ಕೊಟುಮಚಗಿ, ಸೊರಟೂರು ಗ್ರಾಪಂ ಉಪಚುನಾವಣೆ
ಗದಗ: ತಾಲೂಕಿನ ಕೋಟುಮಚಗಿ ಹಾಗೂ ಸೊರಟೂರು ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿರುವ ತಲಾ ಒಂದು ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಮಾರ್ಚ್ 2ರಂದು ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಅವರು ಚುನಾವಣಾ ವೇಳಾಪಟ್ಟಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದ್ದಾರೆ.
ಕೋಟುಮಚಗಿ ಒಂದು ಸ್ಥಾನವು ಹಿಂದುಳಿದ ಅ ವರ್ಗಕ್ಕೆ ಸೊರಟೂರು 1 ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಇದರನ್ವಯ ಸಂಬಂಧಿತ ಗ್ರಾಪಂಗಳಲ್ಲಿರುವ ಕಾರ್ಯಾಲಯದಲ್ಲಿರುವ ಚುನಾವಣಾಧಿಕಾರಿಗಳಿಗೆ ಸಾರ್ವತ್ರಿಕ ರಜಾ ದಿನಗಳನ್ನು ಹೊರತು ಪಡಿಸಿ ಫೆ. 19ರ ವರೆಗೆ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ನಾಮಪತ್ರ ಸಲ್ಲಿಸಬಹುದು.
ಫೆ. 20ರಂದು ನಾಮಪತ್ರ ಪರಿಶೀಲನೆ ಜರುಗಲಿದ್ದು, ಶನಿವಾರ 22ರ ವರೆಗೆ ನಾಮಪತ್ರ ವಾಪಸ್ ಪಡೆಯಲು ಅವಕಾಶವಿರುತ್ತದೆ. ಅಗತ್ಯಬಿದ್ದಲ್ಲಿ ಚುನಾವಣೆಯು ಮಾರ್ಚ್ 2ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ನಡೆಯುವುದು. ಮತಎಣಿಕೆಯು ಮಾ. 5ರಂದು ಬೆಳಗ್ಗೆ 8ರಿಂದ ಗದಗ ತಹಸೀಲ್ದಾರ್ ಕಾರ್ಯಾಲಯದಲ್ಲಿ ಜರುಗಲಿದೆ. ಫೆ. 12ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ಸಭೆ
ಗದಗ: ಸಾರ್ವಜನಿಕ ಕುಂದುಕೊರತೆಗಳ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯವಾಗಿ ಸರ್ಕಾರದ ಆಹಾರ ಭದ್ರತೆ ಯೋಜನೆಯಡಿ ಸಾರ್ವಜನಿಕ ವಿತರಣಾ ಪದ್ಧತಿ, ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆ ಹಾಗೂ ಮಧ್ಯಾಹ್ನ ಬಿಸಿಯೂಟ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಫೆ. 15ರಂದು 3ನೇ ಶನಿವಾರದಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬೆಳಗ್ಗೆ 10.30ಕ್ಕೆ ಸಭೆ ಜರುಗಿಸಲಾಗುವುದು.
ಜಿಲ್ಲೆಯ ಸಾರ್ವಜನಿಕರು ಈ ದಿಸೆಯಲ್ಲಿ ಮೇಲ್ಕಾಣಿಸಿದ ಆಹಾರ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರುಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳಿಗೆ ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಇಮಾಮಬೀ ನಬೀಸಾಬ್ ಸವಡಿ ನಿಧನ
ರೋಣ: ತಾಲೂಕಿನ ಅರಹುಣಸಿ ಗ್ರಾಮದ ಇಮಾಮಬೀ ನಬೀಸಾಬ್ ಸವಡಿ(ದೋಬಿ)(80) ಮಂಗಳವಾರ ರಾತ್ರಿ ನಿಧರರಾದರು. ಮೃತರಿಗೆ ನಾಲ್ವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

