ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ
ಕನ್ನಡಪ್ರಭ ವಾರ್ತೆ, ಗದಗ, ಫೆ. 6
ರೋಣ ಪಟ್ಟಣದಲ್ಲಿ ಫೆ. 22 ಹಾಗೂ 23ರಂದು ನಡೆಯಲಿರುವ ಗದಗ ಜಿಲ್ಲಾ 6ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜಿಲ್ಲೆಯ ಜಿಲ್ಲಾಡಳಿತ, ಎಲ್ಲ ಜನಪ್ರತಿನಿಧಿಗಳ, ಸಂಘ-ಸಂಸ್ಥೆಗಳು ಹಾಗೂ ಕನ್ನಡಾಭಿಮಾನಿಗಳ ಸಹಭಾಗಿತ್ವದೊಂದಿಗೆ ಅರ್ಥಪೂರ್ಣವಾಗಿ ನಡೆಸಲಾಗುವುದು ಎಂದು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಅವರು ಈಚೆಗೆ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಭಾಭವನದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ನಿಮಿತ್ತ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಗದಗ ಜಿಲ್ಲೆ ಸಾಂಸ್ಕೃತಿಕ, ಸಾಹಿತ್ಯಿಕ, ಸೃಜನಶೀಲ ಕಲೆ ಮುಂತಾದವುಗಳಲ್ಲಿ ತನ್ನದೇ ಆದ ವೈಶಿಷ್ಟತೆ ಹೊಂದಿದ್ದು, ಕನ್ನಡ ನಾಡು, ನುಡಿ, ಜಲ, ಭಾಷೆ ಮುಂತಾದವುಗಳಿಗೆ ಸಾಕಷ್ಟು ಕೊಡುಗೆ ನೀಡುತ್ತಾ ಬಂದಿದೆ. ಪ್ರಸ್ತುತ 6ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜಿಲ್ಲಾಡಳಿತದ ಅಧಿಕಾರಿಗಳು, ಜನಪ್ರತಿನಿಧಿಗಳು, ಸ್ಥಳೀಯ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡ ಸಾಹಿತ್ಯಾಭಿಮಾನಿಗಳೆಲ್ಲರೂ ಸಹಕಾರಗಳೊಂದಿಗೆ ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಕಸಾಪ ಜಿಲ್ಲಾ ಅಧ್ಯಕ್ಷ ಶಿವಪ್ಪ ಕುರಿ ಮಾತನಾಡಿ, ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಪ್ರತಿನಿಧಿಗಳಿಗೆ ಸಕಲ ಸೌಕರ್ಯ ಊಟ, ವಸತಿ, ಪ್ರತಿನಿಧಿಗಳ ಕಿಟ್, ವಿತರಿಸುವುದು ಸೇರಿದಂತೆ ಪುಸ್ತಕ ಪ್ರದರ್ಶನ ಮಳಿಗೆ, ಸ್ಥಳೀಯ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಾಗೂ ಸಾಹಿತ್ಯಿಕ ವಿವಿಧ ಗೋಷ್ಠಿಗಳನ್ನು ನಡೆಸುವುದು, ವಿವಿಧ ಲೇಖಕರ ಪುಸ್ತಕ ಬಿಡುಗಡೆ, ವಿವಿಧ ಸಾಂಸ್ಕೃತಿಕ, ಜಾನಪದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಮಾತನಾಡಿ, ಸಮ್ಮೇಳನದಲ್ಲಿ ಜಿಲ್ಲಾಡಳಿತ ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಸರ್ವ ರೀತಿಯಲ್ಲಿ ಸಹಕಾರ ನೀಡಿ ಸಮ್ಮೇಳನವನ್ನು ಯಶಸ್ವಿಗೊಳಿಸಲು ಶ್ರಮಿಸಲಿದೆ ಎಂದರು.
ಜಿಪಂ ಸಿಇಒ ವೀರಣ್ಣ ತುರಮರಿ ಮುಂತಾದವರು ಮಾತನಾಡಿದರು. ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯದರ್ಶಿ ಶರಣು ಗೋಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಬನಶಂಕರಿ ಅಂಗಡಿ ಸ್ವಾಗತಿಸಿದರು.
ಸಮ್ಮೇಳನ ಸಹ ಸಂಯೋಜಕ ವಿ.ಬಿ. ಸೋಮನಕಟ್ಟಿಮಠ ವಂದಿಸಿದರು. ಸ್ವಾಗತ ಸಮಿತಿ ಸಂಯೋಜಕ ಮಿಥುನ ಪಾಟೀಲ, ಆಹಾರ ಸಮಿತಿ ಅಧ್ಯಕ್ಷ ವಿ.ಆರ್. ಗುಡಿಸಾಗರ, ಹಣಕಾಸು ಸಮಿತಿ ಉಪಾಧ್ಯಕ್ಷ ದಶರಥ ಗಾಣಿಗೇರ, ಯೂಸುಫ್ ಇಟಗಿ, ಡಾ. ಸಂಗಮೇಶ ತಮ್ಮನಗೌಡ್ರ, ಮಲ್ಲೇಶ ಡಿ.ಎಚ್., ಪಿ.ಸಿ. ಕಲಹಾಳ, ಎಸ್.ಬಿ. ಹೀರೆಮಠ, ಕಿಶೋರಬಾಬು ನಾಗರಕಟ್ಟಿ, ಶಂಕ್ರಣ್ಣ ಸಂಕಣ್ಣವರ, ಆರ್.ಬಿ.ಚಿನಿವಾಲರ, ರಮೇಶ ಸಜ್ಜಗಾರ, ಕವಿತಾ ಬೇಲೆರಿ, ಡಾ. ಶಿವರಾಜ ಗುರಿಕಾರ, ಕೆ.ಎಸ್. ಕಳಕಣ್ಣವರ ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

