ಗದಗ

ಸಮರ್ಪಕ ನೀರು ಪೂರೈಕೆಗೆ ಆದ್ಯತೆ ನೀಡಿ

Published On :

ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಈಗಾಗಲೇ ಕುಡಿಯುವ ನೀರಿನ ಪೂರೈಕೆಯಲ್ಲಿ ವಿಳಂಬ, ಅವ್ಯವಸ್ಥೆಯಾಗುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ಈ ಕುರಿತು ಜಿಲ್ಲಾಡಳಿತ, ನಗರಸಭೆ ಸಂಬಂಧಿಸಿದ ಶಾಸಕ, ಸಚಿವರು ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ. ಈ ಹಿಂದೆ ಮಳೆಗಾಲವಿತ್ತು. ಅಗತ್ಯ ಪ್ರಮಾಣದಲ್ಲಿ ಮಳೆಯಾಗದೆ ಇದ್ದರೂ ಅಲ್ಪ ಪ್ರಮಾಣದಲ್ಲಿ ಜಿಲ್ಲೆಯಲ್ಲಿ ಮಳೆಯಾಗಿದ್ದರಿಂದ ಜಿಲ್ಲೆಯಲ್ಲಿರುವ ಕೆರೆ, ಹೊಂಡ, ನದಿ ಸೇರಿದಂತೆ ಕೊಳವೆಬಾವಿಗಳಲ್ಲಿ ಅಲ್ಪಪ್ರಮಾಣದ ನೀರು ನಿಂತು ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯ ಜನತೆಗೆ ಬೇಕಾದ ನೀರು ಪೂರೈಕೆ ಮಾಡಲಾಗುತ್ತಿತ್ತು. ಆದರೆ, ಈಗಾಗಲೇ ಬೇಸಿಗೆಯ ಕಾಲ ಪ್ರಾರಂಭವಾಗಿದೆ. ಅಲ್ಲದೆ, ಗದಗ-ಬೆಟಗೇರಿ ಅವಳಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದ ತುಂಗಭದ್ರಾ ನದಿಯು ಬರಿದಾಗುವ ಆತಂಕವಿದೆ. ಈಗಾಗಲೇ ತುಂಗಭದ್ರಾ ನದಿ ನೀರು ಮಲೀನಗೊಂಡಿರುವ ಕುರಿತು ಈಚೆಗೆ ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದೆ. ಜಿಲ್ಲಾಡಳಿತ ಈಚೆಗೆ ನಡೆಸಿದ ಸಾಮಾನ್ಯ ಸಭೆಯಲ್ಲಿ ಜಿಲ್ಲೆಯ ಜನತೆಗೆ ಬೇಕಾದ ಅಗತ್ಯ ಪ್ರಮಾಣದ ನೀರು ಪೂರೈಕೆಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂಬ ಹೇಳಿಕೆ ನೀಡಿರುವುದು ಅಭಿನಂದನಾರ್ಹವಾಗಿದೆ. ಈಗಷ್ಟೇ ಬೇಸಿಗೆ ಕಾಲ ಪ್ರಾರಂಭವಾಗಿದ್ದು,  ಹಲವೆಡೆ ಬೇಸಿಗೆ ಕಾಲದಲ್ಲಿ ಉಂಟಾಗುವ ನೀರಿನ ಅಭಾವವನ್ನು ತಡೆಯಲು ಹೆಚ್ಚಿನ ಕಾಳಜಿ ವಹಿಸಿ ಸಮರ್ಪಕ ನೀರು ಪೂರೈಕೆಗೆ ಆದ್ಯತೆ ನೀಡಲಿ.
- ದೇವಪ್ಪ ಬಡಿಗೇರ, ಕೋಟುಮಚಗಿ ನಿವಾಸಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.