ಗದಗ

ವಿವಿಧ ಗ್ರಾಮಗಳ ಕಾಮಗಾರಿ ಪರಿಶೀಲಿಸಿದ ಸಿಇಒ ತುರಮರಿ

Published On :

ಕನ್ನಡಪ್ರಭ ವಾರ್ತೆ, ಗದಗ, ಫೆ. 3
ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಕೇರಿ, ಮುಷ್ಠಿಕೊಪ್ಪ, ತಿಪ್ಪಾಪುರ ಗ್ರಾಮಗಳಲ್ಲಿಯ ಕಾಮಗಾರಿಗಳನ್ನು ಶನಿವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೀರಣ್ಣ ತುರಮರಿ ಪರಿಶೀಲಿಸಿದರು.
2013-14ನೇ ಸಾಲಿನ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಕೂಲಿ ಕಾರ್ಮಿಕರ ಜಾಬ್ ಕಾರ್ಡ್ಗಳನ್ನು ಹಾಗೂ ಕಾರ್ಮಿಕರೊಂದಿಗೆ ಚರ್ಚೆ ನಡೆಸಿದರು.
ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವ ಹಿತ ದೃಷ್ಟಿಯಿಂದ ಸರ್ಕಾರ 15 ಅಂಶಗಳ ಕಾರ್ಯಗಳಲ್ಲಿ ಮುಖ್ಯವಾಗಿ ರೈತರ ಒಕ್ಕಲಿ ಕಣ ಹಾಗೂ ಮುಷ್ಠಿಕೊಪ್ಪ ಗ್ರಾಮದ ಆಟದ ಮೈದಾನ ಅಭಿವೃದ್ಧಿ ಹಾಗೂ ರೈತರಿಗೆ ಉಪಯುಕ್ತವಾದ ಹೊಳಗಟ್ಟಿ ಕುರಿತು ಸೂಕ್ತ ಸಲಹೆ ಸೂಚನೆ ನೀಡಿದರು.
ಸರ್ಕಾರ ಮಹಾತ್ವಾಕಾಂಕ್ಷಿ ಯೋಜನೆಗಳಾದ ಕುರಿದೊಡ್ಡಿ, ಗೋಹಟ್ಟಿ ಕಾರ್ಯಗಳನ್ನು ವೀಕ್ಷಿಸಿ, ನಿರ್ಮಲ ಭಾರತ ಅಭಿಯಾನ ಯೋಜನೆಯಡಿ ಗ್ರಾಪಂ ವ್ಯಾಪ್ತಿಯ ಪ್ರತಿ ಕುಟುಂಬಗಳು ಶೌಚಾಲಯ ನಿರ್ಮಿಸಿಕೊಳ್ಳಲು ಮುಂದಾಗಬೇಕು. ಹೆಚ್ಚಿನ ಮಾಹಿತಿಗಾಗಿ ಗ್ರಾಪಂ ಕಾರ್ಯಾಲಯವನ್ನು ಸಂಪರ್ಕಿಸುವಂತೆ ಗ್ರಾಮಸ್ಥರಿಗೆ ತಿಳಿಸಿದರು.
ತಾಪಂ ಇಒ ಡಿ. ಮೋಹನ, ಎಇಇ ಬಸವರಾಜಪ್ಪ, ಗ್ರಾಪಂ ಪ್ರಭಾರಿ ಪಿಡಿಒ ಜೆ.ಕೆ. ಉಳ್ಳಟ್ಟಿ, ಗ್ರಾಪಂ ಅಧ್ಯಕ್ಷ ಆರ್.ಬಿ. ಮೇಟಿ, ಸದಸ್ಯ ಪರಮೇಶಪ್ಪ, ಜಲಾನಯನ ಇಲಾಖೆ ಅಧಿಕಾರಿ ಜೆ.ಇ. ಪ್ರಕಾಶ ಮ್ಯಾಕಲ್, ಪ್ರಕಾಶ, ವಿ.ವಿ. ತಾಮ್ರಗುಂಡಿ ಸೇರಿದಂತೆ ಗ್ರಾಮಸ್ಥರು, ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.