ರಾಮದೇವ್ ಪ್ರತಿಕೃತಿ ದಹಿಸಿ ಪ್ರತಿಭಟನೆ
ಗದಗ: ದಲಿತರನ್ನು ಅವಮಾನಿಸಿರುವ ವಿಕೃತ ಮನಸ್ಸಿನ ಕಪಟ ಸನ್ಯಾಸಿ ಬಾಬಾ ರಾಮದೇವ್ ಅವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಮಂಗಳವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಶಾಖೆಯ ವತಿಯಿಂದ ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಬಾಬಾರಾಮದೇವ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ವಿನಾಯಕ ಬಳ್ಳಾರಿ ಮಾತನಾಡಿ, ಸ್ವತಂತ್ರ ಭಾರತದಲ್ಲಿ ದಲಿತ ಜನಾಂಗಗಳ ಕುರಿತು ಇನ್ನೂ ಅಸಮಾನತೆಯಿಂದ, ಅಮಾನವೀಯವಾಗಿ ಕಾಣುತ್ತಿದ್ದಾರೆ ಎನ್ನುವುದಕ್ಕೆ ಬಾಬಾ ರಾಮದೇವ್ ಹೇಳಿಕೆ ಸಾಕ್ಷಿಯಾಗಿದ್ದು, ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕ ಈ ಹೇಳಿಕೆಯನ್ನು ಖಂಡಿಸಬೇಕಾಗಿದೆ. ತಮ್ಮ ಮಾತಿನ ತಿಟೆಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ದೇಶದಲ್ಲಿ ಶಾಂತಿ ಕದಡುವ ಪ್ರಯತ್ನ ರಾಮದೇವ್ ಮಾಡುತ್ತಿದ್ದು, ಸಮಾಜ ಘಾತುಕ, ದಲಿತ ವಿರೋಧಿ ರಾಮದೇವ್ ಈ ಕೂಡಲೇ ಅವರನ್ನು ಬಂಧಿಸಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಸರ್ಕಾರ ದಲಿತರ ಹಕ್ಕುಗಳನ್ನು ರಕ್ಷಿಸಲು ಹಾಗೂ ದೇಶದಲ್ಲಿ ಶಾಂತಿ, ಸೌಹಾರ್ದನೆ ನೆಲಸಲು ಪ್ರಾಧಾನ್ಯತೆ ನೀಡಬೇಕು ಎಂದರು.
ಗದಗ-ಬೆಟಗೇರಿ ನಗರಸಭೆಯ ಆವರಣದ ಡಾ. ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆಯು ನಗರದ ಗಾಂಧಿ ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ, ಬಾಬಾರಾಮದೇವ್ ಪ್ರತಿಕೃತಿ ದಹಿಸಿ ಪ್ರತಿಭಟನೆ ಜರುಗಿಸಿದರು. ನಂತರ ಮೆರವಣಿಗೆಯ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸತೀಶ ಹೂಲಿ, ಯುವರಾಜ ಬಳ್ಳಾರಿ, ವಿದ್ಯಾಧರ ದೊಡ್ಡಮನಿ, ಮಾರುತಿ ಗುಡಿಮನಿ, ಜಗದೀಶ ಮಲ್ಲಣ್ಣನವರ, ಧರ್ಮಣ್ಣ ಹೊಸಮನಿ, ನಾಗರಾಜ ಗುತ್ತಿ, ಪರಶುರಾಮ ಪೂಜಾರ, ಸಿದ್ದು ಹಾದಿಮನಿ, ಶಿವಮೂರ್ತಪ್ಪ ಹರಿಜನ, ಕೆಂಚಪ್ಪ ಪೂಜಾರ, ರವಿ ಹಾದಿಮನಿ, ರಪಸಪ್ಪ ಕಳಸಾಪೂರ, ಶಿವು ಜಂಬಲದಿನ್ನಿ, ಮಂಜು ಪೂಜಾರ, ರಮೇಶ ರಾಜಣ್ಣನವರ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

