ಗದಗ

ಮಹಿಳೆಯರು ಅಡುಗೆ ಮಾಡಲು ಸೀಮಿತವಲ್ಲ

Published On :

ಗದಗ: ಮಹಿಳೆಯರು ಅಡುಗೆ ಮಾಡಲು ಸೀಮಿತವಲ್ಲ ಎಂದು ಎಚ್ಚರಿಸಿದವರು ಸರೋಜಿನಿ ನಾಯ್ಡು ಎಂದು ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ಹೇಳಿದರು. ಅವರು ಗುರುವಾರ ಬೆಟಗೇರಿಯ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸರೋಜಿನಿ ನಾಯ್ಡು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತದ ಕೋಗಿಲೆ ಸರೋಜಿನಿ ನಾಯ್ಡು ರಾಷ್ಟ್ರೀಯ ಭಾರತದ ಮೊದಲ ಕಾಂಗ್ರೆಸ್‌ನ ಮೊದಲನೆಯ ಮಹಿಳಾ ಅಧ್ಯಕ್ಷರು ಹಾಗೂ ಉತ್ತರ ಪ್ರದೇಶದ ಮೊದಲನೆಯ ಮಹಿಳಾ ರಾಜ್ಯಪಾಲರಾದರು. ಸರೋಜಿನಿಯವರು ಸಮಕಾಲೀನ ಇಂಡಿಯಾ ದೇಶದ ಜನರ ಜೀವನ ಕ್ರಮ ತಮ್ಮ ಕವಿತೆಗಳಲ್ಲಿ ವರ್ಣಿಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ವೈ.ಆರ್. ಹಿರೇಗೌಡರ ಮುಂತಾದವರು ಮಾತನಾಡಿದರು. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕ ಸಿ.ಎಂ. ಮಾರನಬಸರಿ ಸ್ವಾಗತಿಸಿದರು. ಉಪನ್ಯಾಸಕ ಎಸ್.ಆರ್. ವಾಲ್ಮೀಕಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.