ಅಂಬೇಡ್ಕರ ಭವನ ಶೀಘ್ರ ನಿರ್ಮಿಸಿ: ಆಗ್ರಹ
ಗದಗ: ಜಿಲ್ಲಾ ಕೇಂದ್ರದಲ್ಲಿ ನಿರ್ಮಿಸುತ್ತಿರುವ ಡಾ. ಬಿ.ಆರ್. ಅಂಬೇಡ್ಕರ ಭವನ ನಿರ್ಮಾಣ ಕಾಮಗಾರಿ ವಿಳಂಬವಾಗುತ್ತಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಂಡು ತ್ವರಿತವಾಗಿ ಭವನ ನಿರ್ಮಿಸಲು ಆಗ್ರಹಿಸಿ ಶನಿವಾರ ರಾತ್ರಿ ಸಿಎಂ ಸಿದ್ದರಾಮಯ್ಯಗೆ ಜೈ ಭೀಮ ಸೇನಾ ರಾಜ್ಯ ಸಂಘರ್ಷ ಸಮಿತಿ ಗದಗ ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಗದಗದ ಜಿಲ್ಲಾ ಕ್ಷೇಂದ್ರ ಸ್ಥಳದಲ್ಲಿ ಈ ಹಿಂದೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ನಾಮಾಂಕಿತದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಭವನದ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ, 4-5 ವರ್ಷ ಕಳೆಯುತ್ತ ಬಂದರೂ ಇದುವರೆಗೂ ಕಟ್ಟಡದ ಕಾಮಗಾರಿ ಮುಗಿದಿಲ್ಲ. ಈ ಕುರಿತಂತೆ ಶಾಸಕ, ಸಂಸದರಿಗೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಹತ್ತು ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ, ಶೀಘ್ರ ಈ ಕುರಿತು ಕ್ರಮಗೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಪರಾಪುರ, ರಾಜ್ಯ ಕಾರ್ಯದರ್ಶಿ ಅಶೋಕ ಹಾದಿಮನಿ, ವಿಜಯ ಕಲ್ಮನಿ, ದೀಪಕ ಕಲ್ಮನಿ, ಪರಶುರಾಮ ಸಂಗಾಪುರ, ಓಬಳೇಶ ಯಶವಂತಪುರ, ಜೋಸೆಫ್, ಮಂಜುನಾಥ ಪರಾಪುರ, ಹೇಮಂತ ಹುಬ್ಬಳ್ಳಿ, ಪರಶುರಾಮ ಸೀತಿಮನಿ, ಬಸವರಾಜ ಬದಾಮಿ, ಬಾಬು ಬಳ್ಳಾರಿ, ಶಂಕರ ಹುಬ್ಬಳ್ಳಿ, ವಿರೂಪಾಕ್ಷ ಸಂಗಾಪುರ, ಸಂಗಮೇಶ ತಳವಗೇರಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

