ಗದಗ

ಗುಡಿಸಲಿಗೆ ಬೆಂಕಿ: ಅಪಾರ ಹಾನಿ

Published On :

ಗಜೇಂದ್ರಗಡ:  ಸಮೀಪದ ರಾಜೂರು ಗ್ರಾಮದ ಹೊರ ವಲಯದ ತೋಟವೊಂದರಲ್ಲಿನ ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಗ್ರಾಮದ ಮಲ್ಲಪ್ಪ ಗುಳಗುಳಿ ಎಂಬುವರ ತೋಟದಲ್ಲಿನ ಗುಡಿಸಲು ಬಳಿಯ ಮೇವಿನ ಬಣವೆಗೆ ಬೆಂಕಿ ಹೊತ್ತಿಕೊಂಡು ನಂತರ ಬೆಂಕಿಯ ಕೆನ್ನಾಲಿಗೆ ಗುಡಿಸಲಿಗೆ ಆವರಿಸಿದೆ. ಪರಿಣಾಮ ಗುಡಿಸಲಲ್ಲಿದ್ದ ಅಡುಗೆ ಸಾಮಗ್ರಿ, ಕೃಷಿ ಉಪಕರಣ, 45 ಶೇಂಗಾ ತುಂಬಿದ ಚೀಲ ಸೇರಿದಂತೆ ಇನ್ನಿತರ ಕೃಷಿ ಬಳಕೆ ಉಪಕರಣಗಳು ಬೆಂಕಿಗೆ ಸಿಲುಕಿ ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ರಜಾಕನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.