ಬಸವೇಶ್ವರ ಯುವಕ ಸಂಘ ಶಿಕ್ಷಣಕ್ಕೆ ಒತ್ತು ನೀಡಲಿ
ಕನ್ನಡಪ್ರಭ ವಾರ್ತೆ, ಗದಗ, ಫೆ. 3
ಬೆಟಗೇರಿಯ ಗೌರಿಗುಡಿ ಓಣಿಯಲ್ಲಿ ಹೆಚ್ಚಾಗಿ ರೈತ ವರ್ಗದವರು ಜೀವನ ಸಾಗಿಸುತ್ತಿದ್ದು, ಇಂತಹವರ ಮಧ್ಯದಲ್ಲಿಯೇ ಬಸವೇಶ್ವರ ಯುವಕ ಸಂಘ ಹಾಗೂ ಗೌರಿಗಣೇಶ ಶಿಕ್ಷಣ ಸಂಸ್ಥೆಯ ವತಿಯಿಂದ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಉದ್ದೇಶದಿಂದ ಈ ಭಾಗದಲ್ಲಿ ಶಾಲೆಯೊಂದನ್ನು ಪ್ರಾರಂಭಿಸಿರುವುದು ಶ್ಲಾಘನೀಯ. ಈ ಭಾಗದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಈಚೆಗೆ ಬೆಟಗೇರಿಯ ಗೌರಿಗುಡಿ ಓಣಿಯ ಹುಯಿಲಗೋಳ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ಬಸವೇಶ್ವರ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು. ಇಂದು ಪ್ರತಿ ರಂಗದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿ. ಪ್ರತಿಯೊಬ್ಬರೂ ಶಿಕ್ಷಣವಂತರನ್ನಾಗಿಸುವ ಉದ್ದೇಶದಿಂದ ಸರ್ಕಾರವು ಹಲವು ವಿಧಾಯಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತ ಬಡವರ್ಗದ ಜನರಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮಿಸುತ್ತಿದೆ. ಅದೇ ರೀತಿ ಪಾಲಕರು ಹಾಗೂ ಸಂಘಟಿಕರು ಸರ್ಕಾರವು ನೀಡುವ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಕಾರ್ಯವನ್ನು ಮಾಡಬೇಕು. ಪಾಲಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡುವಂತಾಗಬೇಕು. ಮಕ್ಕಳೇ ನಾಳೆಯ ಭವಿಷ್ಯದ ಭದ್ರ ಬುನಾದಿಯಾಗಿದ್ದು, ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮಿಸಬೇಕಾಗಿದೆ ಎಂದರು.
ಶಾಸಕರ ನಿಧಿಯಿಂದ ಹಾಗೂ ಹಲವು ಮಹನೀಯರ ಸಹಕಾರದಲ್ಲಿ ಇಲ್ಲಿ ಸುಂದರ ಸಮುದಾಯ ಭವನ ನಿರ್ಮಿಸಲಾಗಿದೆ. ಅಲ್ಲದೇ ಈ ಭವನದ ಮೇಲ್ಭಾಗದಲ್ಲಿ ಹೆಚ್ಚುವರಿ ಕೊಠಡಿಯನ್ನು ನಿರ್ಮಿಸುವ ಉದ್ದೇಶ ಹೊಂದಿರುವುದಾಗಿ ಸಂಘಟಿಕರು ತಿಳಿಸಿದ್ದು, ಇದಕ್ಕೆ ಬೇಕಾದ ರು. 5 ಲಕ್ಷ ಬಿಡುಗಡೆಗೊಳಿಸಲಾಗುವುದು ಎಂದರು. ಸಾನ್ನಿಧ್ಯ ವಹಿಸಿದ್ದ ಸೂಡಿಯ ಜುಕ್ತಿಹಿರೇಮಠದ ಡಾ. ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು ಆಶೀರ್ವಚನ ನೀಡಿದರು. ವೀರಶೈವ ಸಮಾಜದ ಅಧ್ಯಕ್ಷ ವೀರಣ್ಣ ಮುಳ್ಳಾಳ ಅಧ್ಯಕ್ಷತೆ ವಹಿಸಿದ್ದರು. ನಗರಸಭೆಯ ಮಾಜಿ ಅಧ್ಯಕ್ಷ ಶಿವಣ್ಣ ಮುಳಗುಂದ, ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ, ನಗರಸಭೆ ಸದಸ್ಯ ಎಂ.ಎಚ್. ಮುಳಗುಂದ, ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಸುದೀಪ ಕಣವಿ, ಪ್ರಕಾಶ ಮ್ಯಾಗೇರಿ, ಶಶಿ ಮ್ಯಾಗೇರಿ, ಮಹೇಶ ಚಿಕ್ಕನಗೌಡ್ರ, ಬಸವರಾಜ ಬೆಂತೂರ, ಸಂಗಪ್ಪ ಗುಡಿಮನಿ, ಕೊಟ್ರಪ್ಪ ಹರ್ಲಾಪುರ, ಶ್ರೀಶೈಲಪ್ಪ ಕವಳಿಕಾಯಿ, ಸತೀಶ ಕುಂದಗೋಳ ಮುಂತಾದವರು ಉಪಸ್ಥಿತರಿದ್ದರು. ಗೌರಿಗಣೇಶ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಶರಣಬಸಪ್ಪ ಗುಡಿಮನಿ ಸ್ವಾಗತಿಸಿದರು. ತೇಜಶ್ವಿನಿ ಕುಂದಗೋಳ ಹಾಗೂ ಶ್ರೀನಿವಾಸ ಹಡಪದ ನಿರೂಪಿಸಿದರು. ಶಿಕ್ಷಣ ಸಂಸ್ಥೆಯ ನಿರ್ದೇಶಕ ಬಸವರಾಜ ಕುಂದಗೋಳ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

