ನಾಳೆ ಗದುಗಿಗೆ ಬಿಎಸ್ವೈ: ಬಂಡಿ
ಗದಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಫೆ. 16ರಂದು ನಗರಕ್ಕೆ ಆಗಮಿಸಲಿದ್ದು, ಜಿಲ್ಲಾ ಬಿಜೆಪಿ ವತಿಯಿಂದ ಸ್ಥಳೀಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಏರ್ಪಡಿಸಲಾದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಳಕಪ್ಪ ಬಂಡಿ ಹೇಳಿದರು.
ಅವರು ಶುಕ್ರವಾರ ಸಂಜೆ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಫೆ. 16ರಂದು ಸಂಜೆ 4ಕ್ಕೆ ಜರಗುವ ಸಾರ್ವಜನಿಕ ಸಭೆಯಲ್ಲಿ 25 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಳ್ಳಲಿದ್ದು, ಸಭೆಯ ಅಭೂತಪೂರ್ವ ಯಶಸ್ವಿಗಾಗಿ ಸರ್ವ ಸಿದ್ಧತೆ ಕೈಗೊಳ್ಳಲಾಗಿದೆ. ಅಂದು ಸ್ಥಳೀಯ ರಾಚೋಟೇಶ್ವರ ದೇವಸ್ಥಾನ ಹಾಗೂ ಬೆಟಗೇರಿಯಿಂದ ಕಾರ್ಯಕರ್ತರು ವಿವಿಧ ವಾದ್ಯಮೇಳದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ಸಂಸದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡ್ರ, ಮಾಜಿ ಸಚಿವ ಸಿ.ಎಂ. ಉದಾಸಿ, ಸಿ.ಸಿ.ಪಾಟೀಲ, ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ, ರಾಮಣ್ಣ ಲಮಾಣಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎಂ.ಎಸ್. ಕರಿಗೌಡ್ರ, ಶಹರ ಬಿಜೆಪಿ ಅಧ್ಯಕ್ಷ ಈಶಣ್ಣ ಮುನವಳ್ಳಿ, ಶಂಕ್ರಪ್ಪ ಇಂಡಿ, ಸಂಗಮೇಶ ದುಂದೂರ, ತೋಟುಸಾ ಭಾಂಡಗೆ, ಶ್ರೀನಿವಾಸ ಹುಬ್ಬಳ್ಳಿ, ಮೋಹನ ಮಾಳಶೆಟ್ಟಿ, ಕಾಂತಿಲಾಲ ಬನ್ಸಾಲಿ, ಅರವಿಂದ ಹುಲ್ಲೂರ, ರಾಜು ಕುರಡಗಿ, ಛಗನರಾಜ ಪುರೋಹಿತ, ಲಿಂಗನಗೌಡ ಹರ್ತಿ, ಬಸವರಾಜ ಶಿರಿ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

