ವಿಷಯ ಅರ್ಥೈಸಿಕೊಳ್ಳುವ ಸಾಮರ್ಥ್ಯ ಬೆಳೆಸಿಕೊಳ್ಳಿ: ಡಿಸಿ
ಗದಗ: ವಿದ್ಯಾರ್ಥಿಗಳು ನಿರಂತರ ಸ್ಪಷ್ಟತೆಯುಳ್ಳ ಓದಿನೊಂದಿಗೆ ವಿಷಯ ಅರ್ಥೈಸಿಕೊಳ್ಳುವ ಸಾಮರ್ಥ್ಯ ಬೆಳೆಸಿಕೊಂಡಾಗ ಮಾತ್ರ ಸಮಗ್ರ ಬೆಳವಣಿಗೆ ಹೊಂದಲು ಸಾಧ್ಯ ಎಂದು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಹೇಳಿದರು.
ಅವರು ಭಾನುವಾರ ಸಂಜೆ ಬೆಟಗೇರಿಯ ಬಾಶೆಲ್ ಮಿಷನ್ ಪ್ರೌಢ ಶಾಲೆಯ ಸಭಾಂಗಣದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ನ ಬೆಟಗೇರಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷಾ ಮಾರ್ಗದರ್ಶಿ ಶಿಬರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಈ ಶಿಬಿರದಲ್ಲಿ ದೊರೆತಿರುವ ಮಾರ್ಗದರ್ಶನವನ್ನು ಸದುಪಯೋಗಪಡಿಸಿಕೊಂಡು ಪರೀಕ್ಷಾ ಭಯವನ್ನು ದೂರಗೊಳಿಸಿಕೊಳ್ಳುವ ಮೂಲಕ ಆಳವಾದ ಅಭ್ಯಾಸ ವಿಷಯಾಧಾರಿತ ಆಸಕ್ತಿ ಕಠಿಣ ಪರಿಶ್ರಮದಿಂದ ಉತ್ತಮ ಶೈಕ್ಷಣಿಕ ಬದುಕು ಕಟ್ಟಿಕೊಳ್ಳಬೇಕು ಎಂದರು.
ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಬಿಇಒ ಐ.ಬಿ. ಬೆನಕೊಪ್ಪ, ಎಂ.ಎಸ್. ಮಲ್ಲಾಪುರ, ಎಂ.ಎಸ್. ಪಾಟೀಲ, ಮಹೇಶ ಕರಿಬಿಷ್ಠಿ, ಬಸವರಾಜ ಕುಂದಗೋಳ ಮುಂತಾದವರು ಪಾಲ್ಗೊಂಡಿದ್ದರು. ಪ್ರೊ. ಬಿ.ಎಸ್. ಮಾನೇದ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲ್ಯಾಣಪ್ಪ ಹೊಳಿ ಅಧ್ಯಕ್ಷತೆ ವಹಿಸಿದ್ದರು. ರವಿ ಚಿಕ್ಕಣ್ಣವರ ನಿರೂಪಿಸಿದರು. ಸಿ.ಎನ್. ಮಾರನಬಸರಿ ಸ್ವಾಗತಿಸಿದರು. ರುಬಿನಾ ಸಂಗಡಿಗರು ಪ್ರಾರ್ಥಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

