ಗದಗ

ಪಂ.ಭೀಮಸೇನ ಜೋಶಿ ಸಂಗೀತ ಲೋಕದ ದಿಗ್ಗಜ

Published On :

ಗದಗ: ಸಂಗೀತ ಕ್ಷೇತ್ರದ ಅಭಿಜಾತ ಕಲಾವಿದ ಭೀಮಸೇನ ಜೋಶಿ ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾಗಿದ್ದು, ಗದುಗಿಗೆ ಹೆಮ್ಮೆಯ ಪ್ರತೀಕವಾಗಿದ್ದಾರೆ. ಶಾಸ್ತ್ರೀಯ ಸಂಗೀತದ ಸದಭಿರುಚಿಯನ್ನು ಯುವಜನಾಂಗದಲ್ಲಿ ಮೂಡಿಸುವುದೇ ನಾವು ಅವರಿಗೆ ಕೊಡುವ ನಿಜವಾದ ಗೌರವವಾಗಿದೆ ಎಂದು ವಿದ್ಯಾದಾನ ಸಮಿತಿ ಅಧ್ಯಕ್ಷ ಧೀರೇಂದ್ರ ಹುಯಿಲಗೋಳ ಹೇಳಿದರು.
ನಗರದ ವಿಡಿಎಸ್ ಬಾಲಕಿಯರ ಪಿಯು ಕಾಲೇಜು ಆವರಣದಲ್ಲಿ ಕಲಾವಿಕಾಸ ಪರಿಷತ್ ಹಾಗೂ ವಿದ್ಯಾದಾನ ಸಮಿತಿ ಸಹಯೋಗದಲ್ಲಿ ಈಚೆಗೆ ಪಂ. ಭೀಮಸೇನ ಜೋಶಿ ತೃತೀಯ ಸ್ಮರಣೋತ್ಸವ ನಿಮಿತ್ತ ಆರಂಭವಾದ 3 ದಿನಗಳ ಕಲಾವಿಕಾಸ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂಗೀತಕ್ಕೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ. ಆದರೆ, ಇತ್ತೀಚಿನ ಬದಲಾದ ಸನ್ನಿವೇಶದಲ್ಲಿ ಯುವಕರು ಪಾಶ್ಚಿಮಾತ್ಯ ಸಂಗೀತಕ್ಕೆ ಮಾರು ಹೋಗುತ್ತಿದ್ದಾರೆ. ಇದರಿಂದ ಶಾಸ್ತ್ರೀಯ ಸಂಗೀತವನ್ನು ವಿರೂಪಗೊಳಿಸುವ ಕಾರ್ಯ ನಡೆಯುತ್ತಿರುವುದು ವಿಷಾದನೀಯ ಎಂದರು.
ಶಿಕ್ಷಣ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಎಸ್.ಎನ್. ಖಾಜಿ, ಎಸ್.ಟಿ. ಹಿರೇಮಠ ಮೆಮೋರಿಯಲ್ ಟ್ರಸ್ಟ್ ಕಾರ್ಯದರ್ಶಿ ವಿಜಯಕುಮಾರ ಹಿರೇಮಠ, ರಾಧಾಕೃಷ್ಣ ಹುಯಿಲಗೋಳ, ಸಂತೋಷ ತೋಟಗಂಟಿಮಠ, ಕಸ್ತೂರಿ ಹಿರೇಗೌಡರ, ಸಿ.ಕೆ.ಎಚ್. ಕಡನಿ ಶಾಸ್ತ್ರಿ, ಗದಗ ತಾಲೂಕು ಕಸಾಪ ಅಧ್ಯಕ್ಷ ಕೀಶೋರಬಾಬು ನಾಗರಕಟ್ಟಿ, ಸುವರ್ಣಾ ಲೇಡೀಸ್ ಕ್ಲಬ್ ಅಧ್ಯಕ್ಷೆ ಶೈಲಜಾ ಕವಲೂರು, ಲಯನ್ಸ್ ಕ್ಲಬ್ ಅಧ್ಯಕ್ಷ ಅರವಿಂದ ಪಟೇಲ್, ಎಸ್ಎಸ್ಕೆ ಮಹಿಳಾ ಮಂಡಳ ಅಧ್ಯಕ್ಷೆ ಲಲಿತಾ ಬಾಕಳೆ ಮುಂತಾದವರು ಉಪಸ್ಥಿತರಿದ್ದರು. ನಗರಸಭೆ ಸದಸ್ಯ ಶ್ರೀನಿವಾಸ ಹುಯಿಲಗೋಳ ಸ್ವಾಗತಿಸಿದರು. ದತ್ತಪ್ರಸನ್ನ ಪಾಟೀಲ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.