ಗದಗ

ಗುಣಮಟ್ಟದ ಕಾಮಗಾರಿ ನಿರ್ವಹಿಸಿ: ಹಾವಿನಾಳ

Published On :

ಮುಂಡರಗಿ: ಹಮ್ಮಿಗಿ ಜಿಪಂ ವ್ಯಾಪ್ತಿಯಲ್ಲಿನ ಬಹುತೇಕ ಗ್ರಾಮಗಳಲ್ಲಿನ ರಸ್ತೆ ಕಾಮಗಾರಿ, ಕುಡಿಯುವ ನೀರು, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಗಳನ್ನು ತ್ವರಿತವಾಗಿ ಮಾಡುತ್ತಿದ್ದು, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಹಮ್ಮಿಗಿ ಕ್ಷೇತ್ರದ ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಹೇಳಿದರು.
ಭಾನುವಾರ ತಾಲೂಕಿನ ಮುಂಡವಾಡ ಗ್ರಾಮದಲ್ಲಿ ಜಿಪಂ ಎಂಜಿನಿಯರಿಂಗ್ ಇಲಾಖೆಯಿಂದ ರು. 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಓವರ್‌ಹೆಡ್ ಟ್ಯಾಂಕ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಜಿಪಂ ಕ್ಷೇತ್ರದಲ್ಲಿ ಈಗಾಗಲೇ ಅನೇಕ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಕುರಿತು ಗಮನಹರಿಸುತ್ತಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಬಸನಗೌಡ ಪಾಟೀಲ, ಗುರುಬಸಪ್ಪ ಅಲ್ಲಿಪುರ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೇಮಂತಗೌಡ ಪಾಟೀಲ, ಧ್ರುವಕುಮಾರ ಹೊಸಮನಿ, ಸೊಲಬಣ್ಣ ಜೋಬಾಳಿ, ಗುತ್ತಿಗೆದಾರ ಸುರೇಶ ಕ್ಯಾದಿಗಿಹಳ್ಳಿ, ಚಿನ್ನಪ್ಪಗೌಡ ಮೇಟಿ, ಸಿದ್ದನಗೌಡ ಪಾಟೀಲ, ವಿ.ಬಿ. ಪಾಟೀಲ, ದಿಲೀಪಕುಮಾರ ಬನ್ಸಾಲಿ, ಹನುಮಂತ ಕಾಗನೂರ, ದ್ಯಾಮಪ್ಪ ಮಾದಾವಿ, ಅಶೋಕ ಹುಬ್ಬಳ್ಳಿ, ಜಿಪಂ ಎಂಜಿನಿಯರಿಂಗ್ ವಿಭಾಗದ ಅಧಿಕಾರಿ ಎಸ್.ಪ್ರಭಾಕರ, ಲಕ್ಷ್ಮಣ ಹರಿಜನ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.