ಗದಗ

ನಾಳೆ ಕನಕದಾಸರ ಕಂಚಿನ ಪುತ್ಥಳಿ ಅನಾವರಣ

Published On :

ಗದಗ: ಗದಗ ತಾಲೂಕು ಕುರುಬರ ಸಂಘದ ವತಿಯಿಂದ ದಾಸವರೇಣ್ಯ ಕನಕದಾಸರ ಕಂಚಿನ ಪುತ್ಥಳಿ ಅನಾವರಣ ಸಮಾರಂಭ ಫೆ. 22ರಂದು ಮಧ್ಯಾಹ್ನ 4.30ಕ್ಕೆ ನಗರದ ಕನಕ ಭವನದ ಆವರಣದಲ್ಲಿ ಏರ್ಪಡಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಕನಕದಾಸರ ಕಂಚಿನ ಪುತ್ಥಳಿಯನ್ನು ಉದ್ಘಾಟಿಸುವರು. ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಅವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಗದಗ ತಾಲೂಕು ಕುರುಬರ ಸಂಘದ ಅಧ್ಯಕ್ಷ ಫಕೀರಪ್ಪ ಹೆಬಸೂರ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ, ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸಹಕಾರ ಸಚಿವ ಎಚ್.ಎಸ್. ಮಹಾದೇವಪ್ರಸಾದ, ಅಬಕಾರಿ ಸಚಿವ ಸತೀಶ ಜಾರಕಿಹೊಳಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಸೇರಿದಂತೆ ಸಂಸದರು, ವಿಧಾನಸಭೆ ಹಾಗೂ ವಿಪ ಸದಸ್ಯರು, ಜಿಪಂ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ತಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಆಗಮಿಸುವರು. ಅಂದು ಸಂಜೆ 5ಕ್ಕೆ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ಸಭೆ ಜರುಗುವುದು ಎಂದು ಪ್ರಕಟಣೆ ತಿಳಿಸಿದೆ.
ನಾಳೆ ವಾರ್ಷಿಕ ಸ್ನೇಹ ಸಮ್ಮೇಳನ
ಮುಂಡರಗಿ: ಸ್ಥಳೀಯ ಎಸ್‌ಎಫ್‌ಎಸ್ ಶಾಲೆಯ 13ನೇ ವಾರ್ಷಿಕ ಸ್ನೇಹ ಸಮ್ಮೇಳನ ಫೆ. 22ರಂದು ಸಂಜೆ 5.30ಕ್ಕೆ ಶಾಲಾ ಆವರಣದಲ್ಲಿ ಜರುಗಲಿದೆ.
ಸೌತ್ ವೇಸ್ಟ್ ಇಂಡಿಯಾ ಪ್ರಾವೀನ್ಸ್ ಪ್ರಾದೇಶಿಕ ಶಿಕ್ಷಣ ಪರಿವೀಕ್ಷಕ ಡಾ. ಹೇರಾಲ್ಡ್ ಕ್ರೀಸ್ಟೋಪರ್ ಕ್ರಾಸ್ತಾ ಅಧ್ಯಕ್ಷತೆ ವಹಿಸುವರು. ನ್ಯಾಯಾಧೀಶ ವಿಜಯಕುಮಾರ ಕಣ್ಣೂರ ಆಗಮಿಸಲಿದ್ದಾರೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.