ಗದಗ

ಪ್ರತಿಭೆ ಗುರುತಿಸಿ: ಡಾ. ವರ್ಧನ

Published On :

ಲಕ್ಷ್ಮೇಶ್ವರ: ಪ್ರತಿಯೊಂದು ಮಗುವಿನಲ್ಲಿರುವ ಪ್ರತಿಭೆಯನ್ನು ಗುರುತಿಸಿ ಹೊರತರುವ ಕಾರ್ಯವನ್ನು ಶಿಕ್ಷಕರು, ಪಾಲಕರು ಹಾಗೂ ಶಿಕ್ಷಣಾಧಿಕಾರಿಗಳು ಮಾಡಬೇಕಾಗಿದೆ ಎಂದು ಧಾರವಾಡ ಜಿಲ್ಲಾ ಶಿಕ್ಷಣ ಉಪನಿರ್ದೇಶಕ ಡಾ. ಬಿ.ಕೆ.ಎಸ್. ವರ್ಧನ ಅಭಿಪ್ರಾಯಪಟ್ಟರು.
ಇತ್ತೀಚೆಗೆ ಪಟ್ಟಣದ ಚಂದನ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಮಕ್ಕಳ ಪ್ರತಿಭೆಯನ್ನು ಬೆಳಕಿಗೆ ತರುವ ಕಾರ್ಯವನ್ನು ವಾರ್ಷಿಕೋತ್ಸವದಂತಹ ಕಾರ್ಯಕ್ರಮಗಳು ಮಾಡುತ್ತಿರುವುದು ಶ್ಲಾಘನೀಯ. ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿ ವಿಶೇಷವಾದ ಪ್ರತಿಭೆ ಹೊಂದಿರುವ ಮಕ್ಕಳನ್ನು ಗುರುತಿಸಿ ಅವರ ಪ್ರತಿಭೆಯನ್ನು ರಾಜ್ಯದ ತುಂಬಾ ಅನಾವರಣ ಮಾಡುವ ಕಾರ್ಯವನ್ನು ಇಲಾಖೆ ಮಾಡುತ್ತಿದೆ. ಬೆಂಗಳೂರಿನಲ್ಲಿ ಪಟ್ಟಣದ ಚಂದನ ಶಾಲೆಯ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಈ ಬಾರಿ ಅವಕಾಶ ಒದಗಿಸಿಕೊಡುವ ಕಾರ್ಯವನ್ನು ಇಲಾಖೆಯಿಂದ ಮಾಡಲಾಗುವುದು ಎಂದರು.
ಮನೋಜ ಪಾಟೀಲ ಮಾತನಾಡಿ, ಮಕ್ಕಳು ಮಣ್ಣಿನ ಮುದ್ದೆಯಂತೆ ನಾವು ಅವರನ್ನು ಯಾವ ಆಕಾರಕ್ಕೆ ಬೇಕೋ ಹಾಗೆ ಮಾಡುವ ಕಾರ್ಯವನ್ನು ನಾವು ಮಾಡಬೇಕಾಗಿದೆ. ಮುಂದಿನ 20 ವರ್ಷಗಳಲ್ಲಿ ಭಾರತ ದೇಶವನ್ನು ಉತ್ತುಂಗಕ್ಕೆ ಒಯ್ಯುವ ಶಕ್ತಿ ವಿದ್ಯಾರ್ಥಿಗಳು ಹಾಗೂ ಯುವ ಜನತೆಯಲ್ಲಿದೆ ಎಂದರು.
ವಾರ್ಷಿಕೋತ್ಸವದಲ್ಲಿ ಕವಿವಿಯ ನಿವೃತ್ತ ಡೆಪ್ಯೂಟಿ ರಜಿಸ್ಟ್ರಾರ್ ಟಿ.ಎಫ್. ನಾಗಾವಿ, ಸಂಸ್ಥಾಪಕ ಟಿ. ಈಶ್ವರ, ಆಡಳಿತಾಧಿಕಾರಿ ಎಚ್.ಸಿ. ರಟಗೇರಿ, ಮುಖ್ಯೋಪಾಧ್ಯಾಯ ಚಂದ್ರಹಾಸ ಪಟಗಾರ ಮುಂತಾದವರು ಉಪಸ್ಥಿತರಿದ್ದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿಕ್ರಂ ಗುಡಿಮನಿ ಪ್ರಾಸ್ತಾವಿಕ ಮಾತನಾಡಿದರು. ಪ್ರೀತಿ ಗುಮಾಸ್ತೆ ಶಾಲೆ ವರದಿ ವಾಚಿಸಿದರು. ನಿಶ್ಚಿತ್ ಸ್ವಾಗತಿಸಿದರು. ನಿಖಿಲ್ ಸಂಕನಗೌಡರ ಹಾಗೂ ಸ್ಫೂರ್ತಿ ನಿರೂಪಿಸಿದರು. ಕಾವ್ಯಾ ಮೂಲಿಮನಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.