ಸರ್ವ ವರ್ಗಕ್ಕೂ ಸಾಮಾಜಿಕ ನ್ಯಾಯ ನಮ್ಮ ಉದ್ದೇಶ
ಕನ್ನಡಪ್ರಭ ವಾರ್ತೆ, ಗದಗ, ಫೆ. 22
ಸರ್ವ ವರ್ಗಕ್ಕೂ ಸಾಮಾಜಿಕ ನ್ಯಾಯ ನಮ್ಮ ಉದ್ದೇಶವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಶನಿವಾರ ರಾತ್ರಿ ಗದಗ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಜರುಗಿದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಪ್ರಸಕ್ತ ಆಯವ್ಯಯದಲ್ಲಿ ಶಿಕ್ಷಣ ಕ್ಷೇತ್ರಕ್ಕಾಗಿ 21 ಸಾವಿರ ಕೋಟಿ ಹಣ ನೀಡಲಾಗಿದೆ. ಕಳೆದ ಸಾಲಿನಲ್ಲಿ 20 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ ಜಾರಿಗೊಳಿಸಲಾಗಿದ್ದು, ಮುಂದಿನ ವರ್ಷದಲ್ಲಿ 50 ಸಾವಿರ ವಿದ್ಯಾರ್ಥಿಗಳಿಗೆ ವಿಸ್ತರಿಸಲಾಗುವುದು. ರಾಜ್ಯದಲ್ಲಿ ಒಣ ಬೇಸಾಯ ಪದ್ಧತಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿ ರು. 500 ಕೋಟಿ ಮೀಸಲಿಡಲಾಗಿದೆ. ರಾಜ್ಯದ ಬಡ ಜನರ ಆರೋಗ್ಯಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುವುದು. ತಿಂಗಳ ಅವಧಿಯಲ್ಲಿ ರಾಜ್ಯದ ಜನತೆಯ ನಿರೀಕ್ಷೆಯಂತೆ ಕೆಲಸ ಮಾಡಿದ್ದೇನೆ. ವಿವಿಧ ಹಿಂದುಳಿದ ವರ್ಗಗಳ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಮಾತನಾಡಿ ಜಿಲ್ಲೆಯಲ್ಲಿ ಅಭಿವೃದ್ದಿ ಪರ್ವ ಪ್ರಾರಂಭವಾಗಿದೆ. ಸಾಮಾನ್ಯರ ಬದುಕಿನಲ್ಲಿ ಹೊಸ ವ್ಯಾಖ್ಯಾನ ಬರೆಯುವ ನಿಟ್ಟಿನಲ್ಲಿ ಸರ್ಕಾರ ಪ್ರಾಮುಖ್ಯತೆ ನೀಡುತ್ತದೆ. ಗದಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಮಾದರಿ ಯೋಜನೆ ಘೋಷಣೆ ಮಾಡುವಂತೆ ವಿನಂತಿಸಿದರು.
ಇದಕ್ಕೂ ಮೊದಲು ಸಿಎಂ ಮೆಡಿಕಲ್ ಕಾಲೇಜಿನ ಆಡಳಿತ ಕಚೇರಿ ಕಟ್ಟಡ, ಕವಿವಿಯ ಸ್ನಾತಕೋತ್ತರ ಕೇಂದ್ರ ಹಾಗೂ ಕನಕ ದಾಸರ ಕಂಚಿನ ಮೂರ್ತಿ ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಉಮಾಶ್ರೀ, ಸಲೀಂ ಅಹ್ಮದ, ಐ.ಜಿ. ಸನದಿ, ವೀರಣ್ಣ ಮತ್ತಿಕಟ್ಟಿ, ರಾಮಕೃಷ್ಣ ದೊಡ್ಡಮನಿ, ಬಿ.ಆರ್. ಯಾವಗಲ್ಲ, ಜಿಪಂ ಅಧ್ಯಕ್ಷ ಕಮಲವ್ವ ಸಜ್ಜನ, ಜಿ.ಎಸ್. ಗಡ್ಡದೇವರಮಠ, ಫಕ್ಕೀರಪ್ಪ ಹೆಬಸೂರ ಅಧ್ಯಕ್ಷತೆ ವಹಿಸಿದ್ದರು. ಮಹಾದೇವಪ್ಪ ರೊಳ್ಳಿ, ರವಿ ದಂಡೀನ ಮುಂತಾದವರು ಹಾಜರಿದ್ದರು ಕೆ.ಬಿ. ತಳಗೇರಿ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

