ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ದೊಡ್ಡಮನಿ
ಮುಂಡರಗಿ: ಗುತ್ತಿಗೆದಾದರರು ಸರ್ಕಾ ರ ನಿಗದಿ ಮಾಡಿದ ಸಮಯದಲ್ಲಿಯೇ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು. ಅವರು ಶುಕ್ರವಾರ ತಾಲೂಕಿನ ಕೊರ್ಲಹಳ್ಳಿ ತುಂಗಭದ್ರಾ ನದಿದಂಡೆ ರು. 57.50 ಲಕ್ಷ ವೆಚ್ಚದಲ್ಲಿ ಜಾಕ್ವೆಲ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಶಿರಹಟ್ಟಿ ಮತಕ್ಷೇತ್ರದ ಎಲ್ಲ ಭಾಗಗಳಲ್ಲಿಯೂ ಅನೇಕ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಮುಂಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ವಸತಿ ಹೀನರಿಗೆ ಮನೆಗಳು ಸೇರಿದಂತೆ ಇನ್ನೂ ಹೆಚ್ಚಿನ ಕಾಮಗಾರಿಗಳಿಗೆ ಒತ್ತು ನೀಡುವುದಾಗಿ ತಿಳಿಸಿದರು. ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಮಾತನಾಡಿದರು. ಧ್ರುವಕುಮಾರ ಹೊಸಮನಿ, ಎಸ್.ವಿ. ಪಾಟೀಲ, ಶೇಖರಾಜ ಹೊಸಮನಿ, ಸೊಲಬಣ್ಣ ಜೋಬಾಳಿ, ಕೊರ್ಲಹಳ್ಳಿ ಗ್ರಾಪಂ ಅಧ್ಯಕ್ಷ ಪರಶುರಾಮ ಕಿಳ್ಳಿಕ್ಯಾತರ, ಲಕ್ಷ್ಮಣ ಕಾಗನೂರ, ಬಸಪ್ಪ ಹುಲಿಕಟ್ಟಿ, ಹನುಮಪ್ಪ ಡೊಳ್ಳಿನ, ತೋಟಪ್ಪ ಲಿಂಬಿಕಾಯಿ, ಹನುಮಪ್ಪ ಕಾಗನೂರ, ಜಿಪಂ ಎಂಜಿನಿಯರಿಂಗ್ ಇಲಾಖೆ ಅಧಿಕಾರಿ ಎಸ್. ಪ್ರಭಾಕರ, ಎಚ್.ಬಸವರಾಜ ಸೇರಿದಂತ ಅನೇಕರು ಉಪಸ್ಥಿತರಿದ್ದರು.
ಇಂದು ಸಾಮೂಹಿಕ ವಿವಾಹ
ರೋಣ: ತಾಲೂಕಿನ ಮೆಣಸಗಿಯಲ್ಲಿ ಶರಣ ಬಸವೇಶ್ವರ ಪುರಾಣ ಸಂಸ್ಥೆಯಿಂದ ಕಲಬುರ್ಗಿ ಶರಣಬಸವೇಶ್ವರರ 32ನೇ ವರ್ಷದ ಪುರಾಣ ಮಂಗಲೋತ್ಸವ, ಸರ್ವಧರ್ಮೀಯರ ಸಾಮೂಹಿಕ ವಿವಾಹ ಕಾರ್ಯಕ್ರಮ ಫೆ. 22ರ ಮಧ್ಯಾಹ್ನ 12.30ಕ್ಕೆ ನಡೆಯಲಿದೆ. ಸಾನ್ನಿಧ್ಯವನ್ನು ಬಳಗಾನೂರಿನ ಶಿವಶಾಂತವೀರ ಶರಣರು ವಹಿಸುವರು. ಗ್ರಾಮದ ಮುದಿಯಪ್ಪಯ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಎ.ಪಿ. ಕುಲಕರ್ಣಿ ವಹಿಸುವರು. ಮಾಜಿ ಸಚಿವ ಸಿ.ಸಿ. ಪಾಟೀಲ, ಹುಲ್ಲೂರಿನ ವೀರಯ್ಯಜ್ಜನವರು ಎಸ್.ಹಿರೇಮಠ, ಗದಗ ಜಿಲ್ಲಾ ಬಿಜೆಪಿ ಎಸ್ಟಿ ಘಟಕದ ಅಧ್ಯಕ್ಷ ಬಸವಂತಪ್ಪ ತಳವಾರ, ಸ್ಥಳೀಯ ಗಣ್ಯರಾದ ಟಿ.ಪಿ. ಕುಲಕರ್ಣಿ, ನಿವೃತ್ತ ಐಎಎಸ್ ಅಧಿಕಾರಿ ಜಿ.ವಿ. ಕೊಂಗವಾಡ, ಬಿ.ಬಿ. ಸಕ್ರಿ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಆರ್. ಹಿರೇಗೌಡರ ಅತಿಥಿಗಳಾಗಿ ಆಗಮಿಸುವರು. ಸಂಜೆ 6.30ಕ್ಕೆ ಧರ್ಮಸಭೆ ಹಾಗೂ ಶರಣಬಸವೇಶ್ವರ ಪುರಾಣ ಮಂಗಲೋತ್ಸವ ನಡೆಯಲಿದೆ. ಜುಕ್ತಿ ಹಿರೇಮಠದ ಡಾ. ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು, ಒಪ್ಪತ್ತೇಶ್ವರ ಮಠದ ಅಭಿನವ ಒಪ್ಪತ್ತೇಶ್ವರ ಮಹಾಸ್ವಾಮಿಗಳು ಸಾನ್ನಿಧ್ಯ, ಸ್ಥಳೀಯ ಮುದಿಯಪ್ಪಯ್ಯ ಮಹಾಸ್ವಾಮಿಗಳು ನೇತೃತ್ವವಹಿಸುವರು. ಡಾ. ಎ.ಪಿ. ಕುಲಕರ್ಣಿ ಅಧ್ಯಕ್ಷತೆ ವಹಿಸುವರು. ನಿಸರ್ಗ ತಜ್ಞ ಡಾ. ಎಚ್.ಟಿ. ಮಳಲಿ ಉಪನ್ಯಾಸಕರಾಗಿ ಆಗಮಿಸುವರು. ಜಮಖಂಡಿ ತಾಲೂಕಿನ ಸಿದ್ದಾಪುರದ ನೀಲಮ್ಮ ತಾಯಿಹಿರೇಮಠ ಪುರಾಣ ಪ್ರವಚನ ಮಾಡಲಿದ್ದಾರೆ. ಗದುಗಿನ ವೀರೇಶ್ವರ ಪುಣ್ಯಾಶ್ರಮದ ಬಸವರಾಜ ಎಚ್. ಅಮರಗೋಳ ಸಂಗೀತ ಸೇವೆ ನೀಡಲಿದ್ದಾರೆ. ಫಕೀರಪ್ಪ ಬಾಣದ ತಬಲಾ ಸಾಥ್ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

