ಗದಗ

ಎಪಿಎಂಸಿ: ಸದಸ್ಯ ಸ್ಥಾನಕ್ಕೆ ಉಪಚುನಾವಣೆ

Published On :

ಗದಗ: ಜಿಲ್ಲೆಯ ಮುಂಡರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕೃಷಿ ಹುಟ್ಟುವಳಿ ಸಂಸ್ಕರಣ ಸಹಕಾರ ಸಂಘದ ಕ್ಷೇತ್ರದಿಂದ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ಜರುಗಿಸಲು ಸರ್ಕಾರವು ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಅವರು ಚುನಾವಣಾ ವೇಳಾಪಟ್ಟಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದ್ದಾರೆ.
ಈ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಇದರ ಅನ್ವಯ ನಾಮಪತ್ರ ಸಲ್ಲಿಸಲು ಫೆ. 22 ಕೊನೆಯ ದಿನ. ಫೆ. 24ರ ಬೆಳಗ್ಗೆ 11ಕ್ಕೆ ನಾಮಪತ್ರ ಪರಿಶೀಲನೆ. ಫೆ. 26 ಉಮೇದುವಾರಿಕೆ ಹಿಂತೆಗೆದುಕೊಳ್ಳುವ ಕೊನೆಯ ದಿನ. ಮಾ. 9ರಂದು ಮತದಾನ. ಮತ ಎಣಿಕೆ ಮಾ. 11ರಂದು ಜರುಗಿಸಲಾಗುವುದು. ಈ ಮುಂಡರಗಿಯ ಉಪಚುನಾವಣೆ ತಹಸೀಲ್ದಾರರನ್ನು ಚುನಾವಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಮುಂಡರಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ನಾಮಪತ್ರ  ಸ್ವೀಕರಿಸಲಾಗುವುದು. ಸ್ಪರ್ಧಿಸುವವರು ಈ ಚುನಾವಣಾ ತಿಳಿವಳಿಕೆ ಪತ್ರ ಪ್ರಕಟವಾದ ದಿನಾಂಕ ಫೆ. 15ರಿಂದ 22ರ ವರೆಗೆ ಸಾರ್ವಜನಿಕ ರಜೆ ದಿನಗಳನ್ನು ಹೊರತುಪಡಿಸಿ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ಒಳಗೆ ಚುನಾವಣಾಧಿಕಾರಿಗಳು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಮುಂಡರಗಿ ಇವರಿಗೆ ನಾಮಪತ್ರ ಸಲ್ಲಿಸಬಹುದು.
ಅಬ್ಬಿಗೇರಿ ಕೃಷಿಕ ಕ್ಷೇತ್ರ: ಜಿಲ್ಲೆಯ ರೋಣ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಕೇಂದ್ರ ಸ್ಥಾನ ಹೊಳೆಆಲೂರು) 10-ಅಬ್ಬಿಗೇರಿ ಕೃಷಿಕ ಕ್ಷೇತ್ರದಿಂದ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯನ್ನು ಜರುಗಿಸಲು ಸರ್ಕಾರವು ನೀಡಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಚುನಾವಣಾ ವೇಳಾಪಟ್ಟಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದ್ದಾರೆ. ಈ ಸ್ಥಾನ ಹಿಂದುಳಿದ ಬ ವರ್ಗಕ್ಕೆ ಮೀಸಲಾಗಿದೆ. ನಾಮಪತ್ರ ಸಲ್ಲಿಸಲು ಫೆ. 22ಕೊನೆಯ ದಿನ. ಫೆ. 24ಕ್ಕೆ ನಾಮಪತ್ರ ಪರಿಶೀಲನೆ. ಫೆ. 26 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ. ಮಾ. 9ರಂದು ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಮತದಾನ.  ಮಾ. 11ಕ್ಕೆ ಮತಗಳ ಎಣಿಕೆ. ಈ ಉಪಚುನಾವಣೆಗೆ ರೋಣ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರನ್ನು ಚುನಾವಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ನಾಮಪತ್ರಗಳನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ರೋಣದಲ್ಲಿ(ಕೇಂದ್ರ ಸ್ಥಾನ ಹೊಳೆಆಲೂರು) ಸ್ವೀಕರಿಸಲಾಗುವುದು. ಸ್ಪರ್ಧಿಸುವವರು ಈ ಚುನಾವಣಾ ತಿಳಿವಳಿಕೆ ಪತ್ರ ಪ್ರಕಟವಾದ ದಿನಾಂಕದಿಂದ ಅಂದರೆ ಫೆ. 15ರಿಂದ 22ರ ವರೆಗೆ ರಜೆ ದಿನ ಹೊರತುಪಡಿಸಿ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ಚುನಾವಣಾಧಿಕಾರಿಗಳು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ರೋಣ ಇವರಿಗೆ ನಾಮಪತ್ರ ಸಲ್ಲಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.