ಗದಗ

ಸುದ್ದಿ ಸಂಕ್ಷೇಪ

Published On :

ಮೊರಾರ್ಜಿ: ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಗದಗ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6ನೇ ತರಗತಿಯಿಂದ 10ನೇ ತರಗತಿವರೆಗೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ 6ನೇ ತರಗತಿಯಿಂದ 12ನೇ ತರಗತಿವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಇನ್ನಿತರ ಸಾಮಗ್ರಿಗಳನ್ನು ನೀಡುವುದರ ಜತೆಗೆ ಉತ್ತಮ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರು. 2 ಲಕ್ಷ ಹಿಂದುಳಿದ ಪ್ರವರ್ಗ-1, ರು. 1 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗದವರಿಗೆ ರು. 44,500 ಆದಾಯ ಮಿತಿ ಇರುತ್ತದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಒಟ್ಟು ಪ್ರವೇಶ ದಾಖಲಾತಿಯಲ್ಲಿ 50 ಗಂಡು ಮಕ್ಕಳಿಗೆ 50 ಹೆಣ್ಣು ಮಕ್ಕಳಿಗೆ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ 100ರಷ್ಟು ವಿದ್ಯಾರ್ಥಿನಿಯರಿಗೆ ಮೀಸಲಾಗಿವೆ. ಮೇಲ್ಕಂಡ ಪ್ರಗತಿ ವಸತಿ ಶಾಲೆಗಳಲ್ಲಿ 2014-15ನೇ ಸಾಲಿನಲ್ಲಿ 50 ವಿದ್ಯಾರ್ಥಿಗಳನ್ನು ಪ್ರವೇಶ ದಾಖಲಾತಿ ನೀಡಲಾಗುವುದು. ಪ್ರಸ್ತುತ ಕರ್ನಾಟಕದ ಯಾವುದೇ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಶಾಲೆಗಳ ಪ್ರವೆಶ ದಾಖಲಾತಿಗೆ ಅರ್ಹರಾಗಿರುತ್ತಾರೆ. ಗದಗ ಜಿಲ್ಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು- 7 ಹಾಗೂ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳು- 3 ಇದ್ದು, ಈ ಶಾಲೆಗಳ ಪ್ರವೇಶ ಪರೀಕ್ಷೆಗಾಗಿ ಫೆ. 24ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯು ಜಿಲ್ಲೆಯ ಆಯಾ ತಾಲೂಕು ಕೇಂದ್ರಗಳಲ್ಲಿ ಮಾರ್ಚ್ 23ರ ಬೆಳಗ್ಗೆ 11ರಿಂದ 1.30ರ ವರೆಗೆ ಜರುಗಲಿದ್ದು, ಏಪ್ರಿಲ್ 7ರಂದು ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು. ಏ. 24ರಿಂದ ಮೇ 14ರ ವರಗೆ ಜಿಲ್ಲಾ ಮಟ್ಟದ ಕೌನ್ಸೆಲಿಂಗ್ ಜರುಗಲಿದೆ. ಅರ್ಜಿ ನಮೂನೆಗಳನ್ನು ತಾಲೂಕು ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ವಿಸ್ತರಣಾಧಿಕಾರಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ ಅರ್ಜಿಗಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಮಟ್ಟದ ಪ್ರವೇಶ ಪರೀಕ್ಷೆ ಸಮಿತಿಯ ಪ್ರಕಟಣೆ ತಿಳಿಸಿದೆ.
ಮೇಧಾ ಪಾಟ್ಕರ್ ಇಕೋ ಕ್ಲಬ್ ಉದ್ಘಾಟನೆ
ಹೊಳೆಆಲೂರ: ಸ್ಥಳೀಯ ಶ್ರೀ ಯಚ್ಚರೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಸಭಾಭವನದಲ್ಲಿ ಮೇಧಾ ಪಾಟ್ಕರ್ ಇಕೋ ಕ್ಲಬ್ ಉದ್ಘಾಟನೆ ಶನಿವಾರ ಜರುಗಿತು. ಪ್ರಾಚಾರ್ಯ ಎಸ್.ಜಿ. ನದಾಫ್ ಅಧ್ಯಕ್ಷತೆ ವಹಿಸಿದ್ದರು. ಸುನೀಲ ಯಲಿಗಾರ, ರೇಣುಕಾ ಕಿತ್ತಲಿ, ದಡ್ಡಿ ಅತಿಥಿಗಳಾಗಿದ್ದರು. ಪ್ರೊ. ವಿಶ್ವನಾಥ ಪಾಟೀಲ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೀತಾ ಬಡಿಗೇರ ಮತ್ತು ಸಂಗಡಿಗರು ಪ್ರಾರ್ಥಿಸಿದರು. ವಿ.ವಿ. ಮಾಗಿ ಸ್ವಾಗತಿಸಿದರು. ಹನುಮಂತ ಮಲಕಾಪುರ ವಂದಿಸಿದರು. ಎಸ್.ಬಿ. ಹಳ್ಳೂರ ನಿರೂಪಿಸಿದರು.

ಗದಗ: ಇಂದು ಏಡ್ಸ್ ಕುರಿತು ಉಪನ್ಯಾಸ ಕಾರ್ಯಕ್ರಮ
ನರಗುಂದ: ಪಟ್ಟಣದ ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ 2014-15ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ತಾಲೂಕಿನ ದತ್ತು ಗ್ರಾಮ ಕಣಕಿಕೊಪ್ಪದ ಪ್ರಾಥಮಿಕ ಶಾಲೆಯ ಆವರಣದಲ್ಲಿ ಫೆ. 10ರ ಬೆಳಗ್ಗೆ 10ಕ್ಕೆ ಕಾಲು, ಬಾಯಿಬೇನೆ, ಲಸಿಕಾ, ಬರಡು ದನ ಚಿಕಿತ್ಸೆ, ನಂತರ ಸಂಜೆ 5.30ಕ್ಕೆ ಏಡ್ಸ್ ಮಹಾಮಾರಿ ರೋಗದ ಕುರಿತು ಉಪನ್ಯಾಸ ಕಾರ್ಯಕ್ರಮ ಜರಗಲಿದೆ.
ಶ್ರೀ ತೋಂಟದಾರ್ಯ ಯುವಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಮುಂಡರಗಿ: ಪಟ್ಟಣದ ಸಿದ್ಧಲಿಂಗೇಶ್ವರ ನಗರದಲ್ಲಿ (ಕೋಟೆ) ಶ್ರೀ ತೋಂಟದಾರ್ಯ ಯುವಕ ಸಂಘದ ನೂತನ ಪದಾಧಿಕಾರಿಗಳನ್ನು ಈಚೆಗೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ನೀಲಪ್ಪ ಚಿಕ್ಕಣ್ಣವರ, ಉಪಾಧ್ಯಕ್ಷರಾಗಿ ವಿಶ್ವನಾಥ ಕುಂಬಾರ, ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ ಬೆಟಗೇರಿ, ಸಹ ಕಾರ್ಯದರ್ಶಿಯಾಗಿ ಮಂಜುನಾಥ ಶೀರಿ, ಸಂಘಟನಾ ಕಾರ್ಯದರ್ಶಿಯಾಗಿ ಕೃಷ್ಣಾ ಕುಂಬಾರ, ಖಜಾಂಚಿಯಾಗಿ ವೀರೇಂದ್ರ ಅಂಗಡಿ ಆಯ್ಕೆಯಾಗಿದ್ದಾರೆ. ಮುತ್ತು ಅಳವಂಡಿ, ಮಂಜುನಾಥ ಕುಂಬಾರ, ಸುರೇಶ ಕೆಂಜೋಡಿ, ನಿಂಗಪ್ಪ ದೊಣ್ಣಿ, ಶಿವಾನಂದ ಗೋಣಿಸ್ವಾಮಿ, ಪ್ರಶಾಂತ ಬೆಟಗೇರಿ, ಕೋಟೆಪ್ಪ ಕುರಿ, ಈರಣ್ಣ ಹಡಗಲಿ, ಅಮರೇಶ ಆರಿ, ಮಲ್ಲಣ್ಣ ಆರೇರ ಹಾಗೂ ಸಂಭಾಜಿ ಆರೇರ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.