ನಿಷೇಧಿತ ಬೀಜ ಮಾರಾಟ ತಡೆಗೆ ಆಗ್ರಹಿಸಿ ಇಂದು ಮನವಿ
ಲಕ್ಷ್ಮೇಶ್ವರ: ಪಟ್ಟಣದ ಕೆಲವೊಂದು ಬೀಜ ಹಾಗೂ ಗೊಬ್ಬರ ಮಾರಾಟ ಅಂಗಡಿಗಳಲ್ಲಿ ನಿಷೇಧಿತ ಮಹಿಕೋ ಕಂಪನಿಯ ಕನಕ ಬಿಟಿ ಹತ್ತಿ ಬೀಜಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ತಿಳಿದು ಬಂದಿದೆ. ಕನಕ ಬಿಟಿ ಹತ್ತಿ ಬೀಜಗಳನ್ನು ಮಾರಾಟ ಮಾಡುವವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕೃಷಿಕ ಸಮಾಜವು ಏ. 28 ರಂದು ಪಟ್ಟಣದ ವಿಶೇಷ ತಹಸೀಲ್ದಾಗೆ ಮನವಿ ಸಲ್ಲಿಸಲಾಗುವುದು ಎಂದು ಅಧ್ಯಕ್ಷ ಸೋಮನಗೌಡ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ವರ್ಷ ನಕಲಿ ಕನಕ ಬಿಟಿ ಹತ್ತಿ ಬೀಜಗಳನ್ನು ಬಿತ್ತಿ ಬೀದಿ ಪಾಲಾಗಿ ನಷ್ಟ ಅನುಭವಿಸಿರುವ ರೈತ ಕುಟುಂಬಗಳಿಗೆ ಮಹಿಕೋ ಕಂಪನಿಯು ಯಾವುದೇ ಪರಿಹಾರವನ್ನು ನೀಡಿಲ್ಲ.
ಇಂತಹ ಸಂದಿಗ್ಧ ಸ್ಥಿತಿಯಲ್ಲಿ ರೈತರು ಇರುವಾಗ ಮತ್ತೆ ಮಹಿಕೋ ಕಂಪನಿಯು ಬಿಟಿ ಹತ್ತಿ ಬೀಜಗಳನ್ನು ಮಾರಾಟ ಮಾಡುತ್ತಿರುವುದು ಕಳವಳದ ಸಂಗತಿಯಾಗಿದೆ. ಸರ್ಕಾರ ಮಹಿಕೋ ಕಂಪನಿಯ ಹತ್ತಿ ಬೀಜಗಳನ್ನು ರಾಜ್ಯಾದ್ಯಂತ ಮಾರಾಟ ಮಾಡದಂತೆ ನಿಷೇಧ ಹೇರಿದ್ದರೂ ಕಾಳಸಂತೆಯಲ್ಲಿ ಮಹಿಕೋ ಕಂಪನಿಯ ಕನಕ ಬಿಟಿ ಹತ್ತಿ ಬೀಜಗಳ ಮಾರಾಟ ಅವ್ಯಾಹತವಾಗಿ ನಡೆದಿದೆ. ಸರ್ಕಾರ ಈ ಕೂಡಲೇ ಬೀಜಗಳನ್ನು ಮಾರಾಟ ಮಾಡುವ ಅಂಗಡಿಗಳ ಪರವಾನಗಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಮನವಿ ನೀಡಲಾಗುತ್ತಿದೆ. ಸಾಕಷ್ಟು ಸಂಖ್ಯೆಯಲ್ಲಿ ರೈತರು ಈ ಕಾರ್ಯದಲ್ಲಿ ಭಾಗವಹಿಸಬೇಕೆಂದು ಪುರಸಭೆ ಸದಸ್ಯ ಮಹೇಶ ಹೊಗೆಸೊಪ್ಪಿನ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

