ಗದಗ

ಉಕ ಅಭಿವೃದ್ಧಿಗೆ ಕಾಳಜಿವಹಿಸಿ: ತೋಂಟದ ಸಿದ್ಧಲಿಂಗ ಶ್ರೀಗಳು

Published On :

ಕನ್ನಡಪ್ರಭ ವಾರ್ತೆ, ಗದಗ, ಫೆ. 6
ಉತ್ತರ ಕರ್ನಾಟಕದ ಹಳ್ಳಿಗಳು ಅಭಿವೃದ್ಧಿಯಲ್ಲಿ ಇಂದಿಗೂ ಬಹಳಷ್ಟು ಹಿಂದುಳಿದಿವೆ. ಇವುಗಳ ಅಭಿವೃದ್ಧಿಗೆ ಸರ್ಕಾರದ ಇಚ್ಛಾಶಕ್ತಿ, ಶಾಸಕರು, ಮಂತ್ರಿಗಳ, ಅಧಿಕಾರಿಗಳ ಕಾಳಜಿ ಬಹಳ ಪ್ರಮುಖ ಪಾತ್ರ ವಹಿಸಬಲ್ಲದು ಎಂದು ತೋಂಟದ ಡಾ. ಸಿದ್ಧಲಿಂಗ ಶ್ರೀಗಳು ಹೇಳಿದರು.
ಅವರು ಈಚೆಗೆ ತೋಂಟದಾರ್ಯ ಮಠದಲ್ಲಿ ನಡೆದ 2157ನೇ ಶಿವಾನುಭವದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತ ಉಪನ್ಯಾಸ ಹಾಗೂ ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಎ.ಎಂ. ಗೌಡರ ದಂಪತಿಗೆ ಸನ್ಮಾನ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.
ಕರ್ನಾಟಕ ಎಂದರೆ ಕೇವಲ ಬೆಂಗಳೂರು-ಮೈಸೂರು ಎಂದಿದ್ದ ಭಾವನೆ ತೀರಾ ಇತ್ತೀಚೆಗೆ ಬದಲಾಗುತ್ತ ಬಂದಿದೆ. ಉತ್ತರ ಕರ್ನಾಟಕದತ್ತ ಸರ್ಕಾರಗಳು ಕಣ್ತೆರೆದು ನೋಡುತ್ತಿವೆ. ಡಾ. ನಂಜುಂಡಪ್ಪ ವರದಿ ಅನುಷ್ಠಾನ ಇನ್ನೂ ಪೂರ್ಣಗೊಂಡಿಲ್ಲ. ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ  371ಜೆ ವಿಧಿ ಮೂಲಕ ವಿಶೇಷ ಸ್ಥಾನಮಾನ ನೀಡಿದ್ದು ಮಹತ್ತರ ತಿರುವು. ಇದಕ್ಕಾಗಿ ಶ್ರಮಿಸಿದ ಕೇಂದ್ರ ಸಚಿವರುಗಳ ಕಾರ್ಯ ಮೆಚ್ಚುವಂತಹದ್ದು ಎಂದರು.
ಅತಿಥಿ ಉಪನ್ಯಾಸಕರಾಗಿ ಪಾಲ್ಗೊಂಡು ಉಕ ಸಮಸ್ಯೆಗಳ ಕುರಿತು ಉಪನ್ಯಾಸ ಮಂಡಿಸಿದ ಗುಲ್ಬರ್ಗದ ಡಾ. ಅಂಬೇಡ್ಕರ್ ಕಾಲೇಜಿನ ಪ್ರಾ. ಡಾ. ಬಸವರಾಜ ಕುಮ್ಮನೂರು ಹಲವಾರು ವಿಷಯಗಳ ಮೇಲೆ ಬೆಳಕು ಚೆಲ್ಲಿದರು. ಶಿವಾನಂದ ಪಟ್ಟಣಶೆಟ್ಟಿ, ದಲಾಲಿ, ಬಿ.ಎಸ್. ಮಲ್ಲಾಪುರ, ಎಚ್.ಎಸ್. ಸಿಂಧೆ, ಕಾಳೆ ಮೊದಲಾದವರು ಪಾಲ್ಗೊಂಡಿದ್ದರು. ಬೆಟಗೇರಿಯ ವರ್ಷಾ ಐಲಿ ಮತ್ತು ನಯನಾ ಐಲಿ ಇವರಿಂದ ವಚನ ಸಂಗೀತ ಕಾರ್ಯಕ್ರಮ ನಡೆಯಿತು. ಪೂಜಾ ಶಿವರೆಡ್ಡಿ ಹಾಗೂ ಸ್ಫೂರ್ತಿ ಯಚ್ಚಲಗಾರ ಅವರಿಂದ ಧರ್ಮಗ್ರಂಥ ಪಠಣ ಹಾಗೂ ಧರ್ಮಚಿಂತನ ನಡೆಯಿತು.
ಎಸ್.ಎನ್. ಆದಿ ಸ್ವಾಗತಿಸಿದರು. ಶಂಕ್ರಣ್ಣ ಅಂಗಡಿ ನಿರೂಪಿಸಿದರು. ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಪ್ರಕಾಶ ಕರಿಸೋಮನಗೌಡ್ರ ಉಪಾಧ್ಯಕ್ಷ ಮೃತ್ಯುಂಜಯ ಸಂಕೇಶ್ವರ, ಶಿವಲೀಲಮ್ಮ ಕುರಡಗಿ, ಈರಣ್ಣ ಹೊನಗಣ್ಣವರ, ಗುರಬಸವಲಿಂಗ ತಡಸದ, ಪ್ರಭಯ್ಯ ಹಿರೇಮಠ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.