ಗದಗ

ಹಳ್ಳಿಗಳು ಸಮಗ್ರ ಅಭಿವೃದ್ಧಿಯಾಗಲಿ: ದೊಡ್ಡಮನಿ

Published On :

ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಫೆ. 3
ಗ್ರಾಮೀಣ ಪ್ರದೇಶಗಳ ಮೂಲ ಸೌಲಭ್ಯ ಒದಗಿಸಿಕೊಡುವಲ್ಲಿ ಸರ್ಕಾರ ಸಾಕಷ್ಟು ಯೋಜನೆ ಹಾಕಿಕೊಂಡಿದ್ದು, ಅವುಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಸಮಿಪದ ಶಿಗ್ಲಿ ಗ್ರಾಮದಲ್ಲಿ ಸೋಮವಾರ ಜಿಪಂ, ತಾಪಂ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಲ ನಿರ್ಮಲ ಯೋಜನೆಯಡಿ ರು. 1.60 ಲಕ್ಷ ವೆಚ್ಚದಲ್ಲಿ ಸಿಮೆಂಟ್ ರಸ್ತೆ, ಚರಂಡಿ ಕಾಮಗಾರಿಗೆ ಭೂಮಿ ಪೂಜೆ ಹಾಗೂ 2 ಅಂಗನವಾಡಿ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಗ್ಲಿ ಗ್ರಾಪಂ ಜಿಲ್ಲೆಯಲ್ಲಿಯೇ ದೊಡ್ಡದಾಗಿದ್ದು, ಪಪಂ ಆಗಿ ಪರಿವರ್ತನೆಯಾಗುವ ಹಂತದಲ್ಲಿದೆ. ಗ್ರಾಮ ಬೆಳವಣಿಗೆಗೆ ತಕ್ಕಂತೆ ಮೂಲ ಸೌಲಭ್ಯ ಒದಗಿಸಿಕೊಡುವುದು ಗ್ರಾಪಂ ಜವಾಬ್ದಾರಿಯೂ ಹೆಚ್ಚುತ್ತದೆ. ಸರ್ಕಾರ ಗ್ರಾಮಕ್ಕೆ ಸದ್ಯದಲ್ಲಿಯೇ ಸೌರ ವಿದ್ಯುತ್, ಶುದ್ಧ ಕುಡಿಯುವ ನೀರು, ಆಶ್ರಯ ಮನೆ ಸೇರಿದಂತೆ ಮೂಲ ಸೌಕರ್ಯ ನೀಡಲು ಮುಂದಾಗಿದೆ. ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಲು ಮತ್ತು ಕಾಮಗಾರಿಗಳು ಉತ್ತಮ ಗುಣಮಟ್ಟದ್ದಾಗಿರುವಂತೆ ಗ್ರಾಪಂ ಆಡಳಿತ ಮಂಡಳಿ ಮತ್ತು ಸ್ಥಳೀಯ ಅಧಿಕಾರಿಗಳು ಜವಾಬ್ದಾರಿವಹಿಸಬೇಕು ಎಂದರು.
ಎಂ.ಎಸ್. ದೊಡ್ಡಗೌಡರ, ಡಿ.ವೈ. ಹುನಗುಂದ, ನಿರ್ಮಲಾ ಬರದೂರ, ಸುನಂದಮ್ಮ ಬಿದರಳ್ಳಿ, ಗ್ರಾಪಂ ಉಪಾಧ್ಯಕ್ಷ ಮನೋಹರ ಕರ್ಜಗಿ, ಗ್ರಾಪಂ ಮಾಜಿ ಅಧ್ಯಕ್ಷ ರಾಮಣ್ಣ ಲಮಾಣಿ, ಯಲ್ಲಪ್ಪ ತಳವಾರ, ರಾಜರತ್ನ ಹುಲಗೂರ, ರಫೀಕ ಕಲಬುರ್ಗಿ, ಅಶೋಕ ಮುಳಗುಂದ, ಸಿದ್ದಣ್ಣ ಯಲಿಗಾರ, ಸೋಮಣ್ಣ ಡಾಣಗಲ್, ಪ್ರಕಾಶ ರಜಪೂತ, ಅಪ್ಪಣ್ಣ ನೂಲ್ವಿ ಇದ್ದರು. ಪಿಡಿಒ ಬೀರೇಶ ಅಮ್ಮನವರ ಸ್ವಾಗತಿಸಿದರು. ಬಸಣ್ಣ ಕಳಸದ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.