸಂಸ್ಕೃತಿ ಪ್ರೋತ್ಸಾಹಿಸಿ ಹೊರತರುವ ಕಾರ್ಯವನ್ನು ಪಾಲಕರು ಮಾಡಬೇಕು ಎಂದರು.
ಕಸಾಪ ತಾಲೂಕು ಅಧ್ಯಕ್ಷ ಕೆ.ಎ. ಬಳಿಗೇರ ಮಾತನಾಡಿ, ಪಟ್ಟಣ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದ್ದ ಇಂತಹ ಕಾರ್ಯಕ್ರಮಗಳು ಮೊಟ್ಟಮೊದಲ ಬಾರಿಗೆ ಶಿರಹಟ್ಟಿಯಲ್ಲಿ ಪ್ರಾರಂಭಗೊಂಡಿದ್ದು ಸಂತಸದ ವಿಷಯ. ಆಧುನಿಕ ತಂತ್ರಜ್ಞಾನದ ಪರಿವೇ ಇಲ್ಲದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ಪಾಲಕರು ಮಕ್ಕಳ ಎಲ್ಲ ಚಟುವಟಿಕೆಗಳಿಗೆ ಕೈ ಜೋಡಿಸಿದರೆ ಸಾಧನೆಗೆ ಸಹಕಾರಿಯಾಗಲಿದೆ ಎಂದರು. ಪ್ರತಿಭೆ ಯಾರೊಬ್ಬರ ಸೊತ್ತಲ್ಲ. ಅದನ್ನು ಗುರುತಿಸಿ ಹೊರಗೆ ತರುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಬೇಕಾಗಿರುವುದು ಇಂದಿನ ಅಗತ್ಯ. ವಿದ್ಯಾರ್ಥಿಗಳಿಗೆ ನಿಜವಾದ ಶಿಕ್ಷಣದ ಹಂಬಲವೇ ಮುಂದಿನ ದೊಡ್ಡ ಆಸ್ತಿಯಾಗುತ್ತದೆ. ವಿದ್ಯೆಯ ಜತೆಗೆ ಕ್ರೀಡೆ, ಸಾಂಸ್ಕೃತಿಕ ವಿಭಾಗಳು ಶಿಕ್ಷಣದ ಒಂದು ಅಂಗ. ಅವುಗಳನ್ನು ಗೌರವಯುತವಾಗಿ ವಿದ್ಯಾರ್ಥಿಗಳು ಸ್ವೀಕರಿಸಬೇಕು. ಪ್ರತಿ ಮಕ್ಕಳಲ್ಲೂ ಒಂದೊಂದು ತರಹದ ಪ್ರತಿಭೆ ಅಡಗಿರುತ್ತದೆ. ಅದನ್ನು ಸಂಪೂರ್ಣವಾಗಿ ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ ಎಂದರು.
ಬಿಆರ್ಸಿ ಸಮನ್ವಯಾಧಿಕಾರಿ ಜಯಶ್ರೀ ಗುಡಿ, ಸಿಸಿಎನ್ ವಿದ್ಯಾ ಪ್ರಸಾರ ಸಂಸ್ಥೆ ಅಧ್ಯಕ್ಷ ಚಂದ್ರಕಾಂತ ನೂರಶೆಟ್ಟರ, ಬಸವರಾಜ ಸಂಗಪ್ಪಶೆಟ್ಟರ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುತ್ತು ಕುಳಗೇರಿ ಅಧ್ಯಕ್ಷತೆ ವಹಿಸಿದ್ದರು. ಅಮೃತ ಬಾತಖಂಡೆ, ಶಾಂತಾ ಬಸನಗೌಡ ಪಾಟೀಲ, ಮದುಮತಿ ಕಪ್ಪತ್ತನವರ, ಸರೋಜ ಕಟ್ಟಿಮನಿ, ಫಕೀರೇಶ ಕರಿಗಾರ, ದಿವಾಕರ ಕೆ. ಇದ್ದರು.
ಆಧುನಿಕ ಜೀವನದಿಂದಾಗಿ ಅನೇಕ ಮಕ್ಕಳ ಮನಸ್ಸಿನ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಮುಗ್ಧ ಮಕ್ಕಳಲ್ಲಿ ಅಡಗಿರುವ ಕಲೆ, ಸಂಸ್ಕೃತಿ ಪ್ರೋತ್ಸಾಹಿಸಿ ಹೊರತರುವ ಕಾರ್ಯವನ್ನು ಪಾಲಕರು ಮಾಡಬೇಕು.
-ಸಿಪಿಐ ಶ್ರೀನಿವಾಸ ಮೇಟಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

