ಬೇಡಿಕೆ ಈಡೇರಿಕೆಗೆ ಕ್ರಮ: ಧರಣಿ ಕೈಬಿಡಿ
ನರೇಗಲ್ಲ: ಸಾರ್ವಜನಿಕರ ಬೇಡಿಕೆ ಈಡೇರಿಕೆಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಪಪಂ ಮುಂಭಾಗದಲ್ಲಿ ಪಪಂ ಬಿಜೆಪಿ ಸದಸ್ಯರು ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಬಿಡುವಂತೆ ಪಪಂ ಅಧ್ಯಕ್ಷೆ ಬಸಮ್ಮ ಲಕ್ಕನಗೌಡ್ರ ಪ್ರತಿಭಟನಾಕಾರರಿಗೆ ಮನವಿ ಮಾಡಿದರು.
2013-14ನೇ ವಾಜಪೇಯಿ ವಸತಿ ಯೋಜನೆಯಲ್ಲಿ 40 ಮನೆಗಳ ಫಲಾನುಭವಿಗಳ ಆಯ್ಕೆಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಪರಿಶೀಲನೆ, ದ್ಯಾಂಪುರ ಹತ್ತಿರ ನಿರ್ಮಾಣವಾಗುತ್ತಿರುವ ಸುಮಾರು 1240 ವಾಜಪೇಯಿ ನಗರ ನಿವೇಶನದ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಕ್ರಮ, ಹಳೆಯ ಕಟ್ಟಡದಲ್ಲಿರುವ ಗ್ರಂಥಾಲಯವನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಕುರಿತು ಈಗಾಗಲೇ ಸಂಬಂಧಿಸಿದ ಇಲಾಖೆಗೆ ಪತ್ರ ಬರೆಯಲಾಗಿದ್ದು, ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
2012-13ನೇ ಸಾಲಿನ ಮುಖ್ಯಮಂತ್ರಿಗಳ ನಿಧಿಯಿಂದ ರು. 4 ಕೋಟಿ ಅನುದಾನದ ನಗರೋತ್ಥಾನ ಯೋಜನೆಯಡಿಯಲ್ಲಿ ಕಾಮಗಾರಿಗಾಗಿ ಜಿಲ್ಲಾ ಮಟ್ಟದಲ್ಲಿ ಟೆಂಡರ್ ಕರೆಯಲಾಗಿದೆ. ಈ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿಗಳ ತಾಂತ್ರಿಕ ಹಾಗೂ ಹಣಕಾಸಿನ ಬಿಡ್ಗಳನ್ನು ಪರಿಶೀಲನೆ ನಡೆದಿರುತ್ತದೆ. ಪಪಂ ಅನುದಾನದ ಶೇ. 22.75ರಲ್ಲಿ ಬಂದ ಬಡಿಗತನ ಸಾಮಗ್ರಿ, ಲೀಡಕರ ಡಬ್ಬಿ, ಅಂಗವಿಕಲರ ತ್ರೀವೀಲ್ ಮೋಟರ್ ಸೈಕಲ್, ಕಟ್ಟಡ ಕಾರ್ಮಿಕರ ಸಾಮಗ್ರಿ, ಗ್ಯಾಸ್ ಒಲೆ ಹಾಗೂ ಸಿಲಿಂಡರ್ ವಿತರಣೆ ಮಾಡಲಾಗುವುದು. ಪಟ್ಟಣದಲ್ಲಿ ಅವಶ್ಯವಿರುವ ಸ್ಥಳಗಳಲ್ಲಿ ಮಹಿಳಾ ಶೌಚಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
2005ರಿಂದ 2013ರ ವರೆಗೆ ನಡೆದಿರುವ ಎಲ್ಲಾ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಲು ಲೋಕಾಯುಕ್ತರಿಗೆ ನೀಡಲು ಸರ್ವ ಸದಸ್ಯರ ಸಮ್ಮತಿಯ ಮೇರೆಗೆ ಠರಾವು ಪಾಸ್ ಮಾಡುವ ಮೂಲಕ ತನಿಖೆಗೆ ಆಗ್ರಹಿಸುತ್ತೇವೆ ಎಂದು ಆಡಳಿತ ಪಕ್ಷದ ಕಾಂಗ್ರೆಸ್ ಸದಸ್ಯ ರಮೇಶ ಕಳಕೊಣ್ಣವರ ತಿಳಿಸಿದರು. ಇದಕ್ಕೆ ಸಮ್ಮತಿ ಸೂಚಿಸಿದ ಸದಸ್ಯರು ಧರಣಿಯನ್ನು ಹಿಂದಕ್ಕೆ ಪಡೆದರು.
ಉಪಾಧ್ಯಕ್ಷೆ ಅನ್ನಪೂರ್ಣಾ ಗಿಂಡಿ, ಕಲ್ಮೇಶ ತೊಂಡಿಹಾಳ, ಸುನೀಲ ಬಸವರಡ್ಡೇರ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

