ಕನ್ನಡ ಶಾಲೆ ನಿರ್ಲಕ್ಷ್ಯ ಸಲ್ಲ
ಮುಂಡರಗಿ: ಸ್ಥಳೀಯ ಕೋಟೆ ಭಾಗದ ರೈತರ ಮಕ್ಕಳು ಅಭ್ಯಾಸ ಮಾಡುತ್ತಿರುವ ಮುಂಡರಗಿ ಸರ್ಕಾರಿ ಕೋಟೆ ಪ್ರಾಥಮಿಕ ಶಾಲೆ ಯಾವುದೇ ರಂಗದಲ್ಲಿಯೂ ಕಡಿಮೆಯಿಲ್ಲ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ಇಂದು ವೈದ್ಯರು, ತಾಲೂಕು ದಂಡಾಧಿಕಾರಿಗಳು ಎಂಜಿನಿಯರ್ ಆಗಿದ್ದಾರೆ. ಆದ್ದರಿಂದ ಕನ್ನಡ ಶಾಲೆಗಳ ಕುರಿತು ನಿರ್ಲಕ್ಷ್ಯ ಸಲ್ಲದು ಎಂದು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಶನಿವಾರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಯಲ್ಲಿ ಜಿಪಂ ಗದಗ, ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮುಂಡರಗಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟೆ ಆಶ್ರಯದಲ್ಲಿ ಸರ್ವಶಿಕ್ಷಣ ಅಭಿಯಾನದಡಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಮಾತನಾಡಿ, ಇಂದು ಸರ್ಕಾರ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಶಿಕ್ಷಕರು ಉತ್ತಮ ರೀತಿ ತಮ್ಮ ಕರ್ತವ್ಯ ನಿಭಾಯಿಸುವ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಅತಿ ಅವಶ್ಯ. ಶಾಲೆಗೆ ಬೇಕಾಗುವ ಮೂಲ ಸೌಲಭ್ಯಗಳಿಗಾಗಿ ತಾವೂ ತಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಎಸ್ಡಿಎಂಸಿ ಅಧ್ಯಕ್ಷ ದಶರಥ ಕುರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಫಕ್ರುಸಾಬ್ ಹಾರೋಗೇರಿ, ಮಂಜುನಾಥ ಇಟಗಿ, ಮುದಿಯಪ್ಪ ಕುಂಬಾರ, ಬಸವರಾಜ ರಾಮೇನಹಳ್ಳಿ, ದಾನೇಶ್ವರಿ ಭಜಂತ್ರಿ, ರಾಘವೇಂದ್ರ ಕುರಿಯವರ, ಪರುಶುರಾಮ ಕರಡಿಕೊಳ್ಳ, ಶಾಂತವ್ವ ಬಳ್ಳಾರಿ, ಸೋಮನಗೌಡ ಗೌಡರ, ಬಸವರಾಜ ದೇಸಾಯಿ, ಬಸವರಾಜ ನೆರೇಗಲ್ಲ, ವಿರೇಶ ಸಜ್ಜನರ, ಮೋಹನ್ ದೇಸಾಯಿ, ಪಾಲಾಕ್ಷಿ ಗಣದಿಣ್ಣಿ, ಅಬ್ದುಲ್ ಖುರೇಶಿ, ಲಿಂಗರಾಜಗೌಡ ಪಾಟೀಲ, ಶ್ರೀನಿವಾಸ ಅಬ್ಬಿಗೇರಿ, ದೇವಪ್ಪ ಇಟಗಿ, ದೇವಕ್ಕ ಮಾಯಮ್ಮನವರ ಇದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ಪ್ರಾಸ್ತಾವಿಕ ಮಾತನಾಡಿದರು. ವಿಶ್ವನಾಥ ಉಳ್ಳಾಗಡ್ಡಿ, ಎಚ್.ಎಂ. ಹದ್ಲಿ ನಿರೂಪಿಸಿದರು. ಎಸ್.ಎಸ್. ನಂಜನಗೂಡ ವಂದಿಸಿದರು. ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಕೋಟೆ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ರಚಿಸಿದ, ಡಾ.ನಿಂಗು ಸೊಲಗಿ ನಿರ್ದೇಶಿಸಿದ ಸಕಾಲ ಕಿರು ನಾಟಕ ಪ್ರದರ್ಶನಗೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

