ಗದಗ

ಬೋಧಕ-ಬೋಧಕೇತರ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ

Published On :

ಶಿರಹಟ್ಟಿ: ಇತಿಹಾಸ ಎಂಬುದು ಮಾನವನಿಗೆ ಅತ್ಯಗತ್ಯವಾಗಿದೆ. ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗರಾಜ ಲಕ್ಕುಂಡಿ ಹೇಳಿದರು.
ಸೋಮವಾರ ಪಟ್ಟಣದ ಜಗದ್ಗುರು ಫಕ್ಕಿರೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ ಏರ್ಪಡಿಸಿದ್ದ ಪಠ್ಯ, ಪಠ್ಯೇತರ ಸಂಬಂಧಿತ ಕಾರ್ಯಾಗಾರ, ವಿಚಾರಗೋಷ್ಠಿ ಹಾಗೂ ಜಿಲ್ಲಾ ಮಟ್ಟದ ಬೋಧಕ-ಬೋಧಕೇತರ ಸಿಬ್ಬಂದಿಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶಿ ಕೃಷಿ ಪದ್ಧತಿ, ಸಂಸ್ಕೃತಿ, ಸಾಮಾಜಿಕ ಜೀವನ, ಸ್ತ್ರೀಯರ ಸ್ಥಾನಮಾನ ಕುರಿತು ತಿಳಿಯಲು ಇತಿಹಾಸ ಜ್ಞಾನ ಅಗತ್ಯ. ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾಗಬೇಕು ಎಂದರು.
ವಿದ್ಯಾರ್ಥಿಗಳಿಂದ ಮನವಿ: ಕಾಲೇಜಿನಲ್ಲಿ ಕನ್ನಡ, ಇತಿಹಾಸ, ಅರ್ಥಶಾಸ್ತ್ರ, ಇಂಗ್ಲಿಷ್ ವಿಷಯಗಳ ಕಾಯಂ ಉಪನ್ಯಾಸಕರು, ದೈಹಿಕ ಶಿಕ್ಷಕ, ಗ್ರಂಥಪಾಲಕ, ಬೆರಳಚ್ಚುಗಾರರ ಹುದ್ದೆಗಳು ಖಾಲಿ ಇವೆ. ವಿದ್ಯಾರ್ಥಿಗಳ ಓದಿಗೆ ತೀವ್ರ ಹಿನ್ನಡೆಯಾಗುತ್ತಿದೆ. ಬಿಕಾಂ ಪದವಿ ಕೋರ್ಸ್ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಬೇಕು. 350ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬಿಎ, ಬಿಬಿಎ ಪದವಿಗಳಲ್ಲಿ ಅಭ್ಯಸಿಸುತ್ತಿದ್ದಾರೆ. ಇವರಿಗೆ ಸರಿಯಾಗಿ ಕುಳಿತುಕೊಂಡು ಅಭ್ಯಸಿಸಲು ಕೊಠಡಿಗಳಿಲ್ಲ. ಕಾಲೇಜು ಆರಂಭವಾದಾಗಿನಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ. ಉತ್ತಮ ಫಲಿತಾಂಶ ಕೂಡ ಬರುತ್ತಿದ್ದು, ಎಲ್ಲ ಸೌಲಭ್ಯ ಕಲ್ಪಿಸಿಕೊಡುವಂತೆ ಪಟ್ಟಣ ಪಂಚಾಯಿತಿ           ಅಧ್ಯಕ್ಷ ನಾಗರಾಜ ಲಕ್ಕುಂಡಿ ಅವರಿಗೆ ಮನವಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ವಿ.ಪಿ. ಸವೋರೆಕರ, ಪಪಂ ಸದಸ್ಯ ಸಂತೋಷ ಕುರಿ, ಉಪನ್ಯಾಸಕ ಎಲ್.ಎನ್. ಕಿಲ್ಲೇದಾರ್ ಮಾತನಾಡಿದರು.
ಪ್ರೊ. ಅನುಪಮಾ, ಪ್ರೊ. ಪಂಪಾಪತಿರೆಡ್ಡಿ ಪಿ. ಪಾಟೀಲ, ಪ್ರೊ. ಸತ್ತಾರ ಬಡೇಖಾನ್ನವರ, ಪ್ರೊ. ಎಸ್.ಎನ್. ಮೂರಶಿಳ್ಳಿ ಕಾರ್ಯಕ್ರಮದಲ್ಲಿ ಇದ್ದರು. ರುಕ್ಸಾನಾಬೇಗಂ ಅಂಕಲಿ ಸ್ವಾಗತಿಸಿದರು. ಡಾ. ಎಸ್.ಡಿ. ಶಂಕರ ನಿರೂಪಿಸಿದರು. ಮಹೇಶ ಹೊನ್ನಪ್ಪನವರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.