ಗದಗ

ಕನಕ ಬೀಜ: ಪರಿಹಾರಕ್ಕೆ ಆಗ್ರಹ

Published On :

ಕನ್ನಡಪ್ರಭ ವಾರ್ತೆ, ನರಗುಂದ, ಫೆ. 7
ಮಹಿಕೋ ಕಂಪನಿಯ ಕನಕ ಬೀಜ ಬಿತ್ತನೆ ಮಾಡಿ ನಷ್ಟ ಹೊಂದಿದ ರೈತರಿಗೆ ಪರಿಹಾರ ವಿತರಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಕಂಪನಿ ಕ್ರಮ ವಿರೋಧಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಈಚೆಗೆ ತಹಸೀಲ್ದಾರ್ ಮೂಲಕ ಕೃಷಿ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಚನ್ನು ನಂದಿ ಮಾತನಾಡಿ, ತಾಲೂಕಿನ ರೈತರು ಮಹಿಕೋ ಕಂಪನಿಯ ನಕಲಿ ಬೀಜಗಳಾದ ಕನಕ ಬಿಟಿ ಹತ್ತಿ ಬೀಜಗಳನ್ನು ಬಿತ್ತಿ ಕೈ ಸುಟ್ಟುಕೊಂಡಿದ್ದಾರೆ. ಈ ಭಾಗದ ಎಲ್ಲ ರೈತರು ಕನಕ ಬಿಟಿ ಹತ್ತಿ ಬೀಜ ಬಿತ್ತನೆ ಮಾಡಿ ನಾಲ್ಕೈದು ತಿಂಗಳ ಗತಿಸಿದರೂ ಹತ್ತಿ ಬೆಳೆಯಲ್ಲಿ ಹೂವು, ಮಗ್ಗಿ, ಕಾಯಿಯಾಗದೇ ಬೆಳೆದ ಬೆಳೆ ಸಂಪೂರ್ಣ ಹಾಳಾಗಿದೆ. ಇದರಿಂದಾಗಿ ಬಹುತೇಕ ತಾಲೂಕಿನ ರೈತರು ನಷ್ಟ ಅನಭವಿಸುವಂತಾಗಿದೆ. ಹಾಗಾಗಿ ನಷ್ಟ ಹೊಂದಿರುವ ರೈತರಿಗೆ ಕಂಪನಿಯಿಂದ ರು. 25 ಸಾವಿರ ಪರಿಹಾರ ನೀಡಬೇಕು ಎಂದು ಕೃಷಿ ಇಲಾಖೆಗೆ ಅರ್ಜಿ ಸಲ್ಲಿಸಿದರೂ ಇಲ್ಲಿವರೆಗೆ ಕೃಷಿ ಇಲಾಖೆ ಬಿ.ಟಿ. ಹತ್ತಿ ನಷ್ಟವಾದ ಬಗ್ಗೆ ಸರಿಯಾಗಿ ಪರಿಶೀಲನೆ ಮಾಡಿಲ್ಲ.
ತಾಲೂಕಿನಲ್ಲಿ ಗ್ರಾಮೀಣ ಪ್ರದೇಶದ ರೈತರಿಗೆ ಬಿಟಿ ಹತ್ತಿ ನಷ್ಟವಾದ ಬಗ್ಗೆ ಅರ್ಜಿ ಸಲ್ಲಿಸುವ ಮಾಹಿತಿ ಇಲ್ಲದೇ ಇರುವುದರಿಂದ ಇನ್ನೂ ಶೇ. 50ರಷ್ಟು ರೈತರು ಅರ್ಜಿ ಸಲ್ಲಿಸಿಲ್ಲ. ಈ ಕುರಿತು ಜಿಲ್ಲಾಡಳಿತ ಕ್ರಮ ಕೈಗೊಂಡು ಈ ತಿಂಗಳ ಅಂತ್ಯದೊಳಗೆ ಪ್ರತಿ ಎಕರೆಗೆ ರು. 25 ಸಾವಿರ ಪರಿಹಾರ ನೀಡಬೇಕು. ಇಲ್ಲದೇ ಹೋದಲ್ಲಿ ನರಗುಂದ ಬಂದ್ ಮಾಡಿ ಪ್ರತಿಭಟಿಸುವುದಾಗಿ ತಿಳಿಸಿದರು.
ತಹಸೀಲ್ದಾರ್ ಎಂ. ಸಂತೋಷ ಮನವಿ ಸ್ವೀಕರಿಸಿ ಮಾತನಾಡಿ, ಶೀಘ್ರ ಸರ್ಕಾರಕ್ಕೆ ಅರ್ಜಿ ಕಳಸಿಕೊಡಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕಳಸಾ ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ, ಬಸವರಾಜ ತಾವರೆ, ಎನ್.ಎ. ಮೂಗನೂರ, ಸಂಗಪ್ಪ ಪೂಜಾರ, ಪ್ರಶಾಂತ ಚಿತ್ರಗಾರ, ಸಂಜೀವ ನಲವಡಿ, ಸಂದೀಪ ಸುಬೇದಾರ, ನಿಖಿಲ್ ಸುಬೇದಾರ, ನಾಗಾರಾಜ ಚಿತ್ರಗಾರ, ಶಿವಪ್ಪ ಬೋಳಶಟ್ಟಿ, ಬಿ.ಎನ್. ನರಗುಂದ, ಮಂಜು ದೊಡಮನಿ, ಮಲ್ಲಿಕಾರ್ಜುನ ಭಜಂತ್ರಿ, ಎಚ್.ಬಿ. ತಲವಾಯಿ, ವೈ.ಬಿ. ಹೊರಮನಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.