ಸಂಗೀತ ನೀತಿ ಪಾಠ ಕಲಿಸುತ್ತದೆ
ಮುಂಡರಗಿ: ಸಂಗೀತ ಮನಸ್ಸನ್ನು ಅರಳಿಸುವುದರೊಂದಿಗೆ ನೀತಿ ಪಾಠ ಕಲಿಸುತ್ತದೆ. ಮಕ್ಕಳು ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಇಂತಹ ವೇದಿಕೆ ಉಪಯೋಗಿಸಿಕೊಳ್ಳಬೇಕು ಎಂದು ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಂ. ಕೊಟಗಿ ಹೇಳಿದರು.
ಅವರು ಸೋಮವಾರ ಪಟ್ಟಣದ ಜೆ.ಟಿ.ಕೋಟೆ ಪ್ರೌಢಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮುಂಡರಗಿಯ ಜೆ.ಟಿ. ಕೋಟೆ ಪ್ರೌಢ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ರಾಜಶ್ರೀ ಅರುಣ ಕುಲಕರ್ಣಿ ಅವರ ಸಂಗೀತ ಸೌರಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಸರ್ವಾಗೀಂಣ ಪ್ರಗತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಕಾರ್ಯಕ್ರಮ ನೀಡುವುದರೊಂದಿಗೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು. ಕೆ.ಆರ್.ಬೆಲ್ಲದ ಕಾಲೇಜಿನ ಪ್ರೊ. ಆರ್.ಎಲ್. ಪೊಲೀಸ್ಪಾಟೀಲ ಮಾತನಾಡಿ, ರಾಜಶ್ರೀ ಕುಲಕರ್ಣಿ ಅವರು ನೀಡಿದ ಸಂಗೀತ ಕಾರ್ಯಕ್ರಮ ಉತ್ತಮವಾಗಿತ್ತು. ಮಕ್ಕಳಿಗೆ ಸಂಗೀತದ ರಸದೌತಣ ಉಣಿಸುವ ಮೂಲಕ ಮಕ್ಕಳಲ್ಲಿ ಸಂಗೀತದ ಕುರಿತು ತಿಳಿವಳಿಕೆ ನೀಡುವುದು ಅವಶ್ಯವಾಗಿದೆ. ವಿದ್ಯಾರ್ಥಿಗಳು ಇಂತಹ ಸಂಗೀತ ಕಾರ್ಯಕ್ರಮಗಳ ಸದುಪಯೋಗ ಪಡೆಯುವುದುಕೊಳ್ಳಬೇಕು ಎಂದರು. ಮಕ್ಕಳ ಸಾಹಿತಿ ಡಾ. ನಿಂಗು ಸೊಲಗಿ, ನಿವೃತ್ತ ಮುಖ್ಯೋಪಾಧ್ಯಾಯ ಕೆ.ಎ. ಹಿರೇಮಠ ಮುಂತಾದವರು ಉಪಸ್ಥಿತರಿದ್ದರು. ಭುವನೇಶ್ವರಿ ವಿದ್ಯಾವರ್ಧಕ ಸಮಿತಿಯ ಅಧ್ಯಕ್ಷ ಡಿ.ಜಿ. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ನಂತರ ರಾಜಶ್ರೀ ಕುಲಕರ್ಣಿ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು. ಎಂ.ವಿ. ಕೋಳಿವಾಡ ಹಾರ್ಮೋನಿಯಂ ಸಾಥ್ ಮತ್ತು ಜಿ.ಜಿ. ಸುತಾರೆ ತಬಲಾ ಸಾಥ್ ನೀಡಿದರು. ಅರುಣ ಕುಲಕರ್ಣಿ ಮಾತನಾಡಿದರು. ಮುಖ್ಯೋಪಾಧ್ಯಾಯ ಎಂ.ಕೆ. ತಳಗಡೆ ಸ್ವಾಗತಿಸಿದರು. ಶಿಕ್ಷಕ ಎನ್.ಎಸ್. ಅಲ್ಲಿಪುರ ನಿರೂಪಿಸಿದರು. ಶಿಕ್ಷಕ ಎಂ.ಟಿ. ಮಾಳಾಪುರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

