ಶೈಕ್ಷಣಿಕ ಗುರಿಗೆ ಶಿಕ್ಷಕರ ಸಹಕಾರ ಮುಖ್ಯ
ಗಜೇಂದ್ರಗಡ: ವಿದ್ಯಾರ್ಥಿಗಳು ಕ್ರಿಯಾಶೀಲತೆಯಿಂದ ಏಕಾಗ್ರತಾ ಮನೋಭಾನೆಯಿಂದ ಅಧ್ಯಯನ ಮಾಡಿದಾಗ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಜತೆಗೆ ವಿದ್ಯಾರ್ಥಿಗಳು ಶೈಕ್ಷಣಿಕ ಗುರಿ ಸಾಧಿಸುವಲ್ಲಿ ಶಿಕ್ಷಕರ ಮತ್ತು ಪಾಲಕರ ಸಹಕಾರ ಪ್ರಾಮುಖ್ಯವಾದದ್ದು ಎಂದು ಚುಟುಕು ಸಾಹಿತಿ ಎಂ.ಎಸ್. ಮಕಾನದಾರ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಈಚೆಗೆ ಏರ್ಪಡಿಸಿದ್ದ ಪರೀಕ್ಷೆ ಎಂದರೆ ಮಹಾಸಂಭ್ರಮ ಎಂಬ ಪ್ರಾಯೋಜಿತ ಸಮಾರಂಭದಲ್ಲಿ ಉಪನ್ಯಾಸ ನೀಡಿದರು. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿದ್ದು, ಈ ದೆಸೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಭಯದಿಂದ ಹೊರಬಂದು ಏಕಾಗ್ರತೆಯಿಂದ ಅಭ್ಯಾಸ ಮಾಡಬೇಕು. ಜತೆಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಆತ್ಮ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಮನವರಿಕೆ ಮಾಡಿದಾಗ ವಿದ್ಯಾರ್ಥಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು. ಮುಖ್ಯೋಪಾಧ್ಯಾಯ ಎಸ್.ಎಫ್. ಜಾಲಿಹಾಳ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಪರೀಕ್ಷೆ ಭಯ ಹೊರ ಹಾಕುವುದಲ್ಲದೇ ಸೂಕ್ತ ಮಾರ್ಗದರ್ಶನ ನೀಡಿ ಶ್ರೇಣಿಕೃತ ವಿಷಯಗಳ ಕುರಿತು ಸಮಾಲೋಚಿಸಿ ಮಕ್ಕಳಿಗೆ ಸಲಹೆ ನೀಡಿದಾಗ ವಿದ್ಯಾರ್ಥಿಗಳು ನಿರಾಳವಾಗಿ ಪರೀಕ್ಷೆ ಎದುರಿಸಲು ಸಹಕಾರಿಯಾಗುತ್ತದೆ ಎಂದರು. ಸಹನಾ ಬೀಡಿಕರ, ರೇಖಾ ಕಲ್ಗೂಡಿ, ಮೇಘಾನಾ ಕೊಟಗಿ, ವಾಣಿಶ್ರೀ ದಲಬಂಜನ್, ಸಾವಿತ್ರಿ ಕುರುಮನಾಳ ಪ್ರಶ್ನೋತ್ತರದಲ್ಲಿ ಭಾಗವಹಿಸಿ ಪರೀಕ್ಷೆಗೆ ಸಂಬಂಧಿಸಿದ ಹಲವಾರು ಪ್ರಶ್ನೆಗಳಿಗೆ ಶಿಕ್ಷಕರಿಂದ ಉತ್ತರ ಪಡೆದರು. ಎಸ್.ಎ. ಬನ್ನಿಗೊಳ, ಕೆ.ಸಿ. ಲಮಾಣಿ, ಕೆ.ಎಸ್. ಮುಶಿಗೇರಿ, ಎಸ್.ಡಿ. ಕುರಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

