ಗದಗ: ಇಂದು ನದಾಫ, ಪಿಂಜಾರ ಸಂಘದ ಸಭೆ
ಗದಗ: ರಾಜ್ಯ ನದಾಫ, ಪಿಂಜಾರ ಸಂಘದ ಗದಗ ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆ ಏ. 27ರಂದು ಬೆಳಗ್ಗೆ 10.30ಕ್ಕೆ ಸ್ಥಳೀಯ ರಾಜೀವಗಾಂಧಿ ನಗರದ ಸಂತ ಶಿಶುನಾಳ ಶರೀಫ ಶಾಲೆಯ ಕಟ್ಟಡದಲ್ಲಿ ಕರೆಯಲಾಗಿದೆ. ಗದಗ ತಾಲೂಕು ಘಟಕದ ಅಧ್ಯಕ್ಷ ರಾಜೇಸಾಬ್ ಅಣ್ಣಿಗೇರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಸಂಘದ ಹಿರಿಯ ಉಪಾಧ್ಯಕ್ಷ ಅಲ್ಲಿಸಾಬ್ ಹುಣಸಿಮರದ ಹಾಗೂ ಕಾರ್ಯದರ್ಶಿ ಎಂ.ಐ. ಅಣ್ಣಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ವಿದ್ಯುತ್ ವ್ಯತ್ಯಯ
ಗದಗ: ಶಹರದ ಹುಬ್ಬಳ್ಳಿ ರಸ್ತೆಯಲ್ಲಿ ಹೊಸ ವಿದ್ಯುತ್ ಮಾರ್ಗವನ್ನು ನಿರ್ಮಿಸುವ ಹಾಗೂ ತುರ್ತು ನಿರ್ವಹಣಾ ಕೆಲಸವನ್ನು ಏ. 27ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಹಮ್ಮಿಕೊಳ್ಳಲಾಗುತ್ತಿದೆ. ಗದಗ ಶಹರದ ದುರ್ಗಾವಿಹಾರ, ಹುಯಿಲಗೋಳ ದವಾಖಾನೆ, ಗ್ರೈನ್ ಮಾರ್ಕೆಟ್, ಹಳೆ ಬಸ್ ನಿಲ್ದಾಣ, ಟಾಂಗಾಕೂಟ, ಕಾಗದಗೇರಿ ಓಣಿ, ಬ್ಯಾಂಕ್ ರಸ್ತೆ, ಬ್ಯಾಂಕ್ ರಸ್ತೆ, ಕಲಾಮಂದಿರ ರಸ್ತೆ, ತೋಂಟದಾರ್ಯ ಮಠದ ರಸ್ತೆ, ಕೆ.ಎಚ್. ಪಾಟೀಲ ವೃತ್ತ ಈ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಾರಣ ಗ್ರಾಹಕರು ಹಾಗೂ ಸಾರ್ವಜನಿಕರು ಪ್ರಕಟಣೆ ಗಮನಿಸಿ ಸಹಕರಿಸುವಂತೆ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುದಕಪ್ಪ ಹೂಗಾರ ನಿಧನ
ರೋಣ: ತಾಲೂಕಿನ ಹೊಸಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಮುದಕಪ್ಪ ಹೂಗಾರ(87) ಈಚೆಗೆ ನಿಧನರಾದರು. ಮೃತರಿಗೆ ನಾಲ್ವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

