ಯೋಗ, ವ್ಯಾಯಾಮದಿಂದ ಆರೋಗ್ಯ
ಗದಗ: ಮಹಿಳೆಯರು ಯೋಗ ವ್ಯಾಯಾಮಗಳಿಂದ ಆರೋಗ್ಯವಂತರಾಗಿ ಸ್ವಸ್ಥ ಮನಸ್ಸು ಹಾಗೂ ಸದೃಢ ಆರೋಗ್ಯ ಹೊಂದಬಹುದು ಎಂದು ಗಿರಿಜಕ್ಕ ಧರ್ಮರಡ್ಡಿ ಹೇಳಿದರು.
ಅವರು ಶುಕ್ರವಾರ ಗದುಗಿನ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಗದಗ ತಾಲೂಕು ಕದಳಿ ವೇದಿಕೆ ಹಾಗೂ ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರ ತೋಂಟದಾರ್ಯ ಮಠದ ಸಂಯಕ್ತ ಆಶ್ರಯದಲ್ಲಿ ಜರುಗಿದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಧರ್ಮ ಸಂಸ್ಕಾರವನ್ನೊಳಗೊಂಡ ನಾವು ಪ್ರಾಣಾಯಾಮ, ಯೋಗ ಮಾಡುವುದರಿಂದ, ಮಾನಸಿಕ ನೆಮ್ಮದಿ ಪಡೆಯಬಹುದಾಗಿದೆ ಎಂದರು.
ಗದಗ ತಾಲೂಕು ಕದಳಿ ವೇದಿಕೆ ಅಧ್ಯಕ್ಷೆ ಕವಿತಾ ದಂಡಿನ, ಗದಗ, ಬೆಟಗೇರಿ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಅನ್ನಪೂರ್ಣಾ ವರವಿ, ಅಕ್ಕಮಹಾದೇವಿ ಯೋಗ ಕೇಂದ್ರದ ಅಧ್ಯಕ್ಷೆ ನಿರ್ಮಲಾ ಪಾಟೀಲ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ರುದ್ರವ್ವ ಕೆರಕಲಮಟ್ಟಿ, ಸದಸ್ಯೆ ಶಿವಲೀಲಾ ಅಕ್ಕಿ, ಮರ್ಚಂಟ್ ಬ್ಯಾಂಕಿನ ನಿರ್ದೇಶಕಿ ಶಿವಲೀಲಾ ಕುರಡಗಿ, ಸುಮಂಗಲಾ ಹೊಸಮನಿ ಅವರನ್ನು ಸನ್ಮಾನಿಸಲಾಯಿತು.
ಸರೋಜಾ ಮುಗದ ಪ್ರಾರ್ಥಿಸಿದರು. ಸುವರ್ಣ ವಸ್ತ್ರದ ನಿರ್ವಹಿಸಿದರು. ನಂತರ ಮಕ್ಕಳು ಹಾಗೂ ಸದಸ್ಯರಿಂದ ವೇಷ, ಭೂಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

