ದೇಶದ ಚುಕ್ಕಾಣಿ ಹಿಡಿಯಲು ಮೋದಿ ಸಮರ್ಥ
ಗದಗ: ಭಾರತ ಅಧಿಕಾರ ಚುಕ್ಕಾಣಿ ಹಿಡಿಯಲು ನರೇಂದ್ರ ಮೋದಿ ಸಮರ್ಥ ನಾಯಕ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎಂ.ಎಸ್. ಕರಿಗೌಡ್ರ ಹೇಳಿದರು.
ಈಚೆಗೆ ನಗರದ ಜ. ತೋಂಟದಾರ್ಯ ಮಠದ ಎದುರು ಜಿಲ್ಲಾ ಮತ್ತು ಶಹರ ಬಿಜೆಪಿ ಯುವ ಮೋರ್ಚಾದ ವತಿಯಿಂದ ನಮೋ ಟೀ ಸ್ಟಾಲ್ಗೆ ಚಾಲನೆ ನೀಡಿ ಮಾತನಾಡಿದರು. ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಛಗನ್ರಾಜ ಪುರೋಹಿತ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗನಗೌಡ ಹರ್ತಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೋಹನ್ ಮಾಳಶೆಟ್ಟಿ ಮಾತನಾಡಿ, ಟೀ ಮಾರುವ ವ್ಯಕ್ತಿ ದೇಶದ ಚುಕ್ಕಾಣಿ ಹಿಡಿಯಲು ಸಮರ್ಥರಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಖಂಡನಾರ್ಹ ಎಂದರು.
ಶಹರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸುಧೀರ ಕಾಟಿಗಾರ, ಶಹರ ಅಧ್ಯಕ್ಷ ಈಶಣ್ಣ ಮುನವಳ್ಳಿ ಮಾತನಾಡಿ, ನರೇಂದ್ರ ಮೋದಿ ಒಬ್ಬ ಸಮರ್ಥ ಮುಖ್ಯಮಂತ್ರಿ ಎಂದು ಈಗಾಗಲೇ ನಿರೂಪಿಸಿದ್ದಾರೆ. ಆದರೆ, ಈಚೆಗೆ ಎಐಸಿಸಿ ಅಧಿವೇಶನದಲ್ಲಿ ಕಾಂಗ್ರೆಸ್ನ ನಾಯಕರೊಬ್ಬರು ಟೀ ಮಾರುವವರನ್ನು ಅವಹೇಳನ ಮಾಡಿದ್ದಾರೆ. ಹಾಗಾಗಿ ಪ್ರಾಮಾಣಿಕರಾಗಿ ಕೆಲಸ ಮಾಡುವವರ ಬಗ್ಗೆ ಕಾಂಗ್ರೆಸ್ ಕಿಂಚಿತ್ತೂ ಕಾಳಜಿ ಹೊಂದಿಲ್ಲ ಎಂಬುದು ಈ ಮಾತಿನ ಮೇಲೆಯೇ ತಿಳಿದು ಬರುತ್ತಿದೆ. ವಿನಾಯಕ ಹಬೀಬ, ಗಂಗಾಧರ ಹಬೀಬ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರವೀಣ ಬನ್ಸಾಲಿ, ಲಿಂಗನಗೌಡ ಹರ್ತಿ, ವಿನಾಯಕ ಹಬೀಬ, ಶರಣು ಮುಧೋಳ, ಸಿದ್ದರಾಮೇಶ ಹಿರೇಮಠ, ಪವನ್ ಬಾಕಳೆ, ರಾಜು ಕುರಡಗಿ, ಶಂಕ್ರಪ್ಪ ಇಂಡಿ, ಕಾಂತಿಲಾಲ್ ಬನ್ಸಾಲಿ, ಈಶಣ್ಣ ಮುನವಳ್ಳಿ, ಶ್ರೀನಿವಾಸ ಹುಬ್ಬಳ್ಳಿ, ತೋಂಟೋಸಾ ಭಾಂಡಗೆ, ಶ್ರೀನಿವಾಸ ಭಾಂಡಗೆ, ಅನಿಲ ಅಬ್ಬಿಗೇರಿ, ಶಿವು, ಕಿರಣ ಕಲಾಲ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

