ಮುಳಗುಂದ ಪಟ್ಟಣ ಪಂಚಾಯಿತಿ ಉಪಚುನಾವಣೆ
ಗದಗ: ತಾಲೂಕಿನ ಮುಳಗುಂದ ಪಟ್ಟಣ ಪಂಚಾಯಿತಿಯ ತೆರವಾಗಿರುವ 9ನೇ ವಾರ್ಡಿನ ಸದಸ್ಯ ಸ್ಥಾನಕ್ಕೆ ಮಾರ್ಚ್ 2ರಂದು ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಅವರು ಚುನಾವಣಾ ವೇಳಾಪಟ್ಟಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದ್ದಾರೆ.
ಈ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಇದರನ್ವಯ ಮುಳಗುಂದ ಪಪಂ ಕಾರ್ಯಾಲಯದಲ್ಲಿರುವ ಚುನಾಣಾಧಿಕಾರಿಗಳಿಗೆ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ ಫೆ. 19ರ ವರೆಗೆ ಬೆಳಗ್ಗೆ 11ರಿಂದ 3ರ ವರೆಗೆ ನಾಮಪತ್ರ ಸಲ್ಲಿಸಬಹುದು. ಫೆ. 20ರಂದು ನಾಮಪತ್ರ ಪರಿಶೀಲನೆ ಜರುಗಲ್ಲಿದ್ದು, ಶನಿವಾರ 22ರ ವರೆಗೆ ನಾಮಪತ್ರ ವಾಪಸ್ ಪಡೆಯಲು ಅವಕಾಶವಿರುತ್ತದೆ. ಅಗತ್ಯಬಿದ್ದಲ್ಲಿ ಚುನಾವಣೆಯು ಮಾರ್ಚ್ 2ರಂದು ಬೆಳಗ್ಗೆ 7ರಿಂದ ಸಂಜೆ 5ರ ವರೆಗೆ ನಡೆಯುವುದು. ಮತ ಎಣಿಕೆಯು ಫೆ. 5ರಂದು ಬೆಳಗ್ಗೆ 8ರಂದು ಗದಗ ತಹಸೀಲ್ದಾರ್ ಕಾರ್ಯಾಲಯದಲ್ಲಿ ಜರುಗಲಿದೆ. ಚುನಾವಣೆ ನಡೆಯುವ 9ನೇ ವಾರ್ಡ್ ವ್ಯಾಪ್ತಿಯಲ್ಲಿ ಇಂದಿನಿಂದಲೇ(ಫೆ. 12) ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿದ್ದು ಮಾರ್ಚ್ 5ರ ವರೆಗೆ ಜಾರಿಯಲ್ಲಿರುತ್ತದೆ. ಚುನಾವಣಾ ಅಭ್ಯರ್ಥಿಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕು. ಚುನಾವಣೆಗೆ ಸ್ಪರ್ಧಿಸಬಯಸುವರು ಅಗತ್ಯದ ಹಾಗೂ ಹೆಚ್ಚಿನ ಮಾಹಿತಿಯನ್ನು ಚುನಾವಣಾಧಿಕಾರಿಗಳನ್ನು ಅಥವಾ ತಹಸೀಲ್ದಾರರಿಂದ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

