ಗದಗ

ಇಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯುತ್ಸವ

Published On :

ಮುಂಡರಗಿ: ಮುಂಡರಗಿಯ ತಾಲೂಕು ಭೋವಿ(ವಡ್ಡರ) ಸಂಘ ಇದರ ಆಶ್ರಯದಲ್ಲಿ ಫೆ. 10ರಂದು ಮಧ್ಯಾಹ್ನ 12.30ಕ್ಕೆ ಇಲ್ಲಿನ ಘಟ್ಟಿರಡ್ಡಿಹಾಳ ರಸ್ತೆಯಲ್ಲಿರುವ ಸಮುದಾಯ ಭವನದಲ್ಲಿ ಕಾಯಕಯೋಗಿ ಶಿವಯೋಗಿ ಸಿದ್ಧರಾಮೇಶ್ವರರ 841ನೇ ಜಯಂತ್ಯುತ್ಸವ ಜರುಗಲಿದೆ ಎಂದು ಡಾ. ಆರ್.ಎಚ್. ಜಂಗನವಾರಿ, ಪುರಸಭೆ ಸದಸ್ಯ ಪರಶುರಾಮ ಕರಡಿಕೊಳ್ಳ ತಿಳಿಸಿದ್ದಾರೆ.
ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ 10.30ಕ್ಕೆ ಕೋಟೆ ಭಾಗದ ಹನುಮಂತ ದೇವರ ದೇವಸ್ಥಾನದಿಂದ ಮೆರವಣಿಗೆ ಹೋಡಲಿದೆ. ಜ.ಡಾ. ಅನ್ನದಾನೀಶ್ವರ ಸ್ವಾಮಿಗಳು ಮೆರವಣಿಗೆ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಸಮಾವೇಶ ಜರುಗಲಿದ್ದು, ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ಸಮಾವೇಶ ಉದ್ಘಾಟಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ, ಕವಿ ಎಫ್.ಎಸ್. ಕರಿದುರಗಣ್ಣವರ ರಚಿಸಿದ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಶಾಸಕ ಜಿ.ಎಸ್. ಪಾಟೀಲ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ. ಶಾಸಕ ರಾಮಕೃಷ್ಣ ದೊಡ್ಡಮನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜ.ನಾಡೋಜ, ಡಾ. ಅನ್ನದಾನೀಶ್ವರ ಸ್ವಾಮಿಗಳು, ಚಿತ್ರದುರ್ಗದ ಜ.ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಸಂಸದ ಶಿವಕುಮಾರ ಉದಾಸಿ, ಶಾಸಕ ಬಿ.ಆರ್. ಯಾವಗಲ್, ಮಾಜಿ ಶಾಸಕ ರಾಮಣ್ಣ ಲಮಾಣಿ, ಜಿಪಂ ಸದಸ್ಯೆ ನಿರ್ಮಲಾ ಬರದೂರ, ಹೇಮಗಿರೀಶ ಹಾವಿನಾಳ, ಕರಬಸಪ್ಪ ಹಂಚಿನಾಳ, ವೈ.ಎನ್. ಗೌಡರ, ರವೀಂದ್ರ ಉಪ್ಪಿನಬೆಟಗೇರಿ, ಬಾಲಚಂದ್ರ ದೊಡ್ಡಮನಿ ಸೇರಿದಂತೆ ಅನೇಕರು ಆಗಮಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧಕರಿಗೆ, ಪುರಸಭೆ ಸರ್ವ ಸದಸ್ಯರಿಗೆ  ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.