ಗದಗ

ವಿವೇಕಾನಂದರ ಆದರ್ಶ ಪಾಲಿಸಿ: ಡಾ. ದಂಡಿನ

Published On :

ಗದಗ: ಯುವಕರಿಗೆ ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ಸ್ಫೂರ್ತಿದಾಯಕವಾಗಿವೆ. ಸ್ವಾಮಿ ವಿವೇಕಾನಂದರ ತತ್ವ-ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಡಾ. ಬಿ.ಎಫ್. ದಂಡಿನ ಹೇಳಿದರು.
ಅವರು ಸ್ಥಳೀಯ ಕೆಎಸ್‌ಎಸ್ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಕೆಎಸ್‌ಎಸ್ ಕಾಲೇಜಿನಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿದ್ದ ಸ್ವಾಮಿ ವಿವೇಕಾನಂದರ 152ನೇ ಜಯಂತ್ಯುತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೆವಿಎಸ್‌ಆರ್ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಎಸ್.ಎಚ್. ದೇಶಪ್ಪನವರ ಮಾತನಾಡಿ, ವಿವೇಕಾನಂದರು ಭರವಸೆ ಇಟ್ಟಿದ್ದು ಯುವಕರಲ್ಲಿ. ಯುವಕರು ಜಾಗ್ರತರಾಗಿ ದೇಶ ಕಟ್ಟುವ ಕೆಲಸ ಮಾಡಿ ಎಂದರು. ಪ್ರಾಚಾರ್ಯ ಎಂ.ಎನ್. ಕಾಮನಹಳ್ಳಿ ಸ್ವಾಗತಿಸಿ, ಡಾ. ಶರಣಬಸವ ವೆಂಕಟಾಪುರ ಪರಿಚಯಿಸಿದರು. ಹಿರೇಮಠ ಪ್ರಾರ್ಥಿಸಿ, ಡಾ. ಎಂ.ಎಸ್. ನರೆಗಲ್ಲ ನಿರೂಪಿಸಿದರು. ಜಿ.ಸಿ. ಜಂಪಣ್ಣವರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.