ಗದಗ

ಶಿವಸೇನೆ ಕಾರ್ಯಕರ್ತರ ಮೇಲೆ ಕ್ರಮಕ್ಕೆ ಆಗ್ರಹ

Published On :

ಗದಗ: ಕನ್ನಡಿಗರನ್ನು ಹಾಗೂ ಕನ್ನಡಾಂಬೆಯನ್ನು ಅವಮಾನಿಸಿರುವ ಎಂ.ಇ.ಎಸ್. ಹಾಗೂ ಶಿವಸೇನೆ ಕಾರ್ಯಕರ್ತರ ಮೇಲೆ ಕಠೀಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶನಿವಾರ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ್ರ ನೇತೃತ್ವದಲ್ಲಿ ಶನಿವಾರ ಕರವೇ ಕಾರ್ಯಕರ್ತರು ಬೆಳಗಾವಿಗೆ ಹೋಗುತ್ತಿರುವ ಸಂದರ್ಭದಲ್ಲಿ ಹುಬ್ಬಳ್ಳಿ ಬಳಿ ಪೊಲೀಸರು ಬಂಧಿಸಿರುವ ಕ್ರಮವನ್ನು ಖಂಡಿಸಿ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಲಾಯಿತು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಜಯಕುಮಾರ ಬ್ಯಾಳಿ ಮಾತನಾಡಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲಿಂಗನಗೌಡ ಮಾಲೀಪಾಟೀಲ, ರಜಿಯಾಬೇಗಂ ಮುಲ್ಲಾ, ಮುನ್ನಾ ಪಟ್ಟಣ, ಮಹಾದೇವಿ ದೊಡ್ಡಗೌಡ್ರ, ಪ್ರಕಾಶ ಸಂದಿಗೌಡ್ರ, ಕಲಂದರ ಖಾಜಿ, ಕೃಷ್ಣ ಲಮಾಣಿ, ಗುರು ಮರಾಠಿ, ವೀರೇಶ ಮುಳಗುಂದ, ಜಗದೀಶ ತಳವಾರ, ರಾಘವೇಂದ್ರ ಮುಳಗುಂದ, ಬಸವರಾಜ ಅಂಗಡಿ, ರವಿ ಮಡಿವಾಳರ, ಕಿರಣ ಕೋರಗಾವ್, ಜಾವೀದ ಖಾಜಿ, ಅಷಪಾಕ್ ಖಾಜಿ, ಸುನೀಲ ಕಾಟವಾ, ಸಿಕಂದರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.