ಮುಂಡರಗಿ: ಅಭಿನಂದನೆ ಕಾರ್ಯಕ್ರಮ
ಮುಂಡರಗಿ: 32 ವರ್ಷಗಳಿಂದ ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಪರ ಕಾಳಜಿಯ ಕೆಲಸಗಳನ್ನು ಮಾಡುತ್ತಾ ಬಂದಿದೆ. ಇದರಿಂದ ಅನೇಕರು ಸಾಮಾಜಿಕ ಕಳಕಳಿಯತ್ತ ಪರಿವರ್ತನೆಗೊಂಡಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೈ-ಕ ಪ್ರಾದೇಶಿಕ ನಿರ್ದೇಶಕ ಬೂದಪ್ಪಗೌಡ ಅವರು ಹೇಳಿದರು.
ಅವರು ಈಚೆಗೆ ಪಟ್ಟಣದ ಎಸ್ಎಸ್ಕೆ ಸಮಾಜ ಪಂಚ ಟ್ರಸ್ಟ್ ಕಮಿಟಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂಭಾಭವಾನಿ ದೇವಸ್ಥಾನದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಂದು ಸರ್ಕಾರ ಮಾಡುವಷ್ಟು ಕೆಲಸಗಳನ್ನು ಮಾಡುತ್ತಿದೆ. ನೊಂದವರಿಗೆ ಸಹಾಯ, ಸಮುದಾಯ ಭವನಕ್ಕೆ ಹಣದ ಸಹಾಯ, ಮಾಸಾಶನ ನೀಡಿ, ಜನರಿಗೆ ಅನಕೂಲ ಮಾಡುತ್ತಿರುವುದು ಶ್ಲಾಘನೀಯ ಎಂದರು. ಎಸ್ಎಸ್ಕೆ ಸಮಾಜದ ಅಧ್ಯಕ್ಷ ಅಶೋಕ ಶಿದ್ಲಿಂಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುರಸಭೆಯ ಸದಸ್ಯ ಲಿಂಗರಾಜಗೌಡ ಪಾಟೀಲ್, ಬಿ. ಜಯಂತ, ಯೋಜನಾಧಿಕಾರಿ ಕೆ. ದಿವಾಕರ, ಮೇಲ್ವಿಚಾರಕ ಎಚ್.ಆರ್. ಶಿವಾನಂದ, ಅಭಿಯಂತರ ಶಶಿಧರ ಚವಡಿ, ರಾಧಾಕೃಷ್ಣ ಮೇರವಾಡೆ, ಬಾಲಚಂದ್ರ ಹಾದಿಮನಿ, ವಿನಾಯಕ ಶಿದ್ಲಿಂಗ, ಪರಶುರಾಮ ಮಗಜಿ, ವೆಂಕಟೇಶ ಬಾಕಳೆ, ಸೋಮತಾಥಸಾ ಶಿದ್ಲಿಂಗ್, ಸ್ವಾಮಿಷಾ ಪವಾರ, ಭೀಮಸೇನ ಭೋಚಗೇರಿ, ರಮೇಶ ಪವಾರ, ದಿಲೀಪಕುಮಾರ ಮೇಘರಾಜ ಇದ್ದರು. ಎಸ್.ಆರ್. ಬಸಾಪೂರ ಸ್ವಾಗತಿಸಿ, ನಿರ್ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

