ಗದಗ

ನಾಳೆ ಶಿರಹಟ್ಟಿ ತಾಲೂಕು 3ನೇ ಸಾಹಿತ್ಯ ಸಮ್ಮೇಳನ

Published On :

ಶಿರಹಟ್ಟಿ: ಕಸಾಪ ಶಿರಹಟ್ಟಿ ತಾಲೂಕು ಘಟಕವು ಫೆ. 19ರಂದು ತಾಲೂಕಿನ ಹೆಬ್ಬಾಳ ಗ್ರಾಮದ ಶಿವಯೋಗೀಶ್ವರ ಪ್ರೌಢಶಾಲಾ ಮೈದಾನದಲ್ಲಿ ಶಿರಹಟ್ಟಿ ತಾಲೂಕು 3ನೇ ಸಾಹಿತ್ಯ ಸಮ್ಮೇಳನ ಏರ್ಪಡಿಸಿದೆ. ಫೆ. 19ರಂದು ಬೆಳಗ್ಗೆ 7.30ಕ್ಕೆ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಶಾಸಕ ರಾಮಕೃಷ್ಣ ದೊಡ್ಡಮನಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಕಸಾಪದ ಜಿಲ್ಲಾಧ್ಯಕ್ಷ ಡಾ. ಶಿವಪ್ಪ ಕುರಿ ಪರಿಷತ್ತಿನ ಧ್ವಜಾರೋಹಣ ನೆರವೇರಿಸುವರು.
ಬೆಳಗ್ಗೆ 8ಕ್ಕೆ ತಾಯಿಭುವನೇಶ್ವರಿ ದೇವಿ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದ್ದು, ಜಿಪಂ ಅಧ್ಯಕ್ಷೆ ಕಮಲಮ್ಮ ಸಜ್ಜನರ ಉದ್ಘಾಟಿಸುವರು. ತಾಪಂ ಸದಸ್ಯ ಶಿವನಗೌಡ ಕಂಠಿಗೌಡ್ರ ಚಾಲನೆ ನೀಡುವರು. ಹೆಬ್ಬಾಳ ಗ್ರಾಪಂ ಅಧ್ಯಕ್ಷೆ ಮೈತ್ರಾ ಉಡಚಣ್ಣವರ ಅಧ್ಯಕ್ಷತೆ ವಹಿಸಲಿದ್ದು, ಬಸಣ್ಣ ಮುಂಡವಾಡ, ಪ್ರಕಾಶಗೌಡ ತೆಗ್ಗಿನಮನಿ, ಗ್ರಾಪಂ ಉಪಾಧ್ಯಕ್ಷ ಇಮಾಮಸಾಬ ಹಾರೋಗೇರಿ ಉಪಸ್ಥಿತರಿರುವರು.
ಬೆಳಗ್ಗೆ 9.30ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವಾ ಉದ್ಘಾಟಿಸಲಿದ್ದು, ಫಕೀರೇಶ್ವರ ಸಂಸ್ಥಾನ ಮಠದ ಜ. ಫಕೀರ ಸಿದ್ಧರಾಮ ಶ್ರೀಗಳು ಸಾನ್ನಿಧ್ಯ ವಹಿಸುವರು. ಬಾಲೇಹೊಸೂರ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಶ್ರೀಗಳು ನೇತೃತ್ವ ವಹಿಸುವರು. ಹೆಬ್ಬಾಳದ ಸಣ್ಣಹಾಲಸ್ವಾಮಿಗಳು ಉಪಸ್ಥಿತರಿರುವರು.
ಮುಂಡರಗಿಯ ಕರ್ನಾಟಕ ಜಾನಪದ ಕಲಾ ತಂಡದಿಂದ ನಾಡಗೀತೆ, ರೈತಗೀತೆ ಕೇಳಿಬರಲಿದೆ. ಸಮ್ಮೇಳನಾಧ್ಯಕ್ಷ ಜಿ.ಎಂ. ಶಿರಹಟ್ಟಿ ಅವರಿಂದ ಸಮ್ಮೇಳನಾಧ್ಯಕ್ಷರ ನುಡಿ, ನಿಕಟಪೂರ್ವ ಅಧ್ಯಕ್ಷರ ನುಡಿ ಹಾಗೂ ಶಾಸಕ ರಾಮಕೃಷ್ಣ ದೊಡ್ಡಮನಿ ಅವರಿಂದ ಸ್ಮರಣ ಸಂಚಿಕೆ ಬಿಡುಗಡೆ, ಜಿಪಂ ಅಧ್ಯಕ್ಷೆ ಕಮಲಮ್ಮ ಸಜ್ಜನರ ಅವರಿಂದ ವಿವಿಧ ಲೇಖಕರ ಗ್ರಂಥ ಬಿಡುಗಡೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ತಾಲೂಕು ದರ್ಶನ ನಡೆಯಲಿದ್ದು, ಪ್ರೊ. ಎಸ್.ಬಿ. ಕರಿಭರಮಗೌಡ್ರ ಅಧ್ಯಕ್ಷತೆ ವಹಿಸುವರು. ಆರ್.ಬಿ. ಬನ್ನೂರ, ವೈ.ಎನ್. ಗೌಡರ ಅವರಿಂದ ತಾಲೂಕಿನ ಸಾಹಿತ್ಯಿಕ, ಸಾಂಸ್ಕೃತಿಕ ಪರಂಪರೆ ಹಾಗೂ ಕೃಷಿ ಮತ್ತು ನೀರಾವರಿ ಕುರಿತು ಉಪನ್ಯಾಸ ಜರುಗಲಿದೆ.
ಮಧ್ಯಾಹ್ನ 1.30ಕ್ಕೆ ಮಹಿಳಾ ಗೋಷ್ಠಿ ನಡೆಯಲಿದ್ದು, ಕದಳಿ ಮಹಿಳಾ ವೇದಿಕೆ ಜಿಲ್ಲಾಧ್ಯಕ್ಷೆ ಪ್ರೇಮಕ್ಕ ಬಿಂಕದಕಟ್ಟಿ ಅಧ್ಯಕ್ಷತೆ ವಹಿಸುವರು. ಸಾವಿತ್ರಿ ಮುಜುಮದಾರ ರೈತ ಮಹಿಳೆಯರ ಸಮಸ್ಯೆಗಳು ಹಾಗೂ ಸವಾಲುಗಳ ಕುರಿತು ಉಪನ್ಯಾಸ ನೀಡುವರು. ಜಯಲಕ್ಷ್ಮೀ ಗಡ್ಡದೇವರಮಠ, ಜಯಶ್ರೀ ಬಿ.ಗುಡಿ, ಮಾಲತಿ, ಸರಸ್ವತಿ ಹೊನ್ನೇಗೌಡ್ರ ಉಪಸ್ಥಿತರಿರುವರು.
ಮಧ್ಯಾಹ್ನ 3ಕ್ಕೆ ಕವಿತಾ ವಿಹಾರ ಕಾರ್ಯಕ್ರಮ ನಡೆಯಲಿದ್ದು, ಅಂದಾನಪ್ಪ ವಿಭೂತಿ ಅಧ್ಯಕ್ಷತೆ ವಹಿಸಲಿದ್ದಾರೆ. 4.30ಕ್ಕೆ ಬಹಿರಂಗ ಅಧಿವೇಶನ ನಡೆಯಲಿದ್ದು, ಬೆಳ್ಳಟ್ಟಿ ರಾಮಲಿಂಗೇಶ್ವರ ಮಠದ ಬಸವರಾಜ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದು, ತಾಲೂಕು ಕಸಾಪ ಅಧ್ಯಕ್ಷ ಕೆ.ಎ. ಬಳಿಗೇರ ಅಧ್ಯಕ್ಷತೆ ವಹಿಸಲಿದ್ದಾರೆ. ನಂತರ ಸನ್ಮಾನ ಕಾರ್ಯಕ್ರಮ ಜರುಗಲಿದೆ. ಸಂಜೆ 6ಕ್ಕೆ ಸಮಾರೋಪ ಸಮಾರಂಭ ಜರುಗಲಿದ್ದು, ಸುಜ್ಞಾನದೇವ ಶಿವಾಚಾರ್ಯ ಶ್ರೀಗಳು ಸಾನ್ನಿಧ್ಯ ವಹಿಸುವರು. ವಿಮಲರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯ ಶ್ರೀಗಳು ನೇತೃತ್ವ ವಹಿಸಲಿದ್ದಾರೆ. ಶಾಸಕ ರಾಮಕೃಷ್ಣ ದೊಡ್ಡಮನಿ ಅಧ್ಯಕ್ಷತೆ ವಹಿಸುವರು. ಸಂಜೆ 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿದ್ದು, ಜಿಪಂ ಮಾಜಿ ಸದಸ್ಯ ಶಿವಪ್ರಕಾಶ ಮಹಾಜನಶೆಟ್ಟರ್ ಉದ್ಘಾಟಿಸುವರು. ವಿಶ್ವಚೇತನ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಎನ್.ಆರ್. ಕುಲಕರ್ಣಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.