ಗದಗ

ದಿಂಡೂರಲ್ಲಿ ಮಹಿಳಾ ಶೌಚಾಲಯ ನಿರ್ಮಿಸಿ

Published On :

ಗಜೇಂದ್ರಗಡ: ಸಮೀಪದ ರಾಜೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಂಡೂರು ಗ್ರಾಮದಲ್ಲಿ ಬಯಲು ಶೌಚ ತಪ್ಪಿಸಿ ಮಹಿಳಾ ಶೌಚಾಲಯ ನಿರ್ಮಿಸಬೇಕು ಎಂದು ನಿವಾಸಿಗಳು ಬುಧವಾರ ಗ್ರಾಪಂ ಆಡಳಿತವನ್ನು ಒತ್ತಾಯಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಬಯಲು ಮಲ ವಿಸರ್ಜನೆ ಪದ್ಧತಿ ತೊಡೆದು ಹಾಕಿ ಶೌಚಾಲಯ ನಿರ್ಮಾಣ ಕಡ್ಡಾಯ ಎಂದು ಜಿಲ್ಲಾ ಪಂಚಾಯಿತಿ ನೀಡಿದ ಆದೇಶಕ್ಕೆ ಕವಡೆ ಕಾಸಿನ ಬೆಲೆ ಇಲ್ಲದಂತಾಗಿದೆ. ಸರ್ಕಾರ ಮಹಿಳೆಯರಿಗೆ ಶೌಚಾಲಯ ನಿರ್ಮಾಣಕ್ಕೆ ಕೋಟ್ಯಂತರ ಹಣ ವೆಚ್ಚ ಮಾಡುತ್ತಿದೆ. ಆದರೆ, ಗ್ರಾಮ ವೃದ್ಧರು, ಮಹಿಳೆಯರು ಹಾಗೂ ಮಕ್ಕಳು ಸಂಜೆ ಸೂರ್ಯ ಮುಳುಗುವುದನ್ನೆ ಕಾಯುತ್ತಿರುತ್ತಾರೆ. ಬಯಲು ಶೌಚಾಲಯಕ್ಕೆ ಮುಕ್ತಿ ನೀಡಲು ಸರ್ಕಾರ ರೂಪಿಸಿರುವ ಹಲವಾರು ಯೋಜನೆಗಳ ಫಲ ನಮಗೆ ದೊರೆತಿಲ್ಲಾ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ರೂಢಿಯಲ್ಲಿರುವ ಬಯಲು ಮಲ ವಿಸರ್ಜನೆ, ತೊಡೆದುಹಾಕಿ ಗ್ರಾಮಗಳಲ್ಲಿ ಸ್ವಚ್ಛ ಸುಂದರ ಹಾಗೂ ನಿರ್ಮಲ ಪರಿಸರ ರೂಪಿಸಬೇಕೆಂಬ ಮಹತ್ವಾಕಾಂಕ್ಷಿ ಹೊಂದಿದ್ದ ಮಹಾತ್ಮಾ ಗಾಂಧೀಜಿಯವರ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಗೊಂಡ ನಿರ್ಮಲ ಭಾರತ ಅಭಿಯಾನ ಯೋಜನೆ ಅನುಷ್ಠಾನ ಯಶಸ್ಸು ಗೊಳಿಸುವಲ್ಲಿ ರಾಜೂರು ಗ್ರಾಮ ಪಂಚಾಯಿತಿ ವಿಫಲವಾಗಿದೆ ಎಂದು ದೂರಿದರು. ಗ್ರಾಮೀಣ ಜನರ ಜೀವನ, ಆರೋಗ್ಯ ಕಾಪಾಡುವ ಉದ್ದೇಶದಿಂದ ಹಳ್ಳಿಯ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಬಯಲು ಶೌಚಾಲಯ, ಕೊಳಕು, ಗಲೀಜು ವಾಸನೆಯಂತಹ ಅನೈರ್ಮಲ್ಯ ಗ್ರಾಮದಲ್ಲಿ ರಾರಾಜಿಸುತ್ತಿದೆ. ಗ್ರಾಮದಲ್ಲಿ ಸ್ವಚ್ಛತೆಯನ್ನು ಆರೋಗ್ಯ ಮುಕ್ತ ಗ್ರಾಮವನ್ನಾಗಿಸುವ ಸರ್ಕಾರ ಮೂಲ ಉದ್ದೇಶ ಬುಡಮೇಲಾಗಿದೆ ಎಂದು ಆಪಾದಿಸಿದರು.
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಮತ್ತು ರಾಜೂರು ಗ್ರಾಮ ಪಂಚಾಯಿತಿ ಆಡಳಿತ ಈಗಲಾದರೂ ಎಚ್ಚೆತ್ತು ದಿಂಡೂರು ಗ್ರಾಮದಲ್ಲಿ ಮಹಿಳೆಯರಿಗೆ ಶೌಚಾಯಲಯ ನಿರ್ಮಿಸಬೇಕು ಎಂದು ಗ್ರಾಪಂ ಮಾಜಿ ಅಧ್ಯಕ್ಷ ವಣಕೇರಪ್ಪ ಮೇಟಿ, ಹುಸೇನಬಿ ಮಕಾನದಾರ, ಫಾತಿಮಾ ಕಾತರಕಿ, ಮಾಬುಬ್ಬಿ ಮಕಾನದಾರ, ಗಂಗವ್ವಾ ರಾಠೋಡ, ಮರೇನಬಿ ಮಕಾನದಾರ ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.