ಇಂದು ವಿವಿಧ ಕಾಮಗಾರಿಗೆ ಸಿಎಂ ಚಾಲನೆ
ರೋಣ: ಫೆ. 22ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣಕ್ಕೆ ಆಗಮಿಸುತ್ತಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಲಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಅವರು ಶುಕ್ರವಾರ ಸಾಯಂಕಾಲ ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೈಟೆಕ್ ಬಸ್ ನಿಲ್ದಾಣ, ನರೇಗಲ್ ಪಟ್ಟಣದಲ್ಲಿ ಬಸ್ ನಿಲ್ದಾಣದ ನೂತನ ವಾಣಿಜ್ಯ ಮಳಿಗೆ ಉದ್ಘಾಟನೆ, ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಬಾಲಕಿಯರ ವಸತಿ ನಿಲಯ ಉದ್ಘಾಟನೆ ಕಾರ್ಯಕ್ರಮ ಜರುಗಲಿದೆ ಎಂದರು. ಮುನವಳ್ಳಿ-ಕೋಟುಮಚಗಿ ರಾಜ್ಯ ಹೆದ್ದಾರಿ 83ರ 106.70ರಿಂದ 107.30 ರ ವರೆಗೆ (ರೋಣ ಪಟ್ಟಣದ ಪರಿಮಿತಿಯಲ್ಲಿ) ರಸ್ತೆ ಸುಧಾರಣೆ ಹಾಗೂ ಅಗಲೀಕರಗೊಳಿಸುವ ಕಾಮಗಾರಿಗೆ ಶಂಕುಸ್ಥಾಪನೆ, ತಾಲೂಕಿನ ರೋಣ -ಜಕ್ಕಲಿ -ನರೇಗಲ್ ಜಿಲ್ಲಾ ಮುಖ್ಯ ರಸ್ತೆಯ ರೋಣದಿಂದ 15 ಕಿ.ಮೀ. ವರೆಗಿನ ಆಯ್ದ ಭಾಗಗಳನ್ನು ಕೇಂದ್ರ ರಸ್ತೆ ನಿಧಿ (ಸಿಆರ್ಎಫ್) ಅಡಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಂಕುಸ್ಥಾಪನೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ರೋಣ ಬಿಇಒ ಕಚೇರಿ ಕಟ್ಟಡ ಶಂಕುಸ್ಥಾಪನೆ, ಪಟ್ಟಣದ ಸರ್ಕಾರಿ ಪ್ರೌಢಶಾಲೆಗೆ ಆರ್ಎಂಎಸ್ಸಿ ಅಡಿಯಲ್ಲಿ ಮಂಜೂರಾದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಪಟ್ಟಣದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು ಎಂದರು. ಬಳಿಕ ಪಟ್ಟಣದ ರಾಜೀವ ಗಾಂಧಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜರುಗುವ ಗದಗ ಜಿಲ್ಲಾ 6ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ರೈತರಿಗೆ ಸರ್ಕಾರದ ವತಿಯಿಂದ ಬಡ್ಡಿರಹಿತ ಸಾಲದ ಚೆಕ್ ವಿತರಣೆ ಮತ್ತು ಸ್ವಸಹಾಯ ಗುಂಪುಗಳಿಗೆ ಶೇ. 4ರ ಬಡ್ಡಿದರದಲ್ಲಿ ಸಹಾಯಧನದ ಚೆಕ್ ವಿತರಣೆ ಮಾಡುವರು ಎಂದು ಶಾಸಕ ಪಾಟೀಲ್ ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಕೆ.ಸಿ. ಬ್ಯಾಂಕ್ ಅಧ್ಯಕ್ಷ ಐ.ಎಸ್. ಪಾಟೀಲ್, ವಿ.ಬಿ. ಸೋಮನಕಟ್ಟಿಮಠ, ವಿ.ಆರ್. ಗುಡಿಸಾಗರ, ಮಿಥುನ ಪಾಟೀಲ, ದಶರಥ ಗಾಣಿಗೇರ, ನರೇಗಲ್ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಬಸನಗೌಡ ಪಾಟೀಲ, ವೀರಣ್ಣ ಸೊನ್ನದ, ಪಿ.ಬಿ. ಅಳಗವಾಡಿ, ವೀರಣ್ಣ ಶೆಟ್ಟರ, ಪ್ರಭು ಮೇಟಿ, ಸಂಗು ನವಲಗುಂದ, ಲಕ್ಷ್ಮಣ ಗೌಡನ್ನವರ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

