ಸೇವಾಲಾಲರ ಜಯಂತಿ ಸರ್ಕಾರದಿಂದ ಆಚರಿಸಿ
ಶಿರಹಟ್ಟಿ: ಸಂತ ಸೇವಾಲಾಲರು ಸಮಾಜದ ಬಂಜಾರ ಸಮುದಾಯದ ಧರ್ಮದ ದೈವ ಶಕ್ತಿಯಾಗಿದ್ದು, ಅವರ ಜಯಂತಿಯನ್ನು ಸರ್ಕಾರದ ವತಿಯಿಂದಲೇ ಆಚರಣೆಗೆ ಮುಂದಾಗಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ರಾಮಣ್ಣ ಲಮಾಣಿ, ತಾಲೂಕು ಬಂಜಾರ ಸಂಘದ ಅಧ್ಯಕ್ಷ ದೀಪಕ ಲಮಾಣಿ ನೇತೃತ್ವದಲ್ಲಿ ಮಂಗಳವಾರ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಮಣ್ಣ ಲಮಾಣಿ ಮಾತನಾಡಿ, ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಈ ಕುರಿತು ಮನವಿಯೊಂದನ್ನು ಸಲ್ಲಿಸಲಾಗಿತ್ತು. ರಾಜ್ಯದ ಅನೇಕ ಸಮಾಜದ ಧರ್ಮದೇವರು, ಮಹಾಪುರುಷರ ದಿನಾಚರಣೆಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ ಮಾಡುತ್ತಿದ್ದು, ಹಿಂದುಳಿದ ಬಂಜಾರ ಸಮಾಜ ನೋವಿನಲ್ಲಿ ಬದುಕುತ್ತಿದ್ದು, ತಕ್ಷಣವೇ ಸೇವಾಲಾಲರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ ಮಾಡಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು. ಫೆ.15ರಂದು ಸಂತ ಸೇವಾಲಾಲರ ಜಯಂತಿ ಆಚರಣೆ ಮಾಡುತ್ತಿದ್ದು, ಅನೇಕ ವರ್ಷಗಳ ಬೇಡಿಕೆಯನ್ನು ಸರ್ಕಾರ ಈಡೇರಿಸುವ ಜತೆಗೆ ಬಂಜಾರ ಸಮಾಜಕ್ಕೆ ಗೌರವ ನೀಡಬೇಕೆಂದು ಒತ್ತಾಯಿಸಿದರು.
ನಂತರ ತಹಸೀಲ್ದಾರ್ ಆರ್.ಬಿ. ನಿಂಗನಗೌಡ್ರಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಕಳುಹಿಸಿಕೊಡುವುದಾಗಿ ಭರವಸೆ ನೀಡಿದರು. ತಾಲೂಕು ಬಂಜಾರ ಸಂಘದ ಅಧ್ಯಕ್ಷ ದೀಪಕ ಲಮಾಣಿ, ಎಂ.ಕೆ. ಲಮಾಣಿ ಮಾತನಾಡಿದರು. ಮುಖಂಡ ಜಾನು ಲಮಾಣಿ, ಕಿರಣಕುಮಾರ ಲಮಾಣಿ, ಗಂಗಪ್ಪ ಪವಾರ, ಹನುಮಂತ ಲಮಾಣಿ, ತಿಪ್ಪಣ್ಣ ಲಮಾಣಿ, ಶಂಕರ ನಾಯಕ, ಶೇಖರ ಲಮಾಣಿ, ಪರಮೇಶ ಲಮಾಣಿ, ಮಹೇಶ ಲಮಾಣಿ, ಸೋಮೇಶ ಲಮಾಣಿ, ಬೋಪಣ್ಣ ಲಮಾಣಿ, ಬಾಬು ಲಮಾಣಿ ಮತ್ತಿತರರು ಮನವಿ ನೀಡುವಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

