ಪ್ರಜಾಪ್ರಭುತ್ವ ಸಾಕಾರಕ್ಕೆ ನ್ಯಾಯವಾದಿಗಳು ಶ್ರಮಿಸಲಿ
ಕನ್ನಡಪ್ರಭ ವಾರ್ತೆ, ಗದಗ, ಫೆ. 9
ಪ್ರಜಾಪ್ರಭುತ್ವದ ಮೂಲ ಆಶಯಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನ್ಯಾಯವಾದಿಗಳು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಭಾನುವಾರ ಸಂಜೆ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ರಾಜ್ಯ ವಕೀಲರ ಪರಿಷತ್ತು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ 3 ದಿನಗಳಿಂದ ಆಯೋಜಿಸಲಾಗಿದ್ದ ಕಾನೂನು ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ನಿರಂತರ ಅಧ್ಯಯನಶೀಲತೆಯ ಮೂಲಕ ನ್ಯಾಯವಾದಿಗಳು ತಮ್ಮ ವೈಯಕ್ತಿಕ ಬೆಳವಣಿಗೆಯೊಂದಿಗೆ ದೇಶದ ಅಭಿವೃದ್ಧಿಗೆ ಪ್ರಾಮುಖ್ಯ ನೀಡಬೇಕಿದೆ. ನ್ಯಾಯಾಂಗ ವ್ಯವಸ್ಥೆಗೆ ಅತ್ಯಂತ ಪ್ರಬಲವಾದ ಹಿನ್ನೆಲೆ ಇದ್ದು, ಒಂದೇ ಒಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಮಾಜದಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಲಿದೆ. ಈ ಹಿನ್ನೆಲೆಯಲ್ಲಿ ನ್ಯಾಯವಾದಿಗಳು ಹೆಚ್ಚಿನ ವೃತ್ತಿಪರತೆ ಬೆಳೆಸಿಕೊಳ್ಳಬೇಕು. ನ್ಯಾಯಾಲಯದಲ್ಲಿ ಮುಖ್ಯವಾಗಿ ಗ್ರಂಥಾಲಯಗಳ ಅವಶ್ಯಕತೆ ಇದ್ದು, ಸದ್ಯದಲ್ಲಿಯೇ ಗದಗ ಜಿಲ್ಲಾ ನ್ಯಾಯಾಲಯ ನೂತನ ಸಂಕೀರ್ಣ ಕಟ್ಟಡದಲ್ಲಿ ಅತ್ಯುತ್ತಮ ಗುಣಮಟ್ಟದ ಕಾನೂನು ಗ್ರಂಥಗಳನ್ನು ಹೊಂದಿದ ಗ್ರಂಥಾಲಯ ಸ್ಥಾಪಿಸಲಾಗುವುದು. ಈಚೆಗೆ ಜಿಲ್ಲಾ ನ್ಯಾಯಾಧೀಶ ಹುದ್ದೆಗಾಗಿ ನಡೆದ ಪರೀಕ್ಷೆಯಲ್ಲಿ 600 ಅಭ್ಯರ್ಥಿಗಳು ಹಾಜರಾಗಿದ್ದು, ಅವರಲ್ಲಿ ತೇರ್ಗಡೆಯಾದವರು ಕೇವಲ ಒಬ್ಬರು, ಇದು ಅತ್ಯಂತ ಬೇಸರದ ವಿಷಯವಾಗಿದೆ ಎಂದರು. ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ವಿ.ಬಿ. ಹುಬ್ಬಳ್ಳಿ, ಅಧ್ಯಕ್ಷತೆ ವಹಿಸಿದ್ದ ಪ್ರಧಾನ ದಿವಾಣಿ ನ್ಯಾಯಾಧೀಶೆ ಎಂ.ಶೋಭಾ, ಎಂ.ಟಿ. ಮಿಸ್ಕಿನ, ಉಚ್ಚ ನ್ಯಾಯಾಲಯದ ನ್ಯಾಯವಾದಿ ಆನಂದ ತೀರ್ಥ ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

